ದೆಹಲಿ ಪ್ರವಾಹ 
ದೇಶ

ದೆಹಲಿಯಲ್ಲಿ ಪ್ರವಾಹ: ಮಳೆ ನೀರಿನಲ್ಲಿ ಮುಳುಗಿ ಮೂರು ಮಕ್ಕಳು ಸಾವು

ದೆಹಲಿಯ ಈಶಾನ್ಯ ಜಿಲ್ಲೆಯ ಮುಕುಂದಪುರ ಪ್ರದೇಶದಲ್ಲಿ ಮಳೆ ನೀರಿನ ಸೆಳೆತಕ್ಕೆ ಸಿಲುಕಿ ಮೂವರು ಮಕ್ಕಳು ನೀರು ಪಾಲಾಗಿದ್ದಾರೆ. 

ದೆಹಲಿ: ದೆಹಲಿಯ ಈಶಾನ್ಯ ಜಿಲ್ಲೆಯ ಮುಕುಂದಪುರ ಪ್ರದೇಶದಲ್ಲಿ ಮಳೆ ನೀರಿನ ಸೆಳೆತಕ್ಕೆ ಸಿಲುಕಿ ಮೂವರು ಮಕ್ಕಳು ನೀರು ಪಾಲಾಗಿದ್ದಾರೆ. 

ದೆಹಲಿ ಪೊಲೀಸರ ಪ್ರಕಾರ, ಮಳೆಯ ನಂತರ ಶೇಖರಣೆಯಾದ ನೀರಿನಲ್ಲಿ ಸ್ನಾನ ಮಾಡಲು ಹೋದಾಗ ಮೂವರು ಮಕ್ಕಳು ನೀರಿನಲ್ಲಿ ಮುಳುಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮೂವರು ಮಕ್ಕಳ ಶವಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಮೂವರೂ ಮಕ್ಕಳ ವಯಸ್ಸು 12 ರಿಂದ 15 ವರ್ಷ ಎಂದು ಹೇಳಲಾಗುತ್ತಿದೆ.

ಮಧ್ಯಾಹ್ನ 3 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಮುಕುಂದಪುರದಲ್ಲಿ ಹೊಲವೊಂದು ನೀರಿನಿಂದ ತುಂಬಿತ್ತು. ಕಳೆದ ಕೆಲ ದಿನಗಳಿಂದ ಸುರಿದ ಮಳೆಯಿಂದ ಸಂಪೂರ್ಣ ಭರ್ತಿಯಾಗಿತ್ತು. ಇದರಲ್ಲಿ ಮೂವರು ಮಕ್ಕಳು ಸ್ನಾನಕ್ಕೆ ತೆರಳಿದ್ದರು. ನೀರಿನಲ್ಲಿ ಆಟವಾಡುತ್ತಿದ್ದ ಮೂವರೂ ಮಕ್ಕಳು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಮಾಹಿತಿ ಪಡೆದ ಪೊಲೀಸ್ ಪೇದೆಯೊಬ್ಬರು ಸ್ಥಳಕ್ಕೆ ಆಗಮಿಸಿ ನೀರಿಗೆ ಹಾರಿದರು, ಆದರೆ ಅಷ್ಟರಲ್ಲಿ ಮಕ್ಕಳು ಸಾವನ್ನಪ್ಪಿದ್ದರು.

ದೆಹಲಿಯಲ್ಲಿ ಯಮುನಾ ನೀರಿನ ಮಟ್ಟದಲ್ಲಿ ನಿರಂತರ ಹೆಚ್ಚಳದಿಂದಾಗಿ ನಿರ್ಣಾಯಕ ಪರಿಸ್ಥಿತಿ ಉದ್ಭವಿಸಿದೆ. ಆಗ್ನೇಯ, ಮಧ್ಯ ದೆಹಲಿ, ಪೂರ್ವ ದೆಹಲಿ, ಈಶಾನ್ಯ ದೆಹಲಿಯ ಹಲವು ಪ್ರದೇಶಗಳಲ್ಲಿ ಸುತ್ತಲೂ ನೀರೋ ನೀರು. ಒಟ್ಟಾರೆ, ದೆಹಲಿಯಲ್ಲಿ ಪ್ರವಾಹ ಪರಿಸ್ಥಿತಿ ಇದೆ. ಪ್ರವಾಹದಿಂದಾಗಿ ಯಮುನಾ ನದಿಯ ಮುಳುಗಡೆ ಪ್ರದೇಶಗಳಲ್ಲಿ ವಾಸಿಸುವ ಲಕ್ಷಾಂತರ ಜನರ ಜೀವನವು ಕೆಟ್ಟದಾಗಿ ಪರಿಣಾಮ ಬೀರಿದೆ. ಈ ಭಾಗಗಳ ರಸ್ತೆಗಳಲ್ಲಿ ನೀರು ನಿಂತಿದ್ದು ಜಲಾವೃತ ಮತ್ತು ಸಂಚಾರ ಸಮಸ್ಯೆಗಳು ತಲೆದೋರಿವೆ.

ಮತ್ತೊಂದೆಡೆ, ಫಿರೋಜ್ ಷಾ ಕೋಟ್ಲಾ ಕೋಟೆ, ಲೋಧಿ ಗಾರ್ಡನ್, ರಾಜ್ ಘಾಟ್, ಜಂತರ್ ಮಂತರ್, ಹಳೆಯ ಕೋಟೆ, ಕೆಂಪು ಕೋಟೆ, ಜಾಮಾ ಮಸೀದಿ ಮತ್ತು ಐಟಿಒ ಸೇರಿದಂತೆ ರಾಷ್ಟ್ರೀಯ ಝೂಲಾಜಿಕಲ್ ಪಾರ್ಕ್‌ನಂತಹ ಜನಪ್ರಿಯ ಪ್ರದೇಶಗಳಲ್ಲಿ ಟ್ರಾಫಿಕ್ ಜಾಮ್‌ ಪರಿಸ್ಥಿತಿ ನಿರ್ಮಾಣವಾಗಿದೆ. ಐಟಿಒ ಮುಖ್ಯರಸ್ತೆಯಲ್ಲಿ ನೀರು ನಿಂತಿರುವುದರಿಂದ ಜನರು ಸಂಚಾರಕ್ಕೆ ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

ಸಂಭಾಲ್ ದೇವಸ್ಥಾನದಿಂದ ಸಾಯಿಬಾಬಾ ವಿಗ್ರಹಕ್ಕೆ ಗೇಟ್ ಪಾಸ್! ಗಂಗಾ ನದಿಯಲ್ಲಿ ವಿಸರ್ಜನೆ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

SCROLL FOR NEXT