ಬೆಂಗಳೂರಿನಲ್ಲಿ ಜಿ20 ಹಣಕಾಸು ಸಚಿವರ ಸಭೆಯಲ್ಲಿ ನಿರ್ಮಲಾ ಸೀತಾರಾಮನ್ 
ದೇಶ

ಸೀತಾರಾಮನ್ ಅಧ್ಯಕ್ಷತೆಯಲ್ಲಿ ನಾಳೆ ಹಣಕಾಸು ಮಂತ್ರಿಗಳು, ಕೇಂದ್ರ ಬ್ಯಾಂಕ್ ಗವರ್ನರ್‌ಗಳ ಜಿ 20 ಸಭೆ

ಭಾರತ ಅಧ್ಯಕ್ಷತೆಯ ಜಿ-20 ಶೃಂಗಸಭೆ ಅಂಗವಾಗಿ ನಾಳೆ ಮತ್ತು ನಾಡಿದ್ದು ನಡೆಯಲಿರುವ ಮೂರನೇ ಜಿ 20 ಹಣಕಾಸು ಮಂತ್ರಿಗಳು ಮತ್ತು ಸೆಂಟ್ರಲ್ ಬ್ಯಾಂಕ್ ಗವರ್ನರ್‌ಗಳ ಸಭೆಗಳಲ್ಲಿ ಭಾಗವಹಿಸಲು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಗಾಂಧಿನಗರಕ್ಕೆ ಭೇಟಿ ನೀಡಿದರು.

ನವದೆಹಲಿ: ಭಾರತ ಅಧ್ಯಕ್ಷತೆಯ ಜಿ-20 ಶೃಂಗಸಭೆ ಅಂಗವಾಗಿ ನಾಳೆ ಮತ್ತು ನಾಡಿದ್ದು ನಡೆಯಲಿರುವ ಮೂರನೇ ಜಿ 20 ಹಣಕಾಸು ಮಂತ್ರಿಗಳು ಮತ್ತು ಸೆಂಟ್ರಲ್ ಬ್ಯಾಂಕ್ ಗವರ್ನರ್‌ಗಳ ಸಭೆಗಳಲ್ಲಿ ಭಾಗವಹಿಸಲು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಗಾಂಧಿನಗರಕ್ಕೆ ಭೇಟಿ ನೀಡಿದರು.

ಈ ಸಭೆ  ಹೊರತಾಗಿ ಕೆನಡಾ, ಇಂಡೋನೇಷ್ಯಾ, ಯುಎಸ್, ಯುರೋಪಿಯನ್ ಕಮಿಷನ್ ಮತ್ತು ಏಷ್ಯನ್ ಮೂಲಸೌಕರ್ಯ ಹೂಡಿಕೆ ಬ್ಯಾಂಕ್ (ಎಐಐವಿ) ಮತ್ತಿತರಗಳೊಂದಿಗೆ ದ್ವಿಪಕ್ಷೀಯ ಮಾತುಕತೆ ಜೊತೆಗೆ ಹೂಡಿಕೆದಾರರ ದುಂಡು ಮೇಜನ ಸಭೆ, ತೆರಿಗೆ ವಿಚಾರ ಸಂಕಿರಣದಲ್ಲಿ ನಿರ್ಮಲಾ ಸೀತಾರಾಮನ್ ಭಾಗವಹಿಸಲಿದ್ದಾರೆ. 

ಜಾಗತಿಕ ಆರ್ಥಿಕತೆ ಮತ್ತು ಅಂತರರಾಷ್ಟ್ರೀಯ ಹಣಕಾಸು ರೂಪುರೇಷೆ ಸೇರಿದಂತೆ ಹಲವಾರು ವಿಷಯಗಳ ಕುರಿತು ಸಭೆಯಲ್ಲಿ ಚರ್ಚಿಸಲಾಗುತ್ತದೆ. ನಿರ್ಮಲಾ ಸೀತಾರಾಮನ್ ಮತ್ತು ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ಜಂಟಿಯಾಗಿ ಮೂರನೇ ಜಿ-20  ಹಣಕಾಸು ಮಂತ್ರಿಗಳು ಮತ್ತು ಸೆಂಟ್ರಲ್ ಬ್ಯಾಂಕ್ ಗವರ್ನರ್‌ಗಳ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ.

ಫೆಬ್ರವರಿಯಲ್ಲಿ ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ಸ್ವೀಕರಿಸಿದ ಆದೇಶದ ಆಧಾರದ ಮೇಲೆ ವಿವಿಧ ಕೆಲಸದ ಗುರಿ ಸಾಧಿಸಲು ಮೂರನೇ ಜಿ-20 ಮೂರನೇ ಹಣಕಾಸು ಮಂತ್ರಿಗಳು ಮತ್ತು ಸೆಂಟ್ರಲ್ ಬ್ಯಾಂಕ್ ಗವರ್ನರ್ ಗಳ ಸಭೆಯಲ್ಲಿ ಪ್ರಮುಖ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಹಣಕಾಸು ಸಚಿವಾಲಯದ ಆರ್ಥಿಕ ವ್ಯವಹಾರಗಳ ಇಲಾಖೆ ಕಾರ್ಯದರ್ಶಿ ಅಜಯ್ ಸೇಠ್ ಕಳೆದ ವಾರ ಹೇಳಿದ್ದರು.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!