ದೇಶ

2024 'ಲೋಕ' ಸಮರಕ್ಕೆ ತಯಾರಿ: ಬೆಂಗಳೂರಿನಲ್ಲಿ ವಿಪಕ್ಷಗಳ ಡಿನ್ನರ್ ಸಭೆ

Srinivas Rao BV

ಬೆಂಗಳೂರು: ಬೆಂಗಳೂರಿನಲ್ಲಿ ಪ್ರತಿಪಕ್ಷಗಳ 2ನೇ ಸಭೆಗೆ ಚಾಲನೆ ದೊರೆತಿದ್ದು, ಡಿನ್ನರ್ ಸಭೆ ನಡೆದಿದೆ. ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಎಂಕೆ ಸ್ಟ್ಯಾಲಿನ್, ಅರವಿಂದ್ ಕೇಜ್ರಿವಾಲ್, ನಿತೀಶ್ ಕುಮಾರ್, ಲಾಲೂ ಪ್ರಸಾದ್ ಯಾದವ್, ಮಮತಾ ಬ್ಯಾನರ್ಜಿ ಹಾಗೂ ಇತರರು ಸಭೆಯಲ್ಲಿ ಭಾಗಿಯಾಗಿದ್ದರು. 

ಸಭೆ ಆರಂಭವಾಗುವುದಕ್ಕೂ ಮುನ್ನ ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ನಾಯಕರು ಸಭೆ ನಡೆಯುವ ಸ್ಥಳಕ್ಕೆ ಆಗಮಿಸಿದ್ದ ಆರ್ ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಹಾಗೂ ಪಕ್ಷದ ನಾಯಕ ಬಿಹಾರ ಉಪಮುಖ್ಯಮಂತ್ರಿ ಸಿಎಂ ತೇಜಸ್ವಿ ಯಾದವ್ ಅವರನ್ನು ಸ್ವಾಗತಿಸಿದ್ದರು. 

ಜೆಡಿಯು ನಾಯಕ ಹಾಗೂ ಬಿಹಾರ ಸಿಎಂ ನಿತೀಶ್ ಕುಮಾರ್ ಸಹ ಈ ಸಭೆಯಲ್ಲಿ ಭಾಗಿಯಾಗಿದ್ದರು.  2024 ರ ಲೋಕಸಭಾ ಚುನಾವಣೆಗೆ ಬಿಜೆಪಿ ಹಾಗೂ ಎನ್ ಡಿಎ ನ್ನು ಎದುರಿಸುವ ಉದ್ದೇಶ ಹೊಂದಿರುವ ಪ್ರತಿಪಕ್ಷಗಳ 2 ನೇ ಸಭೆ ಇದಾಗಿದೆ.

ತಾಜ್ ವೆಸ್ಟ್ ಎಂಡ್ ಹೊಟೆಲ್ ನಲ್ಲಿ ಈ ಸಭೆ ನಡೆದಿದ್ದು ನಾಳೆ ಬೆಳಿಗ್ಗೆ 11 ಗಂಟೆಗೆ ಆರಂಭವಾಗುವ ಸಭೆ 4 ಗಂಟೆಗೆ ಮುಕ್ತಾಯವಾಗಲಿದೆ. ಪ್ರತಿಪಕ್ಷಗಳ ಎರಡನೇ ಸಭೆಯಲ್ಲಿ ಕಾಂಗ್ರೆಸ್ ಗೆ 26 ಪಕ್ಷಗಳ ಬೆಂಬಲ ದೊರೆತಿದೆ. ಮೊದಲ ಸಭೆ ಕಳೆದ ತಿಂಗಳು ಪಾಟ್ನಾದಲ್ಲಿ ನಡೆದಿತ್ತು. ಈ ಸಭೆಯಲ್ಲಿ ಮೈತ್ರಿಕೂಟಕ್ಕೆ ಸಂಬಂಧಿಸಿದ ಹಲವು ಸಮಿತಿಗಳು ರಚನೆಯಾಗುವ ಸಾಧ್ಯತೆ ಇದ್ದು, ಹಲವು ತಂಡಗಳು ಉಪ ಸಮಿತಿಗಳೂ ರಚನೆಯಾಗುವ ನಿರೀಕ್ಷೆ ಇದೆ. 

SCROLL FOR NEXT