ದೇಶ

ಕೇಂದ್ರದ ಪ್ರಮುಖ ಅಧಿಕಾರಿ ವರ್ಗದಲ್ಲಿ ಮಹತ್ವದ ಬದಲಾವಣೆ

Srinivas Rao BV

ನವದೆಹಲಿ: ಕೇಂದ್ರದ ಅಧಿಕಾರಿಗಳ ವರ್ಗದಲ್ಲಿ ಮಹತ್ವದ ಬದಲಾವಣೆಯಾಗಿದ್ದು, 29 ಹಿರಿಯ ಅಧಿಕಾರಿಗಳನ್ನು ಕೇಂದ್ರ ಸರ್ಕಾರದ ಹಲವು ಇಲಾಖೆಗಳಿಗೆ ಜಂಟಿ ಕಾರ್ಯದರ್ಶಿಗಳನ್ನಾಗಿ ನೇಮಕ ಮಾಡಲಾಗಿದೆ. ನಾಗಲ್ಯಾಂಡ್ ಕೇಡರ್  ನ 2007 ರ ಬ್ಯಾಚ್ ನ ಐಎಎಸ್ ಅಧಿಕಾರಿ ವ್ಯಾಸನ್ ಆರ್ ಅವರನ್ನು ಪ್ರಧಾನಿ ಕಾರ್ಯಾಲಯದ ಜಂಟಿ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ. ಈಗ ಅವರು ಪ್ರಧಾನಿ ಕಾರ್ಯಾಲಯದ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.  

ರಸ್ತೆ ಹಾಗೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರ ಕಾರ್ಯದರ್ಶಿಯಾಗಿರುವ ಸಂಕೇತ್ ಎಸ್ ಭೋಂದ್ವೆ ಅವರನ್ನು  ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯಕ್ಕೆ ವರ್ಗಾವಣೆ ಮಾಡಲಾಗಿದೆ.

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಕಾರ್ಯದರ್ಶಿ ಅಲೋಕ್ ತಿವಾರಿ ಅವರು ಜಂಟಿ ಕಾರ್ಯದರ್ಶಿ ಮಟ್ಟದಲ್ಲಿ ಸಹ-ಟರ್ಮಿನಸ್ ಆಧಾರದ ಮೇಲೆ ಮುಂದುವರೆಯಲಿದ್ದಾರೆ.

ಹಿರಿಯ ಅಧಿಕಾರಿಗಳು ಪೌಸುಮಿ ಬಸು ಮತ್ತು ಅನಂತ್ ಕಿಶೋರ್ ಸರನ್ ಅವರನ್ನು ಗೃಹ ಸಚಿವಾಲಯದ ಜಂಟಿ ಕಾರ್ಯದರ್ಶಿಗಳಾಗಿ ನೇಮಿಸಲಾಗಿದೆ. ಗುಜರಾತ್ ಕೇಡರ್‌ನ 2001 ರ ಬ್ಯಾಚ್ ಭಾರತೀಯ ಪೊಲೀಸ್ ಸೇವೆ (IPS) ಅಧಿಕಾರಿ ವಿಪುಲ್ ಅಗರ್ವಾಲ್ ಇನ್ನು ಮುಂದೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಂಟಿ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಲಿದ್ದಾರೆ.

ವೀರೇಂದ್ರ ಮಿತ್ತಲ್ ಅವರನ್ನು ಕ್ಯಾಬಿನೆಟ್ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ, ಅಜೀತ್ ಕೆ ಸಾಹು ಅವರು ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯಲ್ಲಿ ಜಂಟಿ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಲಿದ್ದರೆ, ಬಿಶ್ವಜಿತ್ ಕುಮಾರ್ ಸಿಂಗ್ ಅವರನ್ನು ಆಯುಷ್ ಸಚಿವಾಲಯದ ಜಂಟಿ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ.

ಅರುಣಾಚಲ ಪ್ರದೇಶ-ಗೋವಾ-ಮಿಜೋರಾಂ ಮತ್ತು ಕೇಂದ್ರಾಡಳಿತ ಪ್ರದೇಶ (ಎಜಿಎಂಯುಟಿ) ಕೇಡರ್‌ನ 2007ರ ಬ್ಯಾಚ್‌ನ ಐಎಎಸ್ ಅಧಿಕಾರಿ ಅಭಿಷೇಕ್ ದೇವ್ ಅವರನ್ನು ವಾಣಿಜ್ಯ ಇಲಾಖೆಯ ಅಡಿಯಲ್ಲಿ ಕೃಷಿ ಮತ್ತು ಸಂಸ್ಕರಿಸಿದ ಆಹಾರ ಉತ್ಪನ್ನಗಳ ರಫ್ತು ಅಭಿವೃದ್ಧಿ ಪ್ರಾಧಿಕಾರದ (ಎಪಿಇಡಿಎ) ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ

ರಜತ್ ಕುಮಾರ್ ಸೈನಿ ಅವರನ್ನು ಕೈಗಾರಿಕೆ ಮತ್ತು ಆಂತರಿಕ ವ್ಯಾಪಾರದ ಉತ್ತೇಜನ ಇಲಾಖೆಯ ಅಡಿಯಲ್ಲಿ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಪೊರೇಷನ್ ಲಿಮಿಟೆಡ್‌ನ CEO ಮತ್ತು MD ಆಗಿ ನೇಮಿಸಲಾಗಿದೆ.

SCROLL FOR NEXT