ಬೆಂಗಳೂರಿನಲ್ಲಿ ಪ್ರತಿಪಕ್ಷಗಳ ಸಭೆಗೂ ಮುನ್ನ ವಿವಿಧ ಪಕ್ಷಗಳ ನಾಯಕರ ಬ್ಯಾನರ್‌ಗಳನ್ನು ಹಾಕಲಾಗಿದೆ. 
ದೇಶ

ಮೋದಿ ಮಣಿಸಲು ಒಗ್ಗಟ್ಟಿನ ಮಂತ್ರ: ವಿರೋಧ ಪಕ್ಷಗಳ ಮುಂದಿನ ಸಭೆ ಮಹಾರಾಷ್ಟ್ರ, ತಮಿಳುನಾಡು, ಪಶ್ಚಿಮ ಬಂಗಾಳದಲ್ಲಿ?

2024ರ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಎದುರಿಸಲು ಕಾರ್ಯತಂತ್ರ ರೂಪಿಸಲು ಬೆಂಗಳೂರಿನಲ್ಲಿ ನಡೆಯುತ್ತಿರುವ ಎರಡನೇ ಸಭೆಯಲ್ಲಿ ಜಮಾಯಿಸಿರುವ ವಿರೋಧ ಪಕ್ಷದ ನಾಯಕರು, ಮಹಾರಾಷ್ಟ್ರ ಮತ್ತು ತಮಿಳುನಾಡಿನಲ್ಲಿ ಮತ್ತೊಮ್ಮೆ ಸಭೆ ನಡೆಸುವ ನಿರೀಕ್ಷೆಯಿದೆ.

ಬೆಂಗಳೂರು: 2024ರ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಎದುರಿಸಲು ಕಾರ್ಯತಂತ್ರ ರೂಪಿಸಲು ಬೆಂಗಳೂರಿನಲ್ಲಿ ನಡೆಯುತ್ತಿರುವ ಎರಡನೇ ಸಭೆಯಲ್ಲಿ ಜಮಾಯಿಸಿರುವ ವಿರೋಧ ಪಕ್ಷದ ನಾಯಕರು, ಮಹಾರಾಷ್ಟ್ರ ಮತ್ತು ತಮಿಳುನಾಡಿನಲ್ಲಿ ಮತ್ತೊಮ್ಮೆ ಸಭೆ ನಡೆಸುವ ನಿರೀಕ್ಷೆಯಿದೆ.

ಪಶ್ಚಿಮ ಬಂಗಾಳದಲ್ಲಿ ನಡೆಯಲಿರುವ ಐದನೇ ಸಭೆಯಲ್ಲಿ ಎಲ್ಲಾ ಭಿನ್ನಾಭಿಪ್ರಾಯಗಳನ್ನು ನಿವಾರಿಸಿಕೊಳ್ಳಲಾಗುತ್ತದೆ. ಪ್ರಧಾನಿ ಮೋದಿ ಮತ್ತು ಬಿಜೆಪಿ ವಿರುದ್ಧ ಉತ್ಸಾಹಭರಿತ ಹೋರಾಟ ಮಾಡಲು ಸಿದ್ಧ ಎಂದು ದೇಶದಾದ್ಯಂತ ಜನರಿಗೆ ಬಲವಾದ ಸಂದೇಶವನ್ನು ರವಾನಿಸುವ ಸಾಧ್ಯತೆಯಿದೆ.

ಈ ಮಧ್ಯೆ, ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕ ಶರದ್ ಪವಾರ್ ಅವರು ಸಭೆಗೆ ಹಾಜರಾಗುವುದಿಲ್ಲ ಎಂದು ಹೇಳಲಾಗಿದ್ದು, ಇಂದಿನ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ನಿನ್ನೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ. 

ಎಐಸಿಸಿ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ, ಹಿರಿಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್, ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ, ಬಿಹಾರದ ಸಿಎಂ ನಿತೀಶ್ ಕುಮಾರ್, ಅಖಿಲೇಶ್ ಯಾದವ್ ಸೇರಿದಂತೆ ಇತರ ರಾಷ್ಟ್ರೀಯ ನಾಯಕರಾದ ವೈಕೊ, ಸೀತಾರಾಮ್ ಯೆಚೂರಿ ಮತ್ತು ಡಿ ರಾಜಾ ಈಗಾಗಲೇ ಬೆಂಗಳೂರಿಗೆ ಆಗಮಿಸಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಎದುರಿಸಲು ವಿರೋಧ ಪಕ್ಷಗಳೆಲ್ಲ ಒಗ್ಗಟ್ಟಿನ ಮೈತ್ರಿ ಮಾಡಿಕೊಳ್ಳುವುದಲ್ಲದೆ, ವಿಧಾನಸಭೆ ಚುನಾವಣೆ ನಡೆಯಲಿರುವ ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್‌ಗಢ, ತೆಲಂಗಾಣ ಮತ್ತು ಆಂಧ್ರಪ್ರದೇಶದ ಸೇರಿದಂತೆ ಐದೂ ರಾಜ್ಯಗಳ ಮೇಲೂ ಸಭೆಯಲ್ಲಿ ಗಮನಹರಿಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT