ಕುಸ್ತಿ ಫೆಡರೇಷನ್ ಚುನಾವಣೆ: ಗುವಾಹತಿ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ
ಮಹತ್ವದ ಬೆಳವಣಿಗೆಯಲ್ಲಿ ಭಾರತೀಯ ಕುಸ್ತಿ ಫೆಡರೇಶನ್ (WFI) ಚುನಾವಣೆಯನ್ನು ತಡೆಹಿಡಿದಿದ್ದ ಗುವಾಹತಿ ಹೈಕೋರ್ಟ್‌ನ ಆದೇಶಕ್ಕೆ ಸುಪ್ರೀಂ ಕೋರ್ಟ್ ಮಂಗಳವಾರ ತಡೆ ನೀಡಿದೆ.
ನವದೆಹಲಿ: ಮಹತ್ವದ ಬೆಳವಣಿಗೆಯಲ್ಲಿ ಭಾರತೀಯ ಕುಸ್ತಿ ಫೆಡರೇಶನ್ (WFI) ಚುನಾವಣೆಯನ್ನು ತಡೆಹಿಡಿದಿದ್ದ ಗುವಾಹತಿ ಹೈಕೋರ್ಟ್‌ನ ಆದೇಶಕ್ಕೆ ಸುಪ್ರೀಂ ಕೋರ್ಟ್ ಮಂಗಳವಾರ ತಡೆ ನೀಡಿದೆ.
ಜೂನ್ 25 ರಂದು ಹೈಕೋರ್ಟ್‌ನ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಮೇಲ್ಮನವಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಅನಿರುದ್ಧ ಬೋಸ್ ಮತ್ತು ಎಸ್.ವಿ ಭಟ್ಟಿ ಅವರಿದ್ದ ಪೀಠವು ನಡೆಸಿತು. ಈ ವೇಳೆ ಚುನಾವಣೆಯನ್ನು ತಡೆಹಿಡಿದಿದ್ದ ಗುವಾಹತಿ ಹೈಕೋರ್ಟ್‌ನ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದೆ.
ಅಂತೆಯೇ ಇದೇ ವೇಳೆ ಕೇಂದ್ರ ಕ್ರೀಡಾ ಸಚಿವಾಲಯ, ಕುಸ್ತಿ ಫೆಡರೇಶನ್ ಆಫ್ ಇಂಡಿಯಾ, ಅಸ್ಸಾಂ ಕುಸ್ತಿ ಅಸೋಸಿಯೇಷನ್ ಮತ್ತು ಇತರರಿಗೆ ನೋಟಿಸ್ ಜಾರಿ ಮಾಡಿದೆ.
ಹೈಕೋರ್ಟ್ ಆದೇಶಕ್ಕೆ ತಡೆ ನೀಡಿದ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದ್ದು, ಭಾರತ ಕುಸ್ತಿ ಫೆಡರೇಷನ್‌ನ ಚುನಾವಣೆಯಲ್ಲಿ ಪಾಲ್ಗೊಳ್ಳಲು ಅವಕಾಶ ನೀಡುವಂತೆ ಕೋರಿ ಅಸ್ಸಾಂ ಕುಸ್ತಿ ಸಂಸ್ಥೆ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಗುವಾಹಟಿ ಹೈಕೋರ್ಟ್ ಜು.28 ಕ್ಕೆ ಮುಂದೂಡಿತ್ತು.
ಇದನ್ನೂ ಓದಿ: ಕುಸ್ತಿಪಟುಗಳಿಗೆ ಬ್ರಿಜ್ ಭೂಷಣ್ ನಿಂದ ಲೈಂಗಿಕ ಶೋಷಣೆ, ಕಿರುಕುಳ ಆಗಿದೆ: ಚಾರ್ಜ್ ಶೀಟ್ ನಲ್ಲಿ ದೆಹಲಿ ಪೊಲೀಸರಿಂದ ಉಲ್ಲೇಖ
ಜುಲೈ.11 ರಂದು ಡಬ್ಲ್ಯೂಎಫ್‌ಐ ಚುನಾವಣೆ ನಡೆಸಬೇಕಿತ್ತು. ಆದರೆ ಅಸ್ಸಾಂ ಸಂಸ್ಥೆ ಅರ್ಜಿ ಸಲ್ಲಿಸಿದ ಹಿನ್ನೆಲೆಯಲ್ಲಿ ಚುನಾವಣೆ ಪ್ರಕ್ರಿಯೆಗೂ ತಡೆ ನೀಡಲಾಗಿತ್ತು.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.