ಜಮ್ಮು-ಕಾಶ್ಮೀರ: ಅನಂತ್ ನಾಗ್ ಜಿಲ್ಲೆಯಲ್ಲಿ ಉಗ್ರರಿಂದ ಗುಂಡಿನ ದಾಳಿ, ಇಬ್ಬರು ಕಾರ್ಮಿಕರಿಗೆ ಗಾಯ
ಜಮ್ಮು ಮತ್ತು ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯಲ್ಲಿ ಉಗ್ರರು ಗುಂಡಿನ ದಾಳಿ ನಡೆಸಿದ್ದು, ದಾಳಿಯಲ್ಲಿ ಇಬ್ಬರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದಾರೆಂದು ಬುಧವಾರ ತಿಳಿದುಬಂದಿದೆ.
ಜಮ್ಮು-ಕಾಶ್ಮೀರ (ಅನಂತ್ ನಾಗ್): ಜಮ್ಮು ಮತ್ತು ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯಲ್ಲಿ ಉಗ್ರರು ಗುಂಡಿನ ದಾಳಿ ನಡೆಸಿದ್ದು, ದಾಳಿಯಲ್ಲಿ ಇಬ್ಬರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದಾರೆಂದು ಬುಧವಾರ ತಿಳಿದುಬಂದಿದೆ.
ಗಾಯಗೊಂಡ ಕಾರ್ಮಿಕರನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಉಗ್ರರು ಗುಂಡಿನ ದಾಳಿ ನಡೆಸಿದ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಭದ್ರತಾ ಪಡೆಗಳು ಕಾರ್ಯಾಚರಣೆ ಆರಂಭಿಸಿದ್ದು, ಎಲ್ಲೆಡೆ ತಪಾಸಣೆ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.