ಬ್ರಿಜ್ ಭೂಷಣ್ ಸಿಂಗ್ 
ದೇಶ

ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ಸಿಂಗ್ ಗೆ ಷರತ್ತುಬದ್ಧ ಜಾಮೀನು

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಕುಸ್ತಿ ಫೆಡರೇಶನ್ ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರಿಗೆ ಜಾಮೀನು ಸಿಕ್ಕಿದೆ. 

ನವದೆಹಲಿ: ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಕುಸ್ತಿ ಫೆಡರೇಶನ್ ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರಿಗೆ ಜಾಮೀನು ಸಿಕ್ಕಿದೆ. 

ಇಂದು ದೆಹಲಿಯ ರೂಸ್ ಅವೆನ್ಯೂ ಕೋರ್ಟ್ ಅವರಿಗೆ ಜಾಮೀನು ಮಂಜೂರು ಮಾಡಿದ್ದು ವಿದೇಶ ಪ್ರವಾಸಕ್ಕೆ ತೆರಳುವಂತಿಲ್ಲ ಎಂದು ಷರತ್ತು ವಿಧಿಸಿದೆ. ಬ್ರಿಜ್ ಭೂಷಣ್ ಜಾಮೀನಿಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ನಾವು ಅದರ ವಿರುದ್ಧವೂ ಅಲ್ಲ ಅಥವಾ ಅದರ ಪರವಾಗಿಯೂ ಇಲ್ಲ ಎಂದು ಹೇಳಿದ್ದಾರೆ. ಇದಕ್ಕೂ ಮುನ್ನ ರೂಸ್ ಅವೆನ್ಯೂ ಕೋರ್ಟ್ ಬೆಳಗ್ಗೆಯೇ ವಿಚಾರಣೆ ನಡೆಸಿ ಜಾಮೀನು ತೀರ್ಪನ್ನು ಕಾಯ್ದಿರಿಸಿತ್ತು. ನಂತರ ನ್ಯಾಯಾಲಯವು ಸರಿಯಾಗಿ 4 ಗಂಟೆಗೆ ವಿಚಾರಣೆಯನ್ನು ಪ್ರಾರಂಭಿಸಿತು. ಪ್ರಕರಣದಲ್ಲಿ ಬ್ರಿಜ್ ಭೂಷಣ್‌ಗೆ ನಿಯಮಿತ ಜಾಮೀನು ನೀಡುವ ನಿರ್ಧಾರವನ್ನು ಪ್ರಕಟಿಸಿತು.

ಜುಲೈ 18ರಂದು ನ್ಯಾಯಾಲಯ ಬ್ರಿಜ್ ಭೂಷಣ್‌ಗೆ ಮಧ್ಯಂತರ ಜಾಮೀನು ನೀಡಿತ್ತು. ಇದೀಗ ಅವರಿಗೆ ಬಿಗ್ ರಿಲೀಫ್ ಸಿಕ್ಕಿದ್ದು, ಲೈಂಗಿಕ ಕಿರುಕುಳ ಪ್ರಕರಣದಲ್ಲಿ ನಿತ್ಯ ಜಾಮೀನಿನ ಮೇಲೆ ಹೊರ ಬರಲಿದ್ದಾರೆ. ಬ್ರಿಜ್‌ ಭೂಷಣ್‌ ಶರಣ್‌ ಸಿಂಗ್‌ ಅವರನ್ನು ಚಾರ್ಜ್‌ ಶೀಟ್‌ ಸಲ್ಲಿಕೆಯಾಗುವವರೆಗೆ ಬಂಧಿಸುವ ಅಗತ್ಯವಿಲ್ಲ ಎಂದಿರುವಾಗ ಈಗ ಅದರ ಅಗತ್ಯ ಏನಿತ್ತು ಎಂದು ಅವರ ವಕೀಲರು ಹೇಳಿದ್ದರು. ಇದನ್ನೇ ಆಧಾರವಾಗಿ ಪರಿಗಣಿಸಿ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಬ್ರಿಜ್ ಭೂಷಣ್ ಅವರ ಆಪ್ತ ಸಹಾಯಕ ಮತ್ತು ಕುಸ್ತಿ ಫೆಡರೇಶನ್‌ನ ಮಾಜಿ ಅಧಿಕಾರಿ ವಿನೋದ್ ತೋಮರ್ ಅವರಿಗೂ ಪರಿಹಾರ ಸಿಕ್ಕಿದೆ. ಒಟ್ಟು 6 ಪ್ರಕರಣಗಳ ಪೈಕಿ 2 ಪ್ರಕರಣಗಳಲ್ಲಿ ಇವರನ್ನು ಸಹ ಆರೋಪಿಯನ್ನಾಗಿ ಮಾಡಲಾಗಿದೆ.

ಬ್ರಿಜ್ ಭೂಷಣ್‌ ಸಿಂಗ್ ಮತ್ತು ವಿನೋದ್ ತೋಮರ್ ಅವರಿಗೆ ತಲಾ 25,000 ರೂಪಾಯಿಗಳ ಶ್ಯೂರಿಟಿಯ ಮೇಲೆ ನ್ಯಾಯಾಲಯ ಷರತ್ತುಬದ್ಧ ಜಾಮೀನು ನೀಡಿದೆ. ತಿಳಿಸದೇ ವಿದೇಶ ಪ್ರವಾಸಕ್ಕೆ ಹೋಗುವುದಿಲ್ಲ ಎಂದು ಕೋರ್ಟ್ ಷರತ್ತು ವಿಧಿಸಿದೆ. ನಂತರ ಪ್ರಕರಣದ ವಿಚಾರಣೆಯನ್ನು ಜುಲೈ 28ಕ್ಕೆ ಮುಂದೂಡಿದೆ. ಬ್ರಿಜ್ ಭೂಷಣ್ ಶರಣ್ ಸಿಂಗ್ ತಮ್ಮ ವಿರುದ್ಧದ ಆರೋಪಗಳನ್ನು ನಿರಂತರವಾಗಿ ತಿರಸ್ಕರಿಸುತ್ತ ಬಂದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT