ರಕ್ಷಣಾ ಕಾರ್ಯಾಚರಣೆ 
ದೇಶ

ಮಹಾರಾಷ್ಟ್ರ: ರಾಯಗಡದಲ್ಲಿ ಭೂಕುಸಿತ, 4 ಸಾವು; ಹಲವರು ಸಿಕ್ಕಿಬಿದ್ದಿರುವ ಶಂಕೆ; ಸ್ಥಳಕ್ಕೆ ಮುಖ್ಯಮಂತ್ರಿ ಶಿಂಧೆ ಭೇಟಿ

ಮಹಾರಾಷ್ಟ್ರದ ರಾಯಗಡ ಜಿಲ್ಲೆಯ ಖಲಾಪುರ ತೆಹಸಿಲ್‌ನ ಇರ್ಶಾಲವಾಡಿಯಲ್ಲಿ ಬುಧವಾರ ಮಧ್ಯರಾತ್ರಿ ಭಾರಿ ಮಳೆಯಿಂದಾಗಿ ಸಂಭವಿಸಿದ ಭೂಕುಸಿತದಿಂದಾಗಿ ಕನಿಷ್ಠ ನಾಲ್ವರು ಮೃತಪಟ್ಟಿದ್ದು, ಹಲವರು ಸಿಲುಕಿದ್ದಾರೆ ಎಂದು ವರದಿಯಾಗಿದೆ.

ಮುಂಬೈ: ಮಹಾರಾಷ್ಟ್ರದ ರಾಯಗಡ ಜಿಲ್ಲೆಯ ಖಲಾಪುರ ತೆಹಸಿಲ್‌ನ ಇರ್ಶಾಲವಾಡಿಯಲ್ಲಿ ಬುಧವಾರ ಮಧ್ಯರಾತ್ರಿ ಭಾರಿ ಮಳೆಯಿಂದಾಗಿ ಸಂಭವಿಸಿದ ಭೂಕುಸಿತದಿಂದಾಗಿ ಕನಿಷ್ಠ ನಾಲ್ವರು ಮೃತಪಟ್ಟಿದ್ದು, ಹಲವರು ಸಿಲುಕಿದ್ದಾರೆ ಎಂದು ವರದಿಯಾಗಿದೆ.

ಈವರೆಗೆ 25 ಮಂದಿಯನ್ನು ರಕ್ಷಿಸಲಾಗಿದ್ದು, ಕಾರ್ಯಾಚರಣೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಕೊಂಕಣ ಪ್ರದೇಶದಲ್ಲಿ ಕಳೆದ 36 ತಾಸಿನಲ್ಲಿ 150ರಿಂದ 200 ಮಿ.ಮೀ. ಮಳೆ ಸುರಿದಿದೆ.

ಪ್ರಾಥಮಿಕ ಮಾಹಿತಿಯ ಪ್ರಕಾರ ಬುಡಕಟ್ಟು ಸಮುದಾಯದ 30ಕ್ಕೂ ಹೆಚ್ಚು ಕುಟುಂಬಗಳು ಇಲ್ಲಿ ವಾಸಿಸುತ್ತಿವೆ ಎಂದು ತಿಳಿದು ಬಂದಿದೆ.  ಸುಮಾರು 17 ಮನೆಗಳಿಗೆ ಹಾನಿಯಾಗಿದೆ ಎಂದು ತಿಳಿದು ಬಂದಿದೆ.ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಎಂಎ) ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ, ರಾಯಗಢ ಸ್ಥಳೀಯಾಡಳಿತ ಮತ್ತು ಪೊಲೀಸ್ ತಂಡ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿವೆ. ಮಹಾರಾಷ್ಟ್ರ ಪರ್ವತಾರೋಹಿಗಳ ತಂಡವನ್ನು (ಎಂಎಂಆರ್‌ಸಿಸಿ) ಸ್ಥಳಕ್ಕೆ ರವಾನಿಸಲಾಗಿದೆ.

ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂದೆ ಪರಿಸ್ಥಿತಿಯನ್ನು ಅವಲೋಕಿಸಿದ್ದಾರೆ. ಮೂವರು ಸಚಿವರು ಸ್ಥಳಕ್ಕೆ ಭೇಟಿ ನೀಡಲಿದ್ದಾರೆ.  ಇನ್ನಷ್ಟು ಮಾಹಿತಿಗಾಗಿ ಕಾಯಲಾಗುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್