ರಾಷ್ಟ್ರೀಯ ಮಹಿಳಾ ಆಯೋಗ 
ದೇಶ

ಮಣಿಪುರದಲ್ಲಿ ಮಹಿಳೆಯರ ಬೆತ್ತಲೆ ಮೆರವಣಿಗೆ; ರಾಷ್ಟ್ರೀಯ ಮಹಿಳಾ ಆಯೋಗದಿಂದ ಸ್ವಯಂ ಪ್ರೇರಿತ ದೂರು

ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ಬೆತ್ತಲೆಗೊಳಿಸಿ, ಮೆರವಣಿಗೆ ಮಾಡಿದ ಘಟನೆಗೆ ಸಂಬಂಧಿಸಿದಂತೆ ರಾಷ್ಟ್ರೀಯ ಮಹಿಳಾ ಆಯೋಗ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದು, ಈ ವಿಷಯದಲ್ಲಿ ಕೂಡಲೇ ಕ್ರಮ ಕೈಗೊಳ್ಳುವಂತೆ ರಾಜ್ಯ ಪೊಲೀಸ್ ಮುಖ್ಯಸ್ಥರನ್ನು ಕೇಳಿದೆ.

ನವದೆಹಲಿ: ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ಬೆತ್ತಲೆಗೊಳಿಸಿ, ಮೆರವಣಿಗೆ ಮಾಡಿದ ಘಟನೆಗೆ ಸಂಬಂಧಿಸಿದಂತೆ ರಾಷ್ಟ್ರೀಯ ಮಹಿಳಾ ಆಯೋಗ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದು, ಈ ವಿಷಯದಲ್ಲಿ ಕೂಡಲೇ ಕ್ರಮ ಕೈಗೊಳ್ಳುವಂತೆ ರಾಜ್ಯ ಪೊಲೀಸ್ ಮುಖ್ಯಸ್ಥರನ್ನು ಕೇಳಿದೆ.

ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೇ 4ರಂದು ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಜನರ ಗುಂಪೊಂದು ಇಬ್ಬರು ಮಹಿಳೆಯರನ್ನು ಬೆತ್ತಲೆ ಮಾಡಿ, ಮೆರವಣಿಗೆ ಮಾಡಿದ ವಿಡಿಯೋ ಬುಧವಾರ ವೈರಲ್ ಆಗಿದ್ದು, ಸಂಘರ್ಷ ಪೀಡಿತ ರಾಜ್ಯದಲ್ಲಿ ಅನೇಕರು ಆಘಾತಕ್ಕೊಳಗಾಗಿದ್ದಾರೆ ಮತ್ತು ಘಟನೆಯನ್ನು ಖಂಡಿಸಿದ್ದಾರೆ.

'ಮಣಿಪುರದಲ್ಲಿ ನಡೆದಿರುವ ಅಮಾನುಷ ಕೃತ್ಯವನ್ನು ಎನ್‌ಸಿಡಬ್ಲ್ಯು ಖಂಡಿಸುತ್ತದೆ. ಈ ಸಂಬಂಧ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಳ್ಳಲಾಗಿದ್ದು, ಆರೋಪಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಡಿಜಿಪಿಗೆ ಸೂಚಿಸಲಾಗಿದೆ' ಎಂದು ಎನ್‌ಸಿಡಬ್ಲ್ಯು ಟ್ವೀಟ್ ಮಾಡಿದೆ.

'ಮಣಿಪುರದಲ್ಲಿ ನಡೆದಿರುವ ಅಮಾನುಷ ಕೃತ್ಯವನ್ನು ರಾಷ್ಟ್ರೀಯ ಮಹಿಳಾ ಆಯೋಗ (ಎನ್‌ಸಿಡಬ್ಲ್ಯು) ಖಂಡಿಸಿದ್ದು, ಈ ಸಂಬಂಧ ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿಕೊಂಡಿದೆ. ಅಲ್ಲದೆ, ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಡಿಜಿಪಿಗೆ ಸೂಚಿಸಲಾಗಿದೆ' ಎಂದು ಎನ್‌ಸಿಡಬ್ಲ್ಯು ಟ್ವೀಟ್ ಮಾಡಿದೆ.

ಇದಕ್ಕೂ ಮುನ್ನ, ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ, ವೈರಲ್ ವಿಡಿಯೋದ ಕುರಿತು ತಾವು ಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಅವರೊಂದಿಗೆ ಮಾತನಾಡಿದ್ದು, ಈ ಸಂಬಂಧ ತನಿಖೆ ನಡೆಸುತ್ತಿರುವುದಾಗಿ ಅವರು ತಿಳಿಸಿದ್ದಾರೆ ಮತ್ತು ಅಪರಾಧಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಭರವಸೆ ನೀಡಿದರು.

ಕೃತ್ಯದಲ್ಲಿ ಭಾಗಿಯಾಗಿದ್ದ ಅಪರಿಚಿತ ಶಸ್ತ್ರಸಜ್ಜಿತ ವ್ಯಕ್ತಿಗಳ ವಿರುದ್ಧ ತೌಬಲ್ ಜಿಲ್ಲೆಯ ನಾಂಗ್‌ಪೋಕ್ ಸೆಕ್ಮೈ ಪೊಲೀಸ್ ಠಾಣೆಯಲ್ಲಿ ಅಪಹರಣ, ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಮಣಿಪುರದ ಪೊಲೀಸರು ತಿಳಿಸಿದ್ದಾರೆ.
ಆದಷ್ಟು ಬೇಗ ಆರೋಪಿಗಳನ್ನು ಬಂಧಿಸಲು ಸರ್ವಪ್ರಯತ್ನ ನಡೆಸಲಾಗುತ್ತಿದೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

IPL 2026 Qualifier 1: GT ವಿರುದ್ದ ಸ್ಫೋಟಕ ಬ್ಯಾಟಿಂಗ್, ಇತಿಹಾಸ ಬರೆದ RCB

IPL 2026 Qualifier 1: ಐಪಿಎಲ್ ಅಷ್ಟೇ ಅಲ್ಲ.. ಜಾಗತಿಕ ಟಿ20 ಕ್ರಿಕೆಟ್ ನಲ್ಲೂ RCB ಐತಿಹಾಸಿಕ ದಾಖಲೆ, ರೆಕಾರ್ಡ್ ಗಳ ಪಟ್ಟಿ!

SCROLL FOR NEXT