ಸುಪ್ರೀಂಕೋರ್ಟ್ 
ದೇಶ

ಕೇಂದ್ರದ ದೆಹಲಿ ಸುಗ್ರೀವಾಜ್ಞೆ ಅರ್ಜಿ ವಿಚಾರಣೆಯನ್ನು ಪಂಚ ಪೀಠಕ್ಕೆ ವರ್ಗಾಯಿಸಿದ 'ಸುಪ್ರೀಂ'

ದೆಹಲಿ ಸುಗ್ರೀವಾಜ್ಞೆ ವಿಷಯವನ್ನು ಸುಪ್ರೀಂ ಕೋರ್ಟ್ ಸಾಂವಿಧಾನಿಕ ಪೀಠಕ್ಕೆ ವರ್ಗಾಯಿಸಿದ್ದು ಐವರು ನ್ಯಾಯಾಧೀಶರ ಸಾಂವಿಧಾನಿಕ ಪೀಠವು ಪ್ರಕರಣದ ವಿಚಾರಣೆ ನಡೆಸಲಿದೆ. 

ನವದೆಹಲಿ: ದೆಹಲಿ ಸುಗ್ರೀವಾಜ್ಞೆ ವಿಷಯವನ್ನು ಸುಪ್ರೀಂ ಕೋರ್ಟ್ ಸಾಂವಿಧಾನಿಕ ಪೀಠಕ್ಕೆ ವರ್ಗಾಯಿಸಿದ್ದು ಐವರು ನ್ಯಾಯಾಧೀಶರ ಸಾಂವಿಧಾನಿಕ ಪೀಠವು ಪ್ರಕರಣದ ವಿಚಾರಣೆ ನಡೆಸಲಿದೆ. 

ಸುಗ್ರೀವಾಜ್ಞೆಯ ವಿರುದ್ಧ ದೆಹಲಿ ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿತ್ತು. ಮಂಗಳವಾರ ಈ ಅರ್ಜಿಯ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ಈ ಅರ್ಜಿಯನ್ನು ಸಾಂವಿಧಾನಿಕ ಪೀಠಕ್ಕೆ ವರ್ಗಾಯಿಸಬಹುದು ಎಂದು ಸೂಚಿಸಿತ್ತು. ಕೇಂದ್ರದ ಸೇವಾ ಸುಗ್ರೀವಾಜ್ಞೆಯನ್ನು ಪ್ರಶ್ನಿಸಿ ದೆಹಲಿ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಐವರು ನ್ಯಾಯಮೂರ್ತಿಗಳ ಸಂವಿಧಾನ ಪೀಠಕ್ಕೆ ವರ್ಗಾಯಿಸಿದೆ.

ಸುಗ್ರೀವಾಜ್ಞೆಯ ಮೂಲಕ ಸೇವೆಗಳನ್ನು ದೆಹಲಿ ವಿಧಾನಸಭೆಯ ವ್ಯಾಪ್ತಿಯಿಂದ ಹೊರಗಿಡುವುದು ಸರಿಯೇ ಅಥವಾ ಇಲ್ಲವೇ ಎಂಬುದರ ಕುರಿತು ಸುದೀರ್ಘ ವಿಚಾರಣೆ ಅಗತ್ಯ ಎಂದು ಮುಖ್ಯ ನ್ಯಾಯಮೂರ್ತಿ ಹೇಳಿದರು. ಲೆಫ್ಟಿನೆಂಟ್ ಗವರ್ನರ್ ಪರ ವಾದ ಮಂಡಿಸಿದ ಹಿರಿಯ ವಕೀಲ ಹರೀಶ್ ಸಾಳ್ವೆ, ಸಂಸತ್ತಿನಲ್ಲಿ ಮಸೂದೆಯನ್ನು ಮಂಡಿಸಿದ ನಂತರ, ಸುಗ್ರೀವಾಜ್ಞೆಯ ವಿಷಯವನ್ನು ಪರಿಗಣಿಸುವ ಅಗತ್ಯವಿಲ್ಲ ಎಂದು ಹೇಳಿದರು. ಇದಕ್ಕೆ ನಾವು ಅಲ್ಲಿಯವರೆಗೆ ಕಾಯಲು ಸಾಧ್ಯವಿಲ್ಲ ಎಂದು ಸಿಜೆಐ ಹೇಳಿದ್ದಾರೆ.

ವಾಸ್ತವವಾಗಿ, ಈ ವರ್ಷದ ಮೇ ತಿಂಗಳಲ್ಲಿ, ದೆಹಲಿಯಲ್ಲಿ ಆಡಳಿತಾತ್ಮಕ ಸೇವೆಗಳ ನಿಯಂತ್ರಣ ಮತ್ತು ಅಧಿಕಾರಕ್ಕೆ ಸಂಬಂಧಿಸಿದ ವಿಷಯದ ಕುರಿತು ಸುಪ್ರೀಂ ಕೋರ್ಟ್ ತನ್ನ ತೀರ್ಪನ್ನು ನೀಡಿತು. ಪೊಲೀಸ್, ಭೂಮಿ ಮತ್ತು ಸಾರ್ವಜನಿಕ ಸುವ್ಯವಸ್ಥೆ ಹೊರತುಪಡಿಸಿ ಉಳಿದೆಲ್ಲ ವಿಷಯಗಳಲ್ಲಿ ಲೆಫ್ಟಿನೆಂಟ್ ಗವರ್ನರ್ ದೆಹಲಿ ಸರ್ಕಾರದ ಸಲಹೆಯನ್ನು ಅನುಸರಿಸಬೇಕು ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿತ್ತು. ಇದಾದ ನಂತರ, ಕೇಂದ್ರ ಸರ್ಕಾರ ಸುಗ್ರೀವಾಜ್ಞೆಯನ್ನು ತಂದಿತ್ತು. ಅದರಲ್ಲಿ ಮತ್ತೆ ದೆಹಲಿಯ ಅಧಿಕಾರವನ್ನು ಲೆಫ್ಟಿನೆಂಟ್ ಗವರ್ನರ್‌ಗೆ ಹಿಂತಿರುಗಿಸಲಾಯಿತು.

ಇನ್ನು ದೆಹಲಿಯ ಅರವಿಂದ್ ಕೇಜ್ರಿವಾಲ್ ಸರ್ಕಾರವು ದೆಹಲಿಯಲ್ಲಿ ಅಧಿಕಾರಶಾಹಿಗಳ ನೇಮಕಾತಿ ಮತ್ತು ವರ್ಗಾವಣೆಗೆ ಸಂಬಂಧಿಸಿದ ಈ ಸುಗ್ರೀವಾಜ್ಞೆಯನ್ನು ವಿರೋಧಿಸುತ್ತಿದೆ. ಡ್ಯಾನಿಕ್ಸ್ ಕೇಡರ್‌ನ ಗ್ರೂಪ್-ಎ ಅಧಿಕಾರಿಗಳ ವಿರುದ್ಧ ವರ್ಗಾವಣೆ ಮತ್ತು ಶಿಸ್ತಿನ ಪ್ರಕ್ರಿಯೆಗಳಿಗಾಗಿ ರಾಷ್ಟ್ರೀಯ ರಾಜಧಾನಿ ನಾಗರಿಕ ಸೇವೆಗಳ ಪ್ರಾಧಿಕಾರವನ್ನು ಸ್ಥಾಪಿಸಲು ಸುಗ್ರೀವಾಜ್ಞೆ ಒದಗಿಸುತ್ತದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 30 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT