ಮಮತಾ ಬ್ಯಾನರ್ಜಿ 
ದೇಶ

ಬಂದೂಕು ಹಿಡಿದು ಮಮತಾ ಬ್ಯಾನರ್ಜಿ ಮನೆಗೆ ನುಗ್ಗಲು ಯತ್ನ: ವ್ಯಕ್ತಿ ಬಂಧನ

ಕೋಲ್ಕತ್ತಾದ ಹರೀಶ್ ಚಟರ್ಜಿ ಸ್ಟ್ರೀಟ್‌ನಲ್ಲಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ನಿವಾಸಕ್ಕೆ ಬಂದೂಕು ಹಿಡಿದು ನುಗ್ಗಲು ಯತ್ನಿಸಿದ ವ್ಯಕ್ತಿಯೊಬ್ಬನನ್ನು ಶುಕ್ರವಾರ ಬಂಧನಕ್ಕೊಳಪಡಿಸಲಾಗಿದೆ.

ಕೋಲ್ಕತ್ತಾ: ಕೋಲ್ಕತ್ತಾದ ಹರೀಶ್ ಚಟರ್ಜಿ ಸ್ಟ್ರೀಟ್‌ನಲ್ಲಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ನಿವಾಸಕ್ಕೆ ಬಂದೂಕು ಹಿಡಿದು ನುಗ್ಗಲು ಯತ್ನಿಸಿದ ವ್ಯಕ್ತಿಯೊಬ್ಬನನ್ನು ಶುಕ್ರವಾರ ಬಂಧನಕ್ಕೊಳಪಡಿಸಲಾಗಿದೆ.

ಇಂದು ಬೆಳಿಗ್ಗೆ 11:30 ರ ಸುಮಾರಿಗೆ ಮಮತಾ ಬ್ಯಾನರ್ಜಿಯವರ ಮನೆಗೆ ಅಪರಿಚಿತ ವ್ಯಕ್ತಿಯೊಬ್ಬ ಪ್ರವೇಶಿಸಲು ಪ್ರಯತ್ನಿಸಿದ್ದ. ಈ ವ್ಯಕ್ತಿಯು ಬಂದೂಕು ಮತ್ತು ಚಾಕು ಹಿಡಿದುಕೊಂಡು ಮನೆಗೆ ನುಗ್ಗಲು ಯತ್ನಿಸುತ್ತಿದ್ದಾಗ ಪೊಲೀಸರು ಆತನನ್ನು ತಡೆದು, ಬಂಧನಕ್ಕೊಳಪಡಿಸಿದ್ದಾರೆ.

ಬಂಧಿತ ವ್ಯಕ್ತಿಯನ್ನು ಶೇಖ್ ನೂರ್ ಎಂದು ಗುರುತಿಸಲಾಗಿದೆ. ವ್ಯಕ್ತಿ ಪೊಲೀಸರಂತೆ ನಟಿಸಿ ಕಪ್ಪು ಕಾರಿನಲ್ಲಿ ಬಂದಿದ್ದು, ಮಮತಾ ನಿವಾಸದ ಬಳಿಯ ಲೇನ್‌ಗೆ ಪ್ರವೇಶಿಸಲು ಪ್ರಯತ್ನಿಸುತ್ತಿದ್ದ. ಈತ ವಿವಿಧ ಭದ್ರತಾ ಏಜೆನ್ಸಿಗಳಿಗೆ ಸೇರಿದ ಹಲವಾರು ನಕಲಿ ಗುರುತಿನ ಚೀಟಿಗಳನ್ನು ಕೂಡ ಹೊಂದಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಆರೋಪಿಯು ಕಾರಿನಿಂದ ಇಳಿದಾಗ ಪೊಲೀಸರು ತಡೆದರು. ಆದರೆ, ಆತ ತನ್ನನ್ನು ತಾನು ಪೋಲೀಸ್ ಅಧಿಕಾರಿ ಎಂಬಂತೆ ಬಿಂಬಿಸಲು ಯತ್ನಿಸುತ್ತಿದ್ದ. ಮಮತಾ ಬ್ಯಾನರ್ಜಿ ಅವರನ್ನು ಭೇಟಿಯಾಗಲು ಬಂದಿದ್ದೇನೆ ಎಂದು ಹೇಳಿದ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!