ಸುಪ್ರೀಂಕೋರ್ಟ್ 
ದೇಶ

ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಪ್ರಕರಣ: ಪೂರ್ಣೇಶ್ ಮೋದಿಗೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ

ಮಾನನಷ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಜರಾತ್‌ನ ಸೂರತ್‌ ಮ್ಯಾಜಿಸ್ಟ್ರೇಟ್ ಕೋರ್ಟ್‌ ವಿಧಿಸಿರುವ ಶಿಕ್ಷೆಗೆ ತಡೆ ನೀಡಲು ನಿರಾಕರಿಸಿದ ಗುಜರಾತ್‌ ಹೈಕೋರ್ಟ್‌ನ ಆದೇಶ ಪ್ರಶ್ನಿಸಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅರ್ಜಿ ಸಲ್ಲಿಸಿದ್ದರು.

ನವದೆಹಲಿ: ‘ಮೋದಿ ಉಪನಾಮ’ ಟೀಕೆ ಪ್ರಕರಣದಲ್ಲಿ ತನಗೆ ಸೂರತ್ ನ್ಯಾಯಾಲಯವು ಎರಡು ವರ್ಷಗಳ ಜೈಲು ಶಿಕ್ಷೆಗೆ ಗುರಿಪಡಿಸಿದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ತನಗೆ ಶಿಕ್ಷೆಯನ್ನು ತಡೆಯಲು ನಿರಾಕರಿಸಿದ ಗುಜರಾತ್ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ಕೈಗೆತ್ತಿಕೊಂಡಿದೆ.

ಮಾನನಷ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಜರಾತ್‌ನ ಸೂರತ್‌ ಮ್ಯಾಜಿಸ್ಟ್ರೇಟ್ ಕೋರ್ಟ್‌ ವಿಧಿಸಿರುವ ಶಿಕ್ಷೆಗೆ ತಡೆ ನೀಡಲು ನಿರಾಕರಿಸಿದ ಗುಜರಾತ್‌ ಹೈಕೋರ್ಟ್‌ನ ಆದೇಶ ಪ್ರಶ್ನಿಸಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅರ್ಜಿ ಸಲ್ಲಿಸಿದ್ದರು.

ನ್ಯಾಯಮೂರ್ತಿಗಳಾದ ಬಿ.ಆರ್. ಗವಾಯಿ, ಪ್ರಶಾಂತ್ ಕುಮಾರ್ ಮಿಶ್ರಾ ಅವರ ನೇತೃತ್ವದ ಪೀಠವು ವಿಚಾರಣೆ ನಡೆಸಿದೆ.ರಾಹುಲ್‌ ಗಾಂಧಿ ಮನವಿ ಮೇರೆಗೆ ಗುಜರಾತ್‌ ಬಿಜೆಪಿ ಶಾಸಕ ಪೂರ್ಣೇಶ್‌ ಮೋದಿ ಸೇರಿ ಇತರರಿಗೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದ್ದು, ವಿಚಾರಣೆಯನ್ನು ಆಗಸ್ಟ್ 4ಕ್ಕೆ ಮುಂದೂಡಿದೆ.

2019ರಲ್ಲಿ ಲೋಕಸಭೆಗೆ ನಡೆದ ಚುನಾವಣೆಯ ಪ್ರಚಾರ ಸಂದರ್ಭದಲ್ಲಿ ರಾಹುಲ್ ಅವರು 2019ರ ಏಪ್ರಿಲ್‌ 13ರಂದು ಕೋಲಾರದಲ್ಲಿ ಭಾಷಣ ಮಾಡಿದ್ದರು. ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುತ್ತಾ, ‘ಎಲ್ಲಾ ಕಳ್ಳರಿಗೆ ಮೋದಿ ಎಂಬ ಉಪನಾಮ ಏಕಿದೆ’ ಎಂದು ಪ್ರಶ್ನಿಸಿದ್ದರು. ಈ ಬಗ್ಗೆ ಗುಜರಾತ್‌ ಶಾಸಕ ಪೂರ್ಣೇಶ್‌ ಮೋದಿ ಅವರು, ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ಈ ‍ಪ್ರಕರಣದಲ್ಲಿ ರಾಹುಲ್ ಅವರು ಎರಡು ವರ್ಷ ಶಿಕ್ಷೆಗೆ ಗುರಿಯಾಗಿ ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT