ಮಾರುಕಟ್ಟೆಯಲ್ಲಿ ಅಗ್ನಿ ಅವಘಡ ಸಂಭವಿಸಿರುವುದು. 
ದೇಶ

ಪಶ್ಚಿಮ ಬಂಗಾಳ: ಹೌರಾ ಮಾರುಕಟ್ಟೆಯಲ್ಲಿ ಭಾರೀ ಅಗ್ನಿ ಅವಘಡ, ನೂರಾರು ಅಂಗಡಿಗಳು ಭಸ್ಮ

ಪಶ್ಚಿಮ ಬಂಗಾಳದ ಹೌರಾ ಮಾರುಕಟ್ಟೆಯಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ನೂರಾರು ಅಂಗಡಿಗಳು ಸುಟ್ಟು ಭಸ್ಮವಾಗಿರುವ ಘಟನೆ ಶನಿವಾರ ನಡೆದಿದೆ.

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಹೌರಾ ಮಾರುಕಟ್ಟೆಯಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ನೂರಾರು ಅಂಗಡಿಗಳು ಸುಟ್ಟು ಭಸ್ಮವಾಗಿರುವ ಘಟನೆ ಶನಿವಾರ ನಡೆದಿದೆ.

ಮಾರುಕಟ್ಟೆಯಲ್ಲಿ ತಡರಾತ್ರಿ ಬೆಂಕಿ ಕಾಣಿಸಿಕೊಂಡಿದೆ. ಇದರಂತೆ ಒಂದಕ್ಕೊಂದು ಅಂಗಡಿಯಂತೆ ಇಡೀ ಮಾರುಕಟ್ಟೆಗೆ ಬೆಂಕಿಯ ಕೆನ್ನಾಲಿಗೆ ಹರಡಿದೆ. ಪರಿಣಾಮ ಅಪಾರ ಮೌಲ್ಯದ ಆಹಾರ ಪದಾರ್ಥ, ಇತರೆ ವಸ್ತುಗಳು ಸುಟ್ಟು ಭಸ್ಮವಾಗಿವೆ.

ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕಾಗಮಿಸಿರುವ ಅಧಿಕಾರಿಗಳು, 18 ಅಗ್ನಿಶಾಮಕ ವಾಹನಗಳಿಂದ ಬೆಂಕಿ ನದಿಸುವ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಘಟನೆ ಕುರಿತು ಮಾತನಾಡಿದ ವಿಭಾಗೀಯ ಅಗ್ನಿಶಾಮಕ ಅಧಿಕಾರಿ ರಂಜನ್ ಕುಮಾರ್ ಘೋಷ್ ಅವರು, ಘಟನೆಯ ಬಗ್ಗೆ ನಮಗೆ ಮಾಹಿತಿ ಬಂದ ಕೂಡಲೇ ಅಗ್ನಿಶಾಮಕ ವಾಹನಗಳನ್ನು ಸ್ಥಳಕ್ಕೆ ಕಳುಹಿಸಲಾಯಿತು. ನಮ್ಮ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ ಎಂದು ಹೇಳಿದ್ದಾರೆ.

ಅಗ್ನಿ ಅವಘಡದಿಂದಾಗಿ ನೂರಾರು ಅಂಗಡಿಗಳಿಗೆ ಹಾನಿಯಾಗಿವೆ ಎಂದು ಸ್ಥಳೀಯರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!

'ಹನೂರು ಎನ್‌ಕೌಂಟರ್': ತಮಿಳುನಾಡು ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ ಉದಯನಿಧಿ ಸ್ಟಾಲಿನ್! ಉನ್ನತ ಮಟ್ಟದ ನ್ಯಾಯಾಂಗ ತನಿಖೆಗೆ ಆಗ್ರಹ