ಸಾಂದರ್ಭಿಕ ಚಿತ್ರ 
ದೇಶ

ಬಿಹಾರ: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ, ಶಿಕ್ಷಕನ ಬಂಧನ

ಕಾಂಪ್ರೊಮೈಸಿಂಗ್ ಸ್ಥಿತಿಯಲ್ಲಿ ಸಿಕ್ಕಿಬಿದ್ದ ಅಪ್ರಾಪ್ತ ವಯಸ್ಸಿನ ಬಾಲಕಿ ಹಾಗೂ ಶಿಕ್ಷಕನನ್ನು ಮೂವರು ವಿವಸ್ತ್ರಗೊಳಿಸಿ ಥಳಿಸಿರುವ ಘಟನೆ ಬಿಹಾರದ ಬೇಗುಸರಾಯ್ ಜಿಲ್ಲೆಯಲ್ಲಿ ಶುಕ್ರವಾರ ನಡೆದಿದೆ.

ಬೇಗುಸರಾಯ್: ಕಾಂಪ್ರೊಮೈಸಿಂಗ್ ಸ್ಥಿತಿಯಲ್ಲಿ ಸಿಕ್ಕಿಬಿದ್ದ ಅಪ್ರಾಪ್ತ ವಯಸ್ಸಿನ ಬಾಲಕಿ ಹಾಗೂ ಶಿಕ್ಷಕನನ್ನು ಮೂವರು ವಿವಸ್ತ್ರಗೊಳಿಸಿ ಥಳಿಸಿರುವ ಘಟನೆ ಬಿಹಾರದ ಬೇಗುಸರಾಯ್ ಜಿಲ್ಲೆಯಲ್ಲಿ ಶುಕ್ರವಾರ ನಡೆದಿದೆ. ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಮೂವರು ವ್ಯಕ್ತಿಗಳು ಅಪ್ರಾಪ್ತ ಬಾಲಕಿ ಮತ್ತು ಶಿಕ್ಷಕನ ಮೇಲೆ ಹಲ್ಲೆ ನಡೆಸಿ ವಿವಸ್ತ್ರಗೊಳಿಸುತ್ತಿರುವುದನ್ನು ತೋರಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸಂತ್ರಸ್ತೆ ನೀಡಿದ ಹೇಳಿಕೆ ಆಧರಿಸಿ ಸಂಗೀತ ಶಿಕ್ಷಕನನ್ನು ಬಂಧಿಸಿದ್ದೇವೆ. ಆರೋಪಿ ವಿರುದ್ಧ ಮಕ್ಕಳ ಲೈಂಗಿಕ ಅಪರಾಧಗಳ ಸಂರಕ್ಷಣಾ ಕಾಯ್ದೆ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆ, ಮಾಹಿತಿ ತಂತ್ರಜ್ಞಾನ (ಐಟಿ) ಕಾಯ್ದೆಯ ಸೆಕ್ಷನ್ 67 ಬಿ ಮತ್ತು ಐಪಿಸಿ ಸೆಕ್ಷನ್ 376 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ಸೂಪರಿಟೆಂಡ್ ಯೋಗೇಂದ್ರ ಕುಮಾರ್ ತಿಳಿಸಿದ್ದಾರೆ.

ಅಪ್ರಾಪ್ತ ಬಾಲಕಿ ಮತ್ತು ಆರೋಪಿಗಳ ಮೇಲೆ ಹಲ್ಲೆ ನಡೆಸಿದ ಮೂವರು ವ್ಯಕ್ತಿಗಳನ್ನು ಬಂಧಿಸಲು ಶೋಧ ನಡೆಸಲಾಗುತ್ತಿದೆ. ಘಟನೆ ಗುರುವಾರ ನಡೆದಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ "ಪೊಲೀಸರು ವೀಡಿಯೊವನ್ನು ಪರಿಶೀಲಿಸುತ್ತಿದ್ದಾರೆ ಮತ್ತು ಇಬ್ಬರು ವ್ಯಕ್ತಿಗಳ ಬಟ್ಟೆಗಳನ್ನು ಮತ್ತು ಸ್ಥಳದಿಂದ ವಶಪಡಿಸಿಕೊಂಡ ಇತರ ಪುರಾವೆಗಳನ್ನು ವಿಧಿವಿಜ್ಞಾನ ಪರೀಕ್ಷೆಗೆ ಕಳುಹಿಸಿದ್ದಾರೆ ಎಂದು ಕುಮಾರ್ ಹೇಳಿದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್