ದೇಶ

ಮಣಿಪುರ ಹಿಂಸಾಚಾರ: ರಾಷ್ಟ್ರಪತಿ ದ್ರೌಪದಿ ಮುರ್ಮು ಮಧ್ಯಪ್ರವೇಶಕ್ಕೆ ಜಾರ್ಖಾಂಡ್ ಸಿಎಂ ಆಗ್ರಹ

Manjula VN

ರಾಂಚಿ: ಮಣಿಪುರದಲ್ಲಿ ಹಿಂಸಾಚಾರ ಭುಗಿಲೆದ್ದಿದ್ದು, ಮಧ್ಯಪ್ರವೇಶಿಸಿ ಈಶಾನ್ಯ ರಾಜ್ಯದಲ್ಲಿ ಶಾಂತಿ ಮರುಸ್ಥಾಪಿಸುವಂತೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಜಾರ್ಖಾಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರು ಆಗ್ರಹಿಸಿದ್ದಾರೆ.

ರಾಷ್ಟ್ರಪತಿಗಳಿಗೆ ಪತ್ರ ಬರೆದಿರುವ ಜಾರ್ಖಾಂಡ್ ಸಿಎಂ, ಮಣಿಪುರದಲ್ಲಿ ಬುಡಕಟ್ಟು ಜನಾಂಗದವರನ್ನು 'ಅನಾಗರಿಕ ರೀತಿಯಲ್ಲಿ' ನಡೆಸಿಕೊಳ್ಳಲು ಬಿಡಲು ಸಾಧ್ಯವಿಲ್ಲ. ಈಶಾನ್ಯ ರಾಜ್ಯದಲ್ಲಿ ಮಹಿಳೆಯರನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡಿರುವ ಘಟನೆ ಬಳಿಕ ಬಹಳ ದುಃಖದಿಂದ ಪತ್ರ ಬರೆಯುತ್ತಿದ್ದಾರೆ. ಕ್ರೌರ್ಯದ ಎದುರು ಮೌನವಾಗಿರುವುದು ಭಯಾನಕ ಅಪರಾಧ ಮತ್ತು ಆದ್ದರಿಂದ ಮಣಿಪುರ ರಾಜ್ಯದಲ್ಲಿ ನಡೆಯುತ್ತಿರುವ ಹಿಂಸಾಚಾರದ ಬಗ್ಗೆ ಭಾರವಾದ ಹೃದಯ ಮತ್ತು ದುಃಖದಿಂದ ನಿಮಗೆ ಪತ್ರ ಬರೆಯುತ್ತಿದ್ದೇನೆ. ಮಣಿಪುರ ಪರಿಸ್ಥಿತಿ ಬಹಳ ಕಳವಳವನ್ನುಂಟು ಮಾಡುತ್ತಿದೆ.

ಕಳೆದ ಎರಡು ತಿಂಗಳುಗಳಿಂದ ಮಣಿಪುರ ಹೊತ್ತಿ ಉರಿಯುತ್ತಿದೆ, ಹೃದಯ ವಿದ್ರಾವಕ ವೀಡಿಯೊಗಳು ಹೊರಬರುತ್ತಿವೆ. ಮಣಿಪುರದ ಜನತೆಗೆ ನ್ಯಾಯ ದೊರಕಿಸಿಕೊಡಬೇಕು. ಅಲ್ಲಿ ಶಾಂತಿಯನ್ನು ಮರುಸ್ಥಾಪಿಸಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.

ಮಣಿಪುರದ ಇಂಫಾಲದಲ್ಲಿ ನೆಲೆಸಿರುವ ಬಹುಸಂಖ್ಯಾತ ಮೈತೇಯಿ ಸಮುದಾಯ ಮತ್ತು ಗುಡ್ಡಗಾಡು ಪ್ರದೇಶದಲ್ಲಿ ನೆಲೆಸಿರುವ ಬುಡಕಟ್ಟು ಕುಕಿಗಳ ನಡುವೆ ಮೇ 3 ರಿಂದ ಜನಾಂಗೀಯ ಘರ್ಷಣೆ ನಡೆಯುತ್ತಲೇ ಇದೆ. ಈ ಘರ್ಷಣೆ ಹಿಂಸಾಚಾರ ರೂಪ ಪಡೆದುಕೊಂಡಿದ್ದು, ಈ ವರೆಗೂ 160 ಮಂದಿ ಬಲಿಯಾಗಿದ್ದಾರೆ. ಅಲ್ಲದೆ, ಹಲವರು ಗಾಯಗೊಂಡಿದ್ದಾರೆ.

SCROLL FOR NEXT