ಆರೋಪಿ ಮನೆಗೆ ಬೆಂಕಿ ಹಚ್ಚಿರುವುದು. 
ದೇಶ

ಮಣಿಪುರ ಮಹಿಳೆಯರ ಬೆತ್ತಲೆ ಮೆರವಣಿಗೆ ಪ್ರಕರಣ: ಐದನೇ ಆರೋಪಿ ಬಂಧನ

ಮಣಿಪುರದಲ್ಲಿ ಬುಡಕಟ್ಟು ಸಮುದಾಯದ ಮಹಿಳೆಯರನ್ನು ಬೆತ್ತಲುಗೊಳಿಸಿ, ರಸ್ತೆಯಲ್ಲಿ ಮೆರವಣಿಗೆ ನಡೆಸಿ, ಲೈಂಗಿಕ ದೌರ್ಜನ್ಯ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಇಂಫಾಲ್: ಮಣಿಪುರದಲ್ಲಿ ಬುಡಕಟ್ಟು ಸಮುದಾಯದ ಮಹಿಳೆಯರನ್ನು ಬೆತ್ತಲುಗೊಳಿಸಿ, ರಸ್ತೆಯಲ್ಲಿ ಮೆರವಣಿಗೆ ನಡೆಸಿ, ಲೈಂಗಿಕ ದೌರ್ಜನ್ಯ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

19 ವರ್ಷದ ಆರೋಪಿಯನ್ನು ಬಂಧಿಸಲಾಗಿದ್ದು, ಇದರೊಂದಿಗೆ ಪ್ರಕರಣ ಸಂಬಂಧ ಈ ವರೆಗೂ ಐವರು ಆರೋಪಿಗಳನ್ನು ಬಂಧನಕ್ಕೊಳಪಡಿಸಿದಂತಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಬಂಧಿಸಲಾಗಿರುವ ನಾಲ್ವರು ಆರೋಪಿಗಳನ್ನು 11 ದಿನಗಳ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಮೇ 4ರಂದು ಕಾಂಗ್‌ಪೊಕ್ಪಿ ಜಿಲ್ಲೆಯಲ್ಲಿ ನಡೆದಿದ್ದ ಹಿಂಸಾಚಾರದ ವೇಳೆ ಮಹಿಳೆಯರನ್ನು ಬೆತ್ತಲುಗೊಳಿಸಿ ಮೆರವಣಿಗೆ ಮಾಡಿದ್ದ ವಿಡಿಯೊ ಜುಲೈ 19ರಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿತ್ತು. ಇದರಿಂದ ಈಶಾನ್ಯ ರಾಜ್ಯದಲ್ಲಿ ಪರಿಸ್ಥಿತಿ ಮತ್ತೆ ಉದ್ವಿಗ್ನಗೊಂಡಿತ್ತು.

ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಕೃತ್ಯಕ್ಕೆ ದೇಶದಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು.

ಕೃತ್ಯವನ್ನು ಖಂಡಿಸಿ ಮಣಿಪುರದ ಹಲವೆಡೆ ಪ್ರತಿಭಟನೆಗಳು ನಡೆದಿವೆ. ಕುಕಿ–ಜೋ ಬುಡಕಟ್ಟು ಮಹಿಳೆಯರನ್ನು ಬೆತ್ತಲುಗೊಳಿಸಿ ಲೈಂಗಿಕ ದೌರ್ಜನ್ಯ ನಡೆಸಿದ ಪ್ರಕರಣದ ಇಬ್ಬರು ಆರೋಪಿಗಳ ಮನೆಗೆ, ಅವರದ್ದೇ ಗ್ರಾಮದ ಮಹಿಳೆಯರು ಬೆಂಕಿ ಹಚ್ಚಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್