ನವದೆಹಲಿ: ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡಿ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ.
2023ರ ಮೇ 4ರಂದು ನಡೆದ ಘಟನೆಗೆ ಸಂಬಂಧಿಸಿದಂತೆ ಇದುವರೆಗೆ ಒಟ್ಟು ಆರು ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಐವರು ಪ್ರಮುಖ ಆರೋಪಿಗಳು ಮತ್ತು ಒಬ್ಬ ಬಾಲಾಪರಾಧಿ ಸೇರಿದಂತೆ ಆರು ಮಂದಿಯನ್ನು ಬಂಧಿಸಲಾಗಿದೆ. ಮಣಿಪುರ ಪೊಲೀಸರ ಅಧಿಕೃತ ಮಾಧ್ಯಮ ಹ್ಯಾಂಡಲ್ ಟ್ವಿಟರ್‌ನಲ್ಲಿ ಬಾಲಾಪರಾಧಿ ಸೇರಿದಂತೆ ಆರು ಮಂದಿಯನ್ನು ಬಂಧಿಸಲಾಗಿದೆ. 4 ಮೇ 2023 ರಂದು ಇಬ್ಬರು ಮಹಿಳೆಯರ ವೈರಲ್ ವೀಡಿಯೊಗೆ ಸಂಬಂಧಿಸಿದಂತೆ ಇಂದು ಮತ್ತೊಬ್ಬ ಆರೋಪಿಯನ್ನು ಬಂಧಿಸಲಾಗಿದೆ. ಪ್ರಕರಣದಲ್ಲಿ ಐವರು ಪ್ರಮುಖ ಆರೋಪಿಗಳು ಮತ್ತು ಬಾಲಾಪರಾಧಿ ಸೇರಿದಂತೆ ಆರು ಜನರನ್ನು ಇದುವರೆಗೆ ಬಂಧಿಸಲಾಗಿದೆ.
ಇದನ್ನೂ ಓದಿ: ಮಣಿಪುರ ಕುರಿತು ಪ್ರಧಾನಿ ಹೇಳಿಕೆಗೆ ಒತ್ತಾಯ: ಸೋಮವಾರ ಸಂಸತ್ತಿನ ಆವರಣದಲ್ಲಿ ವಿಪಕ್ಷ ನಾಯಕರಿಂದ ಪ್ರತಿಭಟನೆ
ಮುಂದುವರೆದ ಪೊಲೀಸರ ದಾಳಿ
ಹಲವು ಶಂಕಿತ ಅಡಗುತಾಣಗಳ ಮೇಲೆ ದಾಳಿ ನಡೆಸುವ ಮೂಲಕ ಉಳಿದ ಅಪರಾಧಿಗಳನ್ನು ಬಂಧಿಸಲು ಎಲ್ಲಾ ಪ್ರಯತ್ನಗಳನ್ನು ನಡೆಸುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಜುಲೈ 20ರಂದು ಪೊಲೀಸರು ಪ್ರಕರಣದ ನಾಲ್ವರು ಆರೋಪಿಗಳನ್ನು ಬಂಧಿಸಿದರು. ನಂತರ ಎಲ್ಲರನ್ನು 11 ದಿನಗಳ ಪೊಲೀಸ್ ಕಸ್ಟಡಿಗೆ ಕಳುಹಿಸಲಾಯಿತು.
ಅಪಹರಣ, ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣ ದಾಖಲು
2023ರ ಮೇ 4ರಂದು ಅಪರಿಚಿತ ಶಸ್ತ್ರಸಜ್ಜಿತ ದುಷ್ಕರ್ಮಿಗಳು ಇಬ್ಬರು ಮಹಿಳೆಯರನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡಿದ ವೀಡಿಯೊಗೆ ಸಂಬಂಧಿಸಿದಂತೆ ನಾಂಗ್‌ಪೋಕ್ ಸೆಕ್ಮೈ ಪೊಲೀಸ್ ಠಾಣೆಯಲ್ಲಿ (ತೌಬಲ್ ಜಿಲ್ಲೆ) ಅಪರಿಚಿತ ಶಸ್ತ್ರಸಜ್ಜಿತ ದುಷ್ಕರ್ಮಿಗಳ ವಿರುದ್ಧ ಅಪಹರಣ, ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಮೇಘಚಂದ್ರ ಸಿಂಗ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.