ಮಣಿಪುರದಲ್ಲಿ ಹಿಂಸಾಚಾರ ಖಂಡಿಸಿ ಪ್ರತಿಭಟನೆ 
ದೇಶ

ಮಣಿಪುರ ಹಿಂಸಾಚಾರ: ನಾಳೆ ಗುಜರಾತ್‌ ಬುಡಕಟ್ಟು ಪ್ರದೇಶ ಬಂದ್; ಕಾಂಗ್ರೆಸ್ ನಿಂದ ಬೆಂಬಲ

ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರ ಮತ್ತು ಮಹಿಳೆಯರ ಮೇಲಿನ ದೌರ್ಜನ್ಯ ಖಂಡಿಸಿ ಗುಜರಾತ್‌ನ ಬುಡಕಟ್ಟು ಪ್ರದೇಶದಲ್ಲಿ ಭಾನುವಾರ ಬಂದ್ ಗೆ ಕರೆ ನೀಡಲಾಗಿದೆ  ಎಂದು ಬುಡಕಟ್ಟು ಮುಖಂಡರೊಬ್ಬರು ಶನಿವಾರ ತಿಳಿಸಿದ್ದಾರೆ.

ಅಹಮದಾಬಾದ್: ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರ ಮತ್ತು ಮಹಿಳೆಯರ ಮೇಲಿನ ದೌರ್ಜನ್ಯ ಖಂಡಿಸಿ ಗುಜರಾತ್‌ನ ಬುಡಕಟ್ಟು ಪ್ರದೇಶದಲ್ಲಿ ಭಾನುವಾರ ಬಂದ್ ಗೆ ಕರೆ ನೀಡಲಾಗಿದೆ  ಎಂದು ಬುಡಕಟ್ಟು ಮುಖಂಡರೊಬ್ಬರು ಶನಿವಾರ ತಿಳಿಸಿದ್ದಾರೆ.

ಈಶಾನ್ಯ ರಾಜ್ಯದಲ್ಲಿನ ಪರಿಸ್ಥಿತಿಯನ್ನು ನಿಯಂತ್ರಿಸುವಲ್ಲಿ ಆಡಳಿತಾರೂಢ ಬಿಜೆಪಿಯ "ವೈಫಲ್ಯ" ವಿರೋಧಿಸಿ ಪ್ರತಿಪಕ್ಷ ಕಾಂಗ್ರೆಸ್ ಈ ಬಂದ್‌ಗೆ ಬೆಂಬಲ ನೀಡಲು ನಿರ್ಧರಿಸಿದೆ ಎಂದು ಪಕ್ಷದ ವಕ್ತಾರರು ಹೇಳಿದ್ದಾರೆ.

ಆದಿವಾಸಿ ಏಕತಾ ಮಂಚ್ ಸೇರಿದಂತೆ ಹಲವು ಬುಡಕಟ್ಟು ಸಂಘಟನೆಗಳು ಗುಜರಾತ್‌ನ ಬುಡಕಟ್ಟು ಪ್ರಾಬಲ್ಯದ ಜಿಲ್ಲೆಗಳಲ್ಲಿ ಬಂದ್‌ಗೆ ಕರೆ ನೀಡಿವೆ.

"ಮಣಿಪುರದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ, ಮಧ್ಯಪ್ರದೇಶ ಮೂತ್ರ ವಿಸರ್ಜನೆ ಘಟನೆ ಮತ್ತು ಗುಜರಾತ್‌ನಲ್ಲಿ ಆದಿವಾಸಿಗಳ ಮೇಲಿನ ದೌರ್ಜನ್ಯವನ್ನು ಖಂಡಿಸಿ ಬುಡಕಟ್ಟು ಸಮುದಾಯ ಭಾನುವಾರ ಗುಜರಾತ್‌ನ ಬುಡಕಟ್ಟು ಪ್ರದೇಶದಲ್ಲಿ ಬಂದ್ ಆಚರಿಸಲಿದೆ" ಎಂದು ಇತ್ತೀಚೆಗೆ ಆಮ್ ಆದ್ಮಿ ಪಕ್ಷಕ್ಕೆ (ಎಎಪಿ) ರಾಜೀನಾಮೆ ನೀಡಿದ ಬುಡಕಟ್ಟು ಮುಖಂಡ ಪ್ರಫುಲ್ ವಾಸವ ಅವರು ತಿಳಿಸಿದ್ದಾರೆ.

ಯಾವುದೇ ಒಂದು ಸಂಘಟನೆ ಅಥವಾ ರಾಜಕೀಯ ಪಕ್ಷದ ಬ್ಯಾನರ್ ಅಡಿಯಲ್ಲಿ ಬಂದ್‌ಗೆ ಕರೆ ನೀಡಿಲ್ಲ. ಆದರೆ ವಿವಿಧ ಬುಡಕಟ್ಟು ಮತ್ತು ಇತರ ಸಾಮಾಜಿಕ-ರಾಜಕೀಯ ಸಂಘಟನೆಗಳ ಒಮ್ಮತದೊಂದಿಗೆ ಬಂದ್ ಗೆ ಕರೆ ನೀಡಲಾಗಿದೆ ಎಂದು ಅವರು ಹೇಳಿದ್ದಾರೆ.

ಮಣಿಪುರದಲ್ಲಿ ಕೇಂದ್ರ ಸರ್ಕಾರದ ಧೋರಣೆ ವಿರೋಧಿಸಿ ಹಲವು ಬುಡಕಟ್ಟು ಸಂಘಟನೆಗಳು ಬಂದ್‌ಗೆ ಕರೆ ನೀಡಿವೆ. ಬಂದ್‌ಗೆ ಬೆಂಬಲ ನೀಡುವಂತೆ ಕಾಂಗ್ರೆಸ್‌ಗೆ ಮನವಿ ಮಾಡಲಾಗಿದೆ ಮತ್ತು ಪಕ್ಷವು ಸಂಪೂರ್ಣವಾಗಿ ಬೆಂಬಲಿಸಲು ನಿರ್ಧರಿಸಿದೆ. ಮಣಿಪುರದ ಪರಿಸ್ಥಿತಿಗೆ ಬಿಜೆಪಿಯೇ ನೇರ ಹೊಣೆಯಾಗಿದೆ ಎಂದು ಗುಜರಾತ್ ಕಾಂಗ್ರೆಸ್ ವಕ್ತಾರ ಮನೀಶ್ ದೋಷಿ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Pak ಬಣ್ಣ ಬಯಲು: ಕಾಶ್ಮೀರ ರಕ್ತದೋಕುಳಿಗೆ 10,000 ಉಗ್ರರ ರವಾನಿಸಿದ್ದ: Hafiz Saeed ಪಾಪಕೃತ್ಯ ಬಹಿರಂಗಪಡಿಸಿದ ಮೌಲ್ವಿ, Video ವೈರಲ್

ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆ: ನಕಲಿ ಪಿಂಚಣಿದಾರರಿಗೆ ಸರ್ಕಾರ ಶಾಕ್; 18 ಲಕ್ಷ ಖಾತೆಗಳು ತಾತ್ಕಾಲಿಕ ಸ್ಥಗಿತ, ವಂಚನೆಯಲ್ಲಿ ಬೆಂಗಳೂರೇ ನಂ.1..!

ಭಾರತದ ಚುನಾವಣಾ ವ್ಯವಸ್ಥೆಯ ವಿಶ್ವಾಸಾರ್ಹತೆ ಬಗ್ಗೆ ಜಾಗತಿಕವಾಗಿ ಅತ್ಯುತ್ತಮ ಸ್ಪಷ್ಟ ಅಭಿಪ್ರಾಯ- ಟ್ರಂಪ್ ಹೇಳಿಕೆ ಬೆನ್ನಲ್ಲೇ MEA ಪ್ರತಿಕ್ರಿಯೆ!

ಮಾಜಿ ಸಚಿವ ಬಿ. ಸಿ. ನಾಗೇಶ್ ನಿಧನ: ನಾಳೆ ತಿಪಟೂರಿನಲ್ಲಿ ಅಂತ್ಯಕ್ರಿಯೆ!

ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ನಕಲಿ ಔಷಧಿ ಮರುಪ್ಯಾಕಿಂಗ್ ಬೃಹತ್ ಜಾಲ ಪತ್ತೆ: 5 ಕೋಟಿ ರೂ. ಮೌಲ್ಯದ ವಸ್ತುಗಳು ವಶಕ್ಕೆ!