ಸಂಗ್ರಹ ಚಿತ್ರ 
ದೇಶ

2011ರಿಂದ ಪೌರತ್ವ ತೊರೆದ 17.5 ಲಕ್ಷ ಮಂದಿ ಭಾರತೀಯರು!

ಈ ವರ್ಷದ ಜೂನ್‌ವರೆಗೆ 87,026 ಭಾರತೀಯರು ತಮ್ಮ ಪೌರತ್ವವನ್ನು ತ್ಯಜಿಸಿದ್ದಾರೆ ಎಂಬ ಅಂಶವನ್ನು ವಿದೇಶಾಂಗ ಸಚಿವ ಡಾ.ಎಸ್ ಜೈಶಂಕರ್ ಇತ್ತೀಚೆಗೆ ಲೋಕಸಭೆಯಲ್ಲಿ ಬಹಿರಂಗಪಡಿಸಿದ್ದಾರೆ.

ನವದೆಹಲಿ: ಈ ವರ್ಷದ ಜೂನ್‌ವರೆಗೆ 87,026 ಭಾರತೀಯರು ತಮ್ಮ ಪೌರತ್ವವನ್ನು ತ್ಯಜಿಸಿದ್ದಾರೆ ಎಂಬ ಅಂಶವನ್ನು ವಿದೇಶಾಂಗ ಸಚಿವ ಡಾ.ಎಸ್ ಜೈಶಂಕರ್ ಇತ್ತೀಚೆಗೆ ಲೋಕಸಭೆಯಲ್ಲಿ ಬಹಿರಂಗಪಡಿಸಿದ್ದಾರೆ.

2011ರಿಂದ 17.50 ಲಕ್ಷಕ್ಕೂ ಹೆಚ್ಚು ಭಾರತೀಯರು ತಮ್ಮ ಪೌರತ್ವವನ್ನು ತ್ಯಜಿಸಿದ್ದಾರೆ ಎಂದು ಡಾ. ಜೈಶಂಕರ್ ತಮ್ಮ ಲಿಖಿತ ಉತ್ತರದಲ್ಲಿ ಸೇರಿಸಿದ್ದಾರೆ. 2022ರಲ್ಲಿ 2,25,620, 2021ರಲ್ಲಿ 1,63,370 ಮತ್ತು 2020ರಲ್ಲಿ 85,256 ಭಾರತೀಯರು ತಮ್ಮ ಪೌರತ್ವವನ್ನು ತ್ಯಜಿಸಿದ್ದಾರೆ ಎಂದು ಅವರು ಹೇಳಿದರು.

ಈ ಬದಲಾಗುತ್ತಿರುವ ಪ್ರವೃತ್ತಿಗೆ ಕಾರಣಗಳನ್ನು ವಿದೇಶಾಂಗ ಸಚಿವರು ವಿವರಿಸಿದ್ದು ಕಳೆದ ಎರಡು ದಶಕಗಳಲ್ಲಿ ಜಾಗತಿಕ ಕೆಲಸದ ಸ್ಥಳವನ್ನು ಹುಡುಕುತ್ತಿರುವ ಭಾರತೀಯ ಪ್ರಜೆಗಳ ಸಂಖ್ಯೆಯು ಗಮನಾರ್ಹವಾಗಿದೆ. ಅವರಲ್ಲಿ ಹಲವರು ವೈಯಕ್ತಿಕ ಅನುಕೂಲಕ್ಕಾಗಿ ವಿದೇಶಿ ಪೌರತ್ವವನ್ನು ಆಯ್ಕೆ ಮಾಡಿಕೊಂಡಿದ್ದಾರೆ.

ಪೌರತ್ವ ತ್ಯಜಿಸುವ ಭಾರತೀಯರ ವಾರ್ಷಿಕ ಡೇಟಾ
2022 - 2,25,620
2021 - 1,63,370
2020- 85,256
2019- 1,44,017
2018- 1,34,561
2017- 1,33,049
2016- 1,41,603
2015 - 1,31,489
2014- 1,29,328
2013- 1,31,405
2012 - 1,20,923
2011 - 1,22,819

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT