ದೇಶ

ಬಿಹಾರ: ಕೊಳವೆ ಬಾವಿಗೆ ಬಿದ್ದಿದ್ದ ಮೂರು ವರ್ಷದ ಬಾಲಕನ ರಕ್ಷಣೆ, ಆಸ್ಪತ್ರೆಗೆ ರವಾನೆ!

Nagaraja AB

ಪಟ್ನಾ: ಬಿಹಾರದ ನಳಂದ ಜಿಲ್ಲೆಯ ಕುಲ್ ಗ್ರಾಮದಲ್ಲಿ ಕೊಳವೆ ಬಾವಿಗೆ ಬಿದ್ದಿದ್ದ ಮೂರು ವರ್ಷದ ಮಗುವನ್ನು ರಕ್ಷಿಸಲಾಗಿದೆ. ಸತತ 5 ಗಂಟೆಗಳ ಕಾಲ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ನೇತೃತ್ವದಲ್ಲಿ ನಡೆದ ಯಶಸ್ವಿ ಕಾರ್ಯಾಚರಣೆ  ಮೂಲಕ ಬಾಲಕನನ್ನು ರಕ್ಷಿಸಲಾಗಿದೆ.

ಬಾಲಕ ಆರೋಗ್ಯವಾಗಿದ್ದು, ಕೊಳವೆ ಬಾವಿಯಿಂದ ಸುರಕ್ಷಿತ ಮೇಲಕ್ಕೆತ್ತಿದ ನಂತರ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ನಳಂದ ಎನ್ ಡಿಆರ್ ಎಫ್ ಅಧಿಕಾರಿ ರಂಜೀತ್ ಕುಮಾರ್ ತಿಳಿಸಿದ್ದಾರೆ.

ರೈತರೊಬ್ಬರಿಗೆ ಸೇರಿದ ಕೊಳವೆ ಬಾವಿ ಮುಚ್ಚದ ಕಾರಣ ಶಿವಂ ಕುಮಾರ್ ಎಂಬ ಮಗು ಅದರೊಳಗೆ ಬಿದ್ದಿತ್ತು. ಆದರೊಂದಿಗೆ ಜೊತೆಗೆ ಆಟವಾಡುತ್ತಿದ್ದ ಮಕ್ಕಳು  ಮಗುವಿನ ಪೋಷಕರಿಗೆ ಮಾಹಿತಿ ನೀಡಿದ್ದರು. ನಂತರ ಘಟನಾ ಸ್ಥಳಕ್ಕೆ ಆಗಮಿಸಿದ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ನೇತೃತ್ವದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯಿತು.

 ಮಗುವಿಗೆ ಆಮ್ಲಜನಕ ಪೂರೈಸುವ ಮೂಲಕ ಸುರಕ್ಷಿತವಾಗಿ ಮೇಲಕ್ಕೆಲಾಗಿದೆ. ತಕ್ಷಣವೇ ಅಲ್ಲಿಯೇ ಇದ್ದ ಆಂಬ್ಯುಲೆನ್ಸ್ ಮೂಲಕ ಸಮೀಪದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. 

SCROLL FOR NEXT