ಸಂಗ್ರಹ ಚಿತ್ರ 
ದೇಶ

ತೆಲಂಗಾಣದಲ್ಲಿ ಭೀಕರ ರಸ್ತೆ ಅಪಘಾತ: ಬಿಆರ್‌ಎಸ್ ಮುಖಂಡ, ಪುತ್ರ ಸಾವು

ತೆಲಂಗಾಣದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ಮುಖಂಡ ತೌರ್ಯ ನಾಯಕ್ ಮತ್ತು ಅವರ ಪುತ್ರ ಸಾವನ್ನಪ್ಪಿದ್ದಾರೆಂದು ಭಾನುವಾರ ತಿಳಿದುಬಂದಿದೆ.

ಮೇದಕ್ (ತೆಲಂಗಾಣ): ತೆಲಂಗಾಣದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ಮುಖಂಡ ತೌರ್ಯ ನಾಯಕ್ ಮತ್ತು ಅವರ ಪುತ್ರ ಸಾವನ್ನಪ್ಪಿದ್ದಾರೆಂದು ಭಾನುವಾರ ತಿಳಿದುಬಂದಿದೆ.

ನರಸಿಂಗಿಯಿಂದ ಚೇಗುಂಟಾಗೆ ಪ್ರಯಾಣಿಸುತ್ತಿದ್ದಾಗ ರಸ್ತೆ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನರಸಿಂಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದೆ.

ತೌರ್ಯ ನಾಯಕ್ ಮತ್ತು ಅವರ ಮಗ ಅಂಕಿತ್ ಅವರು ನರಸಿಂಗಿ ಗ್ರಾಮದಿಂದ ಚೇಗುಂಟಾ ಕಡೆಗೆ ಪ್ರಯಾಣಿಸುತ್ತಿದ್ದರು. ಈ ವೇಳೆ ಕಾರಿನ ಟೈರ್ ಒಡೆದು ನಿಯಂತ್ರಣ ತಪ್ಪಿ ಡಿವೈಡರ್ ಡಿಕ್ಕಿ ಹೊಡೆದಿದೆ. ಬಳಿಕ ಲಾರಿಯೊಂದಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೃತದೇಹಗಳನ್ನು ರಾಮಾಯಣಪೇಟೆ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಎಲ್ಲವನ್ನೂ ತಡೆಯಲು ಸಾಧ್ಯವಿಲ್ಲ': CJP ದೆಹಲಿ ಪ್ರತಿಭಟನೆಗೆ ನಿರ್ಬಂಧ ಕುರಿತು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಚಾಟಿ

ಅ.10ರಂದು CJP ಪ್ರತಿಭಟನೆ ಹಿನ್ನೆಲೆ ದೆಹಲಿಗೆ ತೆರಳುವ ಹಲವು ರೈಲುಗಳು ರದ್ದು, ಪ್ರಯಾಣಿಕರಿಗೆ ಸಂಕಷ್ಟ!

ರಾಜಸ್ಥಾನದ ವಿಚಿತ್ರ ಪ್ರಕರಣ: ಮಕ್ಕಳ ಆರೈಕೆ, ಮನೆ ಸ್ವಚ್ಛತೆಗೆ ಕೈದಿಗಳ ಬಳಕೆ; ಕೊನೆಗೆ ಅದೇ ಜೈಲು ಸೇರಿದ ಅಜ್ಮೀರ್ ಮಹಿಳಾ ಜೈಲರ್‌!

'ಮಕ್ಕಳನ್ನು ಪ್ರತಿಭಟನೆಗಳಿಂದ ದೂರವಿಡಿ': ದೆಹಲಿ ಪ್ರತಿಭಟನೆಗೆ ಸಿದ್ಧತೆ, ಮಸೀದಿ ಮೈಕ್‌ನಲ್ಲಿ ಪೊಲೀಸರ ಮನವಿ! Video

'ಜೀವನ ನರಕ, ನನ್ನ ಪಾಲಿನ ದೆವ್ವ ಸತ್ತಿದೆ, ಸತ್ತ ಮಾತ್ರಕ್ಕೆ ಪಾಪ ಕಳೆಯಲ್ಲ': ನಾನಾ ಪಾಟೇಕರ್ ವಿರುದ್ಧ ನಟಿ ತನುಶ್ರೀ ದತ್ತಾ ಮತ್ತೆ ಕಿಡಿ-Video