ವೈರಲ್ ವೀಡಿಯೋ ಪ್ರಕರಣದಲ್ಲಿದ್ದ ಇನ್ನೂ 14 ಮಂದಿಯನ್ನು ಪತ್ತೆ ಮಾಡಿದ ಮಣಿಪುರ ಪೊಲೀಸರು!
ಮಹಿಳೆಯರನ್ನು ನಗ್ನಗೊಳಿಸಿ ಮೆರವಣಿಗೆ ಮಾಡಿದ್ದ ವೈರಲ್ ವೀಡಿಯೋ ಪ್ರಕರಣದಲ್ಲಿದ್ದ 14 ಮಂದಿಯನ್ನು ಮಣಿಪುರ ಪೊಲೀಸರು ಪತ್ತೆ ಮಾಡಿದ್ದಾರೆ.
ಮಣಿಪುರ: ಮಹಿಳೆಯರನ್ನು ನಗ್ನಗೊಳಿಸಿ ಮೆರವಣಿಗೆ ಮಾಡಿದ್ದ ವೈರಲ್ ವೀಡಿಯೋ ಪ್ರಕರಣದಲ್ಲಿದ್ದ 14 ಮಂದಿಯನ್ನು ಮಣಿಪುರ ಪೊಲೀಸರು ಪತ್ತೆ ಮಾಡಿದ್ದಾರೆ.
14 ಮಂದಿಯ ಬಂಧನಕ್ಕೆ ಪೊಲೀಸರು ಪ್ರಕ್ರಿಯೆ ಆರಂಭಿಸಿದ್ದಾರೆ. ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿದಂತೆ 6 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಮೇ.04 ರಂದು ಮಣಿಪುರದಲ್ಲಿ ಮಹಿಳೆಯರನ್ನು ನಗ್ನಗೊಳಿಸಿ ಪರೇಡ್ ಮಾಡಲಾಗಿದ್ದ 26 ಸೆಕೆಂಡ್ ಗಳ ವೀಡಿಯೋ ಜು.19 ರಂದು ವೈರಲ್ ಆಗಿತ್ತು.
ಈ ಪೈಕಿ ಓರ್ವ ಮಹಿಳೆ ಅಸ್ಸಾಂ ರೆಜಿಮೆಂಟ್ ನ ಯೋಧನ ಪತ್ನಿಯಾಗಿದ್ದಾರೆ. ಘಟನೆ ಬಗ್ಗೆ ಜೂ.21 ರಂದು ಕಾಂಗ್ಪೊಕ್ಪಿ ಜಿಲ್ಲೆಯಲ್ಲಿ ಪ್ರಕರಣ ದಾಖಲಾಗಿತ್ತು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.