ಬಸ್ ಚಕ್ರದಡಿ ಸಿಲುಕಿ ವ್ಯಕ್ತಿ ಸಾವು 
ದೇಶ

ವೇಗವಾಗಿ ಬರುತ್ತಿದ್ದ ಬಸ್ ಚಕ್ರದಡಿ ಸಿಲುಕಿ ವ್ಯಕ್ತಿ ಆತ್ಮಹತ್ಯೆ! ಭಯಾನಕ ವಿಡಿಯೋ

ವೇಗವಾಗಿ ಬರುತ್ತಿದ್ದ ಬಸ್ ಚಕ್ರದಡಿ ತಾನಾಗಿಯೇ ಸಿಲುಕಿ ವ್ಯಕ್ತಿಯೊಬ್ಬ ಸಾವನ್ನಪ್ಪಿರುವ ಘಟನೆ ಹೈದ್ರಾಬಾದ್ ನ ಗಚ್ಚಿಬೌಲಿಯಲ್ಲಿ ನಡೆದಿದೆ.

ಹೈದ್ರಾಬಾದ್: ವೇಗವಾಗಿ ಬರುತ್ತಿದ್ದ ಬಸ್ ಚಕ್ರದಡಿ ತಾನಾಗಿಯೇ ಸಿಲುಕಿ ವ್ಯಕ್ತಿಯೊಬ್ಬ ಸಾವನ್ನಪ್ಪಿರುವ ಘಟನೆ ಹೈದ್ರಾಬಾದ್ ನ ಗಚ್ಚಿಬೌಲಿಯಲ್ಲಿ ನಡೆದಿದೆ.

ವೇಗವಾಗಿ ಬರುತ್ತಿದ್ದ ಆರ್ ಟಿಸಿ ಬಸ್  ಕೊಂಡಾಪುರ ಕ್ರಾಸ್‌ರೋಡ್ಸ್‌ನಲ್ಲಿ ಸ್ವಲ್ವ ವೇಗವನ್ನು ಕಡಿಮೆ ಮಾಡುತ್ತಿದ್ದಂತೆಯೇ ಹಠಾತ್ತನೇ ಬಂದ ವ್ಯಕ್ತಿಯೊಬ್ಬ ತಾನಾಗಿಯೇ ಬಸ್ ನ ಚಕ್ರದಡಿ ಮಲಗಿಕೊಂಡಿದ್ದಾನೆ. ಇದನ್ನು ಗಮನಿಸಿದ ಸ್ಥಳೀಯರು ಕೂಡಲೇ ಆತನನ್ನು ಹೊರಗೆಳೆದು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ, ಅಲ್ಲಿ ಚಿಕಿತ್ಸೆ ಪಡೆಯುತ್ತಿರುವಾಗಲೇ ಆತ ಸಾವನ್ನಪ್ಪಿದ್ದಾನೆ.

ಮೃತನನ್ನು ಪಶ್ಚಿಮ ಬಂಗಾಳ ಮೂಲದ ಬಿಸು ರಜಬ್ ಎಂದು ಗುರುತಿಸಲಾಗಿದ್ದು, ಖಾಸಗಿ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಇಂತಹ ಜೀವ ತೆಗೆದುಕೊಳ್ಳುವ ಹಿಂದಿನ ಕಾರಣ ಇನ್ನೂ ತಿಳಿದಿಲ್ಲ. ಆದರೆ, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. 

ಘಟನೆ ಕುರಿತು ವಿಡಿಯೋವನ್ನು ಐಪಿಎಸ್ ಅಧಿಕಾರಿ ವಿ. ಸಿ. ಸಜ್ಜನರ್ ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದು, ಯಾರೂ ಕೂಡಾ ಇಂತಹ ಕ್ರಮಕ್ಕೆ ಮುಂದಾಗದಂತೆ ಜನರಲ್ಲಿ ಮನವಿ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಸ್ಟಾಲಿನ್ ಶ್ಲಾಘಿಸಿದ ಭಗವಂತ್ ಮಾನ್, ಪಂಜಾಬ್ ನಲ್ಲೂ ಉಪಾಹಾರ ಯೋಜನೆ ಜಾರಿ ಬಗ್ಗೆ ಚಿಂತನೆ

Ragigudda Metro ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

SCROLL FOR NEXT