ರಾಹುಲ್ ಗಾಂಧಿ 
ದೇಶ

"ನಾವು INDIA, ಮಣಿಪುರದಲ್ಲಿ ಭಾರತದ ಕಲ್ಪನೆ ಮರುನಿರ್ಮಾಣ ಮಾಡುತ್ತೇವೆ": ಪ್ರಧಾನಿ ಮೋದಿಗೆ ರಾಹುಲ್ ತಿರುಗೇಟು

ನಮ್ಮನ್ನು ನೀವು ಹೇಗೆ ಬೇಕಾದರೂ ಕರೆಯಿರಿ.' ಆದರೆ 'ನಾವು INDIA' ಮತ್ತು 'ಮಣಿಪುರದಲ್ಲಿ ಭಾರತದ ಕಲ್ಪನೆಯನ್ನು ಮರುನಿರ್ಮಾಣ ಮಾಡುತ್ತೇವೆ' ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ...

ನವದೆಹಲಿ: 'ನಮ್ಮನ್ನು ನೀವು ಹೇಗೆ ಬೇಕಾದರೂ ಕರೆಯಿರಿ.' ಆದರೆ 'ನಾವು INDIA' ಮತ್ತು 'ಮಣಿಪುರದಲ್ಲಿ ಭಾರತದ ಕಲ್ಪನೆಯನ್ನು ಮರುನಿರ್ಮಾಣ ಮಾಡುತ್ತೇವೆ' ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮಂಗಳವಾರ ತಿರುಗೇಟು ನೀಡಿದ್ದಾರೆ.

ಪ್ರತಿಪಕ್ಷಗಳ ಮೈತ್ರಿಕೂಟ  INDIA ದೇಶ ಕಂಡ ಅತ್ಯಂತ ದಿಕ್ಕು ತೋಚದ ಮೈತ್ರಿಕೂಟ ಎಂದು ಟೀಕಿಸಿದ್ದ ಪ್ರಧಾನಿ ಮೋದಿ, ಈಸ್ಟ್ ಇಂಡಿಯಾ ಕಂಪನಿ ಮತ್ತು ಇಂಡಿಯನ್ ಮುಜಾಹಿದ್ದೀನ್‌ ಹೆಸರುಗಳನ್ನು ಉಲ್ಲೇಖಿಸಿ, ಕೇವಲ ದೇಶದ ಹೆಸರು ಬಳಸುವುದರಿಂದ ಜನರ ದಾರಿ ತಪ್ಪಿಸಲು ಸಾಧ್ಯವಿಲ್ಲ ಎಂದು ಹೇಳಿದ್ದರು.

ಪ್ರಧಾನಿ ಮೋದಿಗೆ ತಿರುಗೇಟು ನೀಡಿ ಟ್ವೀಟ್ ಮಾಡಿದ ರಾಹುಲ್ ಗಾಂಧಿ: "ಮೋದಿ, ನಿಮಗೆ ಬೇಕಾದ ಹಾಗೆ ನಮ್ಮನ್ನು ಕರೆಯಿರಿ. ಆದರೆ ನಾವು INDIA. ನಾವು ಮಣಿಪುರದಲ್ಲಿ ಶಾಂತಿ ಸ್ಥಾಪಿಸಲು ಸಹಾಯ ಮಾಡುತ್ತೇವೆ ಮತ್ತು ಪ್ರತಿ ಮಹಿಳೆ ಮತ್ತು ಮಗುವಿನ ಕಣ್ಣೀರು ಒರೆಸುತ್ತೇವೆ. ನಾವು ಅವರಿಗೆ ಪ್ರೀತಿ ಮತ್ತು ಶಾಂತಿಯನ್ನು ಮರಳಿ ತರುತ್ತೇವೆ ಎಂದು ಹೇಳಿದ್ದಾರೆ.

"ನಾವು ಮಣಿಪುರದಲ್ಲಿ ಭಾರತದ ಕಲ್ಪನೆಯನ್ನು ಮರುನಿರ್ಮಾಣ ಮಾಡುತ್ತೇವೆ" ಎಂದು ಮಾಜಿ ಕಾಂಗ್ರೆಸ್ ಅಧ್ಯಕ್ಷ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

ಹೆಲಿಪ್ಯಾಡ್, ಸ್ವಿಮ್ಮಿಂಗ್ ಪೂಲ್, ಜಿಮ್: ಅನಿಲ್ ಅಂಬಾನಿಯ 3,716 ಕೋಟಿ ರೂ. ಬೆಲೆಬಾಳುವ 17 ಅಂತಸ್ತಿನ ಕಟ್ಟಡ 'Abode ಇಡಿ ವಶಕ್ಕೆ!

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

SCROLL FOR NEXT