ಮಲ್ಲಿಕಾರ್ಜುನ ಖರ್ಗೆ 
ದೇಶ

ಮೋದಿ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು INDIA ಮುಂದು

ಮಣಿಪುರ ಹಿಂಸಾಚಾರದ ಕುರಿತು ಸಂಸತ್ತಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆಗೆ ಆಗ್ರಹಿಸುತ್ತಿರುವ ಪ್ರತಿಪಕ್ಷಗಳ ಮೈತ್ರಿಕೂಟ ಈಗ ಲೋಕಸಭೆಯಲ್ಲಿ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸುವ ಸಾಧ್ಯತೆಯಿದೆ...

ನವದೆಹಲಿ: ಮಣಿಪುರ ಹಿಂಸಾಚಾರದ ಕುರಿತು ಸಂಸತ್ತಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆಗೆ ಆಗ್ರಹಿಸುತ್ತಿರುವ ಪ್ರತಿಪಕ್ಷಗಳ ಮೈತ್ರಿಕೂಟ INDIA, ಈಗ ಲೋಕಸಭೆಯಲ್ಲಿ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸುವ ಸಾಧ್ಯತೆಯಿದೆ ಎಂದು ಮೂಲಗಳು ಮಂಗಳವಾರ ತಿಳಿಸಿವೆ.

ಇಂದು ಬೆಳಗ್ಗೆ ನಡೆದ ಭಾರತೀಯ ರಾಷ್ಟ್ರೀಯ ಅಭಿವೃದ್ಧಿ ಒಳಗೊಂಡ ಮೈತ್ರಿಕೂಟ(ಇಂಡಿಯಾ)ದ  ಸಭೆಯಲ್ಲಿ ಅವಿಶ್ವಾಸ ನಿರ್ಣಯ ಮಂಡಿಸುವ ಬಗ್ಗೆ ಚರ್ಚಿಸಲಾಗಿದೆ.

ಮಣಿಪುರ ವಿಷಯದ ಬಗ್ಗೆ ಸಂಸತ್ತಿನಲ್ಲಿ ಚರ್ಚೆ ಪ್ರಾರಂಭಿಸುವಂತೆ ಸರ್ಕಾರವನ್ನು ಒತ್ತಾಯಿಸಲು ಇದು ಪರಿಣಾಮಕಾರಿ ಮಾರ್ಗವಾಗಿದೆ ಎಂದು ವಿವಿಧ ಪಕ್ಷಗಳು ಹೇಳಿದ ನಂತರ ಅವಿಶ್ವಾಸ ನಿರ್ಣಯ ಮಂಡಿಸುವ ನಿರ್ಧಾರಕ್ಕೆ ಬರಲಾಗಿದೆ ಎಂದು ಮೂಲಗಳು ತಿಳಿಸಿವೆ.

ಮಣಿಪುರ ವಿಚಾರಕ್ಕೆ ಸಂಬಂಧಿಸಿದಂತೆ ಮೋದಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸುವ ವಿಪಕ್ಷಗಳ ತಂತ್ರ ರಾಜ್ಯಸಭೆಯಲ್ಲೂ ಮುಂದುವರಿಯಲಿದೆ ಎಂದು ಮೂಲಗಳು ತಿಳಿಸಿವೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಅವರು, ಪ್ರತಿಪಕ್ಷಗಳ ನಡೆಯ ಬಗ್ಗೆ ನನಗೆ ಮಾಹಿತಿ ಇಲ್ಲ. ಆದರೆ ಅವರು ಕಳೆದ ಬಾರಿಯೂ ಅವಿಶ್ವಾಸ ನಿರ್ಣಯ ತಂದ ವಿಫಲವಾಗಿದ್ದಾರೆ. ಬಿಜೆಪಿ 300ಕ್ಕೂ ಹೆಚ್ಚು ಸ್ಥಾನಗಳ ಪ್ರಬಲ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೆ ಬಂದಿತು. ಈಗ ಮತ್ತೆ ಅದೇ ಆಗಲಿದೆ ಎಂದಿದ್ದಾರೆ.

ಲೋಕಸಭೆಯಲ್ಲಿ ಮೋದಿ ಸರ್ಕಾರದ ವಿರುದ್ಧ ಮೊದಲ ಅವಿಶ್ವಾಸ ನಿರ್ಣಯವನ್ನು ಜುಲೈ 20, 2018 ರಂದು ಮಂಡಿಸಲಾಯಿತು. ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ(NDA) ಅವಿಶ್ವಾಸ ನಿರ್ಣಯದ ಪರವಾಗಿ 325 ಸಂಸದರು ಮತ್ತು ವಿರುದ್ಧವಾಗಿ ಕೇವಲ 126 ಸಂಸದರು ಮತ ಚಲಾಯಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭೀಕರ ಮಳೆಗೆ ಜಮ್ಮು-ಕಾಶ್ಮೀರ ತತ್ತರ: ಸಾವಿನ ಸಂಖ್ಯೆ 41ಕ್ಕೆ ಏರಿಕೆ; ಕೇಂದ್ರದಿಂದ ನೆರವಿನ ಭರವಸೆ; ಮುಂದುವರೆದ ರಕ್ಷಣಾ ಕಾರ್ಯಾಚರಣೆ

ಭಾರತದ ಮೇಲೆ ಅಮೆರಿಕಾ ಸುಂಕಾಸ್ತ್ರ: ದೇಶ ರಕ್ಷಿಸುವಲ್ಲಿ ಪ್ರಧಾನಿ ಮೋದಿ ವಿಫಲ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

ಜಮ್ಮು-ಕಾಶ್ಮೀರದ ಬಂಡಿಪೋರಾದಲ್ಲಿ ಗುಂಡಿನ ಚಕಮಕಿ: ಇಬ್ಬರು ಉಗ್ರರ ಹತ್ಯೆ

RSS Song Controversy: ಡಿಕೆಶಿ ಆರ್‌ಎಸ್‌ಎಸ್‌ ಗೀತೆ ಹಾಡಿದ್ದು ತಪ್ಪು, ಕ್ಷಮೆ ಕೇಳಿದ್ದರಿಂದ ಎಲ್ಲವೂ ಮುಗಿದಿದೆ; ಮಲ್ಲಿಕಾರ್ಜುನ ಖರ್ಗೆ

ವಾಲ್ಮೀಕಿ ನಿಗಮ ಹಗರಣ: ಜಾರಿ ನಿರ್ದೇಶನಾಲಯದಿಂದ 5 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು !

SCROLL FOR NEXT