ಪ್ರಹ್ಲಾದ್ ಜೋಶಿ 
ದೇಶ

ವಿಪಕ್ಷಗಳ ನಡವಳಿಕೆ ಶಾಶ್ವತವಾಗಿ ವಿರೋಧ ಪಕ್ಷದಲ್ಲಿ ಕುಳಿತುಕೊಳ್ಳುವಂತೆ ಮಾಡುತ್ತದೆ: ಪ್ರಧಾನಿ ಹೇಳಿಕೆ ಉಲ್ಲೇಖಿಸಿದ ಪ್ರಹ್ಲಾದ್ ಜೋಶಿ

ಸಂಸತ್ತು ಕಲಾಪ ವೇಳೆ ಪ್ರತಿಪಕ್ಷಗಳ ನಡವಳಿಕೆಯು ಅವರು ಮುಂಬರುವ ವರ್ಷಗಳಲ್ಲಿ ಶಾಶ್ವತವಾಗಿ ವಿರೋಧ ಪಕ್ಷದಲ್ಲಿ ಉಳಿಯಲು ಬಯಸುತ್ತಾರೆ ಎಂಬುದನ್ನು ತೋರಿಸುತ್ತದೆ. ಇಡೀ ಜಗತ್ತು ನಮ್ಮ ಸರ್ಕಾರದ ಮೇಲೆ ನಂಬಿಕೆಯನ್ನು ಹೊಂದಿದೆ.

ನವದೆಹಲಿ: ಸಂಸತ್ತು ಕಲಾಪ ವೇಳೆ ಪ್ರತಿಪಕ್ಷಗಳ ನಡವಳಿಕೆಯು ಅವರು ಮುಂಬರುವ ವರ್ಷಗಳಲ್ಲಿ ಶಾಶ್ವತವಾಗಿ ವಿರೋಧ ಪಕ್ಷದಲ್ಲಿ ಉಳಿಯಲು ಬಯಸುತ್ತಾರೆ ಎಂಬುದನ್ನು ತೋರಿಸುತ್ತದೆ. ಇಡೀ ಜಗತ್ತು ನಮ್ಮ ಸರ್ಕಾರದ ಮೇಲೆ ನಂಬಿಕೆಯನ್ನು ಹೊಂದಿದೆ. ಮೂರನೇ ಅವಧಿಗೆ ಮತ್ತೊಮ್ಮೆ ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವುದರಲ್ಲಿ ಸಂಶಯವಿಲ್ಲ ಎಂದು ಬಿಜೆಪಿ ಸಂಸದೀಯ ಮಂಡಳಿ ಸಭೆಯಲ್ಲಿ ಹೇಳಿದ್ದಾರೆ ಎಂದು ಸಭೆಯ ಬಳಿಕ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಮಾಧ್ಯಮಗಳಿಗೆ ತಿಳಿಸಿದರು.

ಎನ್ ಡಿಎ ಮೈತ್ರಿಕೂಟಕ್ಕೆ 25 ವರ್ಷವಾಗುತ್ತಿದೆ. ಈ ಸಂದರ್ಭದಲ್ಲಿ ಪಕ್ಷದ ದೃಷ್ಟಿಯಿಂದ ಮತ್ತು ದೇಶದ ಹಿತದೃಷ್ಟಿಯಿಂದ ಮುಖ್ಯವಾಗಿದೆ. ಮೈತ್ರಿಕೂಟವನ್ನು ಮತ್ತಷ್ಟು ಮುನ್ನಡೆಸಲು ಹಲವು ಕಾರ್ಯಕ್ರಮಗಳ ಬಗ್ಗೆ ಇಂದಿನ ಸಭೆಯಲ್ಲಿ ಚರ್ಚೆ ನಡೆಸಲಾಯಿತು. ಮುಂದಿನ ಲೋಕಸಭೆ ಚುನಾವಣೆಯಲ್ಲಿ ಎನ್ ಡಿಎ ಗೆದ್ದು ಭಾರತವನ್ನು ಮತ್ತಷ್ಟು ಪ್ರಬಲ ಆರ್ಥಿಕತೆ ದೇಶವನ್ನಾಗಿ ಪರಿವರ್ತಿಸಲಿದೆ ಎಂದು ಪ್ರಧಾನಿಯವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ ಎಂದರು. 

2019ರ ಮೊದಲ ಅವಧಿಯಲ್ಲಿ ವಿರೋಧ ಪಕ್ಷಗಳು ನಮ್ಮ ವಿರುದ್ಧ ಅವಿಶ್ವಾಸ ಗೊತ್ತುವಳಿಯನ್ನು ತಂದವು, ಆಗ ನಮ್ಮ ಸ್ಥಾನ 282ರಿಂದ 303ಕ್ಕೆ ಏರಿಕೆಯಾಯಿತು. ಈ ಬಾರಿ ಕೂಡ ಅವಿಶ್ವಾಸ ಗೊತ್ತುವಳಿ ತರಲಿ, ನಾವು ಮುಂದಿನ ಲೋಕಸಭೆ ಚುನಾವಣೆಯಲ್ಲಿ 350ಕ್ಕಿಂತ ಹೆಚ್ಚಿನ ಸೀಟು ಗೆಲ್ಲುತ್ತೇವೆ ಎಂಬ ನಂಬಿಕೆ, ವಿಶ್ವಾಸವಿದೆ ಎಂದರು.

ಈ ವರ್ಷ ಆಗಸ್ಟ್ 15ರಂದು ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ಪ್ರತಿ ಮನೆ ತಿರಂಗ(Har Ghar Tirang) ಕಾರ್ಯಕ್ರಮವನ್ನು ಆಯೋಜಿಸಬೇಕು. ಪ್ರತಿ ವಿಧಾನಸಭಾ ಕ್ಷೇತ್ರಗಳಲ್ಲಿ ಇದು ನಡೆಯಬೇಕು ಎಂದು ಪ್ರಧಾನಿ ಸೂಚಿಸಿದ್ದಾರೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

SCROLL FOR NEXT