ದೇಶ

ಮಣಿಪುರದಲ್ಲಿ ಇಬ್ಬರು ಮಹಿಳೆಯರ ಬೆತ್ತಲೆ ಮೆರವಣಿಗೆ ಪ್ರಕರಣ ಸಿಬಿಐಗೆ ವಹಿಸಿದ ಕೇಂದ್ರ

Lingaraj Badiger

ನವದೆಹಲಿ: ಮಣಿಪುರದಲ್ಲಿ ಗುಂಪೊಂದು ಇಬ್ಬರು ಮಹಿಳೆಯರ ಬೆತ್ತಲೆ ಮೆರವಣಿಗೆ ನಡೆಸಿ, ಅವರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣವನ್ನು ಸಿಬಿಐ ತನಿಖೆ ನಡೆಸಲಿದೆ ಮತ್ತು ರಾಜ್ಯದ ಹೊರಗೆ ಪ್ರಕರಣದ ವಿಚಾರಣೆ ನಡೆಸಲು ಸರ್ಕಾರ ಕೋರಲಿದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.

ನೆರೆಯ ಅಸ್ಸಾಂನ ನ್ಯಾಯಾಲಯದಲ್ಲಿ ಈ ಪ್ರಕರಣದ ವಿಚಾರಣೆ ನಡೆಸಲಾಗುವುದು ಎಂದು ಅವರು ಹೇಳಿದ್ದಾರೆ.

ದೇಶಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದ ಮತ್ತು ಪ್ರತಿಪಕ್ಷಗಳಿಂದ ತೀವ್ರ ಪ್ರತಿಭಟನೆಗೆ ಕಾರಣವಾಗಿದ್ದ ಮಹಿಳೆಯರ ಬೆತ್ತಲೆ ಮೆರವಣಿಗೆ ಪ್ರಕರಣವನ್ನು ಕೇಂದ್ರ ಗೃಹ ಸಚಿವಾಲಯ ಸಿಬಿಐಗೆ ವಹಿಸಿದೆ ಎಂದು ಮೂಲಗಳು ತಿಳಿಸಿವೆ.

ಕೇಂದ್ರ ಗೃಹ ಸಚಿವಾಲಯವು ಮೈಟಿ ಮತ್ತು ಕುಕಿ ಎರಡೂ ಗುಂಪುಗಳೊಂದಿಗೆ ಸಂಪರ್ಕದಲ್ಲಿದೆ ಮತ್ತು ಮಣಿಪುರದಲ್ಲಿ ಸಹಜ ಸ್ಥಿತಿ ಪುನಃಸ್ಥಾಪಿಸಲು ಮಾತುಕತೆ ಮುಂದುವರಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

SCROLL FOR NEXT