ಮಣಿಪುರದಲ್ಲಿ ಹಿಂಸಾಚಾರ ಖಂಡಿಸಿ ಪ್ರತಿಭಟನೆ 
ದೇಶ

ಮಣಿಪುರದಲ್ಲಿ ಮತ್ತೆ ಹಿಂಸಾಚಾರ; ಓರ್ವ ಸಾವು, ಮೂವರಿಗೆ ಗಾಯ

ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರ ಮುಂದುವರೆದಿದ್ದು, ಗುರುವಾರ ಎರಡು ಗುಂಪುಗಳ ನಡುವೆ ಹಲವು ಗಂಟೆಗಳ ಕಾಲ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಒಬ್ಬರು ಸಾವನ್ನಪ್ಪಿದ್ದಾರೆ ಮತ್ತು ಮೂವರು ಗಾಯಗೊಂಡಿದ್ದಾರೆ.

ಇಂಫಾಲ್: ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರ ಮುಂದುವರೆದಿದ್ದು, ಗುರುವಾರ ಎರಡು ಗುಂಪುಗಳ ನಡುವೆ ಹಲವು ಗಂಟೆಗಳ ಕಾಲ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಒಬ್ಬರು ಸಾವನ್ನಪ್ಪಿದ್ದಾರೆ ಮತ್ತು ಮೂವರು ಗಾಯಗೊಂಡಿದ್ದಾರೆ.

ಇಂಫಾಲ್ ಕಣಿವೆಯ ಮೈತೆಯ್ ಪ್ರಾಬಲ್ಯದ ಬಿಷ್ಣುಪುರ್ ಜಿಲ್ಲೆ ಮತ್ತು ಬೆಟ್ಟಗಳಲ್ಲಿರುವ ಕುಕಿ ಪ್ರಾಬಲ್ಯದ ಚುರಾಚಂದ್‌ಪುರ ಜಿಲ್ಲೆಯ ಗಡಿಯಲ್ಲಿರುವ ಕಾಂಗ್ವೈನಲ್ಲಿ ಹೊಸ ಹಿಂಸಾಚಾರ ಘಟನೆ ವರದಿಯಾಗಿದೆ. ಇಂದು ಬೆಳಗ್ಗೆಯೇ ಹಿಂಸಾಚಾರ ಭುಗಿಲೆದ್ದಿತು ಮತ್ತು ಅದು ಮಧ್ಯಾಹ್ನದವರೆಗೂ ಮುಂದುವರೆಯಿತು.

ಹಲವು ಮನೆಗಳಿಗೂ ಬೆಂಕಿ ಹಚ್ಚಲಾಗಿದೆ ಎಂದು ವರದಿಯಾಗಿದ್ದು, ಸಾವು ನೋವಿನ ನಿಖರ ಸಂಖ್ಯೆ ಇನ್ನೂ ತಿಳಿದು ಬಂದಿಲ್ಲ.

ಸ್ಥಳೀಯ ಬುಡಕಟ್ಟು ನಾಯಕರ ವೇದಿಕೆ (ITLF) ಘಟನೆಯಲ್ಲಿ ಕುಕಿ-ಝೋ ಸಮುದಾಯದಿಂದ ಒಬ್ಬ ವ್ಯಕ್ತಿಯ ಸಾವು ಮತ್ತು ಇತರ ಮೂವರಿಗೆ ಗಾಯಗಳನ್ನು ದೃಢೀಕರಿಸುವ ಹೇಳಿಕೆಯನ್ನು ನೀಡಿದೆ.

ಹಿಂಸಾಚಾರದಲ್ಲಿ ಮೃತಪಟ್ಟ ವ್ಯಕ್ತಿಯನ್ನು ಲುನ್‌ಮಿಂಥಾಂಗ್(30) ಎಂದು ಗುರುತಿಸಲಾಗಿದ್ದು, ಗಾಯಗೊಂಡವರನ್ನು ಜಂಗ್‌ಖೋಲೆನ್ ಹಾಕಿಪ್(28), ಕಮ್ಮಿನ್‌ಲಾಲ್(32) ಮತ್ತು ತಂಜಾಹಾವೊ (34) ಎಂದು ಗುರುತಿಸಲಾಗಿದೆ ಎಂದು ಸ್ಥಳೀಯ ಬುಡಕಟ್ಟು ನಾಯಕರ ವೇದಿಕೆ ಐಟಿಎಲ್‌ಎಫ್ ಪ್ರಕಟಣೆಯಲ್ಲಿ ತಿಳಿಸಿದೆ.

ಇಂದು ಬೆಳಗಿನ ಜಾವ 4 ಗಂಟೆ ಸುಮಾರಿಗೆ ಹಿಂಸಾಚಾರ ಭುಗಿಲೆದ್ದಿದ್ದು, ಇದು ಬಹುತೇಕ ಇಡೀ ದಿನ ಮುಂದುವರೆಯಿತು ಎಂದು ಐಟಿಎಲ್‌ಎಫ್ ತಿಳಿಸಿದೆ. ದಾಳಿಯಲ್ಲಿ ಬಾಂಬ್‌ಗಳನ್ನೂ ಬಳಸಲಾಗಿದೆ ಎಂದು ಐಟಿಎಲ್‌ಎಫ್ ಆರೋಪಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ