ಸ್ಫೋಟ ಸಂಭವಿಸಿದ ಸ್ಥಳದ ಚಿತ್ರ 
ದೇಶ

ತಮಿಳುನಾಡು: ಪಟಾಕಿ ತಯಾರಿಕೆ ಘಟಕದಲ್ಲಿ ಸ್ಫೋಟ, 8 ಜನರ ಸಾವು; ಪ್ರಧಾನಿ, ಸಿಎಂ ಪರಿಹಾರ ಘೋಷಣೆ

ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಪಟಾಕಿ ತಯಾರಿಕೆ ಘಟಕದಲ್ಲಿ ಶನಿವಾರ ಸಂಭವಿಸಿದ ಸ್ಫೋಟದಲ್ಲಿ ಮೂವರು ಮಹಿಳೆ ಸೇರಿದಂತೆ ಎಂಟು ಮಂದಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.  

ಕೃಷ್ಣಗಿರಿ: ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಪಟಾಕಿ ತಯಾರಿಕೆ ಘಟಕದಲ್ಲಿ ಶನಿವಾರ ಸಂಭವಿಸಿದ ಸ್ಫೋಟದಲ್ಲಿ ಮೂವರು ಮಹಿಳೆ ಸೇರಿದಂತೆ ಎಂಟು ಮಂದಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.  

ಜಿಲ್ಲೆಯ ಪಳಯಪೇಟೈ ಪಟಾಕಿ ತಯಾರಿಕಾ ಘಟಕದ ಗೋದಾಮಿನಲ್ಲಿ ಹಠಾತ್ ಸ್ಫೋಟ ಸಂಭವಿಸಿದ್ದು, ಸಮೀಪದ ಮನೆಗಳು ಹಾಗೂ ಅಂಗಡಿಗಳಿಗೆ ಹಾನಿಯಾಗಿದೆ. ಪೊಲೀಸರು, ಅಗ್ನಿಶಾಮಕ ಮತ್ತು ರಕ್ಷಣಾ ಪಡೆ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾ ನಡೆಸಿದ್ದಾರೆ. ಸ್ಫೋಟಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. 

ಇನ್ನೂ ಈ ಸ್ಫೋಟಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಕ್ಕೆ ತಲಾ 2 ಮತ್ತು ಗಾಯಗೊಂಡವರಿಗೆ ತಲಾ 50, 000 ರೂ. ಪರಿಹಾರ ಘೋಷಿಸಿದ್ದಾರೆ. ಈ ಕುರಿತು ಪ್ರಧಾನ ಮಂತ್ರಿ ಕಾರ್ಯಾಲಯ ಟ್ವೀಟ್ ಮಾಡಿದೆ.

ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ ತಮಿಳುನಾಡು ಸಿಎಂ ಎಂ.ಕೆ. ಸ್ಟಾಲಿನ್ ಮೃತರ ಕುಟುಂಬಕ್ಕೆ ತಲಾ 3 ಲಕ್ಷ ರೂಪಾಯಿ ಹಾಗೂ ಗಾಯಾಗಳುಗಳಿಗೆ 50,000 ರೂಪಾಯಿಯನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಒದಗಿಸುವಂತೆ ಅಧಿಕಾರಿಗಳಿಗೆ ನಿರ್ದೇಶಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ವಿಧಾನಸಭೆಯಲ್ಲಿ ಸಾಮಾಜಿಕ ಬಹಿಷ್ಕಾರ ನಿಷೇಧ ಮಸೂದೆ ಮಂಡನೆ; ನಿಯಮ ಉಲ್ಲಂಘಿಸಿದರೆ 3 ವರ್ಷ ಜೈಲು

ಪೊಲೀಸ್, ಅರಣ್ಯ ಇಲಾಖೆಗಳಲ್ಲಿ ಕ್ರೀಡಾ ಪಟುಗಳಿಗೆ ಮೀಸಲಾತಿ ಜಾರಿಗೆ- ಸಿಎಂ ಸಿದ್ದರಾಮಯ್ಯ

ಅಮೆರಿಕ ಆಯ್ತು, ಈಗ ಮೆಕ್ಸಿಕೋದಿಂದಲೂ ಭಾರತದ ಮೇಲೆ ಶೇ. 50 ರಷ್ಟು ಹೆಚ್ಚುವರಿ ಸುಂಕದ ಘೋಷಣೆ!

ಭಾರತದ ಜಲಗಡಿ ಪ್ರವೇಶಿಸಿದ ಪಾಕಿಸ್ತಾನ್ ಬೋಟ್ ವಶಕ್ಕೆ ಪಡೆದ ಕೋಸ್ಟ್ ಗಾರ್ಡ್; 11 ಸಿಬ್ಬಂದಿ ಬಂಧನ!

ನಮ್ಮ ಮೆಟ್ರೋ: ಪಿಂಕ್ ಲೈನ್‌ಗೆ ಮೊದಲ ಚಾಲಕರಹಿತ ರೈಲು ಅನಾವರಣ

SCROLL FOR NEXT