ಸಾಂದರ್ಭಿಕ ಚಿತ್ರ 
ದೇಶ

ಮಯನ್ಮಾರ್ 'ಅಕ್ರಮ'  ವಲಸಿಗರ ಬಯೋಮೆಟ್ರಿಕ್ ವಿವರ ಸಂಗ್ರಹ ಪ್ರಕ್ರಿಯೆ ಆರಂಭಿಸಿದ ಮಣಿಪುರ

ಕೇಂದ್ರ ಗೃಹ ಸಚಿವಾಲಯದ ಸೂಚನೆಯ ಮೇರೆಗೆ ಮಣಿಪುರ ಸರ್ಕಾರ ರಾಜ್ಯದಲ್ಲಿನ ಎಲ್ಲಾ "ಅಕ್ರಮ" ಮಯನ್ಮಾರ್ ವಲಸಿಗರ ಬಯೋಮೆಟ್ರಿಕ್ ಮಾಹಿತಿ ಸಂಗ್ರಹಿಸುವ ಅಭಿಯಾನವನ್ನು ಶನಿವಾರ...

ಇಂಫಾಲ್: ಕೇಂದ್ರ ಗೃಹ ಸಚಿವಾಲಯದ ಸೂಚನೆಯ ಮೇರೆಗೆ ಮಣಿಪುರ ಸರ್ಕಾರ ರಾಜ್ಯದಲ್ಲಿನ ಎಲ್ಲಾ "ಅಕ್ರಮ" ಮಯನ್ಮಾರ್ ವಲಸಿಗರ ಬಯೋಮೆಟ್ರಿಕ್ ಮಾಹಿತಿ ಸಂಗ್ರಹಿಸುವ ಅಭಿಯಾನವನ್ನು ಶನಿವಾರ ಪುನರಾರಂಭಿಸಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

"ಮಣಿಪುರ ರಾಜ್ಯದಲ್ಲಿ ಮಯನ್ಮಾರ್ ಅಕ್ರಮ ವಲಸಿಗರ ಬಯೋಮೆಟ್ರಿಕ್ ವಿವರ ಸಂಗ್ರಹಿಸುವ ಅಭಿಯಾನವನ್ನು ಸೆಪ್ಟೆಂಬರ್ ಒಳಗೆ ಪೂರ್ಣಗೊಳಿಸುವಂತೆ ಕೇಂದ್ರ ಗೃಹ ಸಚಿವಾಲಯ ಸೂಚಿಸಿದೆ. ಈ ಹಿನ್ನೆಲೆಯಲ್ಲಿ ಮಣಿಪುರ ಸರ್ಕಾರ ಇಂದಿನಿಂದ ಎಲ್ಲಾ ಅಕ್ರಮ ವಲಸಿಗರ ಬಯೋಮೆಟ್ರಿಕ್ ವಿವರ ಸಂಗ್ರಹಿಸುವ ಅಭಿಯಾನ ಪುನರಾರಂಭಿಸಿದೆ” ಎಂದು ಪ್ರಕಟಣೆ ತಿಳಿಸಿದೆ.

ಇಂದು ಇಂಫಾಲ್ ಪೂರ್ವ ಜಿಲ್ಲೆಯಲ್ಲಿ ಅಕ್ರಮ ವಲಸಿಗರ ಬಯೋಮೆಟ್ರಿಕ್ ಡೇಟಾ ಸಂಗ್ರಹಿಸುವ ಕಾರ್ಯ ನಡೆಯಿತು. ಇದಕ್ಕೆ ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ(ಎನ್‌ಸಿಆರ್‌ಬಿ) ಅಧಿಕಾರಿಗಳ ತಂಡ, ರಾಜ್ಯ ಸರ್ಕಾರದ ಅಧಿಕಾರಿಗಳಿಗೆ ಸಹಾಯ ಮಾಡಿದೆ ಎಂದು ಪ್ರಕಟಣೆ ತಿಳಿಸಿದೆ.

ಇಂಫಾಲ್ ಪೂರ್ವ ಜಿಲ್ಲೆಯ ಸೈಜ್ವಾದಲ್ಲಿರುವ ಶಿಬಿರದಲ್ಲಿ ಒಟ್ಟು 105 ಮಯನ್ಮಾರ್ ವಲಸಿಗರನ್ನು ಇರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತೀಯ ನಾವಿಕರ ಸುರಕ್ಷತೆ ಮುಖ್ಯ; ನಾಗರಿಕ ಮೂಲಸೌಕರ್ಯಗಳ ಮೇಲಿನ ದಾಳಿ ಸ್ವೀಕಾರಾರ್ಹವಲ್ಲ: ಇರಾನ್‌ಗೆ ಅಜಿತ್ ದೋವಲ್

ಜರ್ಮನಿಯ ವಸತಿ ಕಟ್ಟಡದಲ್ಲಿ ಶಂಕಿತ ಬೆಂಕಿ ಅವಘಡ: 3 ಭಾರತೀಯರು ಸಾವು!

ಹನಿಟ್ರ್ಯಾಪ್ ಪಿತೂರಿ ಪ್ರಶ್ನಿಸಿದ್ದಕ್ಕೆ ಕಿರುಕುಳ; JDS ಕಾರ್ಯಕರ್ತ CCB ವಶಕ್ಕೆ: ಕುಮಾರಸ್ವಾಮಿ ಆಕ್ರೋಶ

ಕಾಂಗ್ರೆಸ್‌ನ ಆಂತರಿಕ ಕಲಹದಿಂದ 'ಮೂರನೇ ಮುಖ್ಯಮಂತ್ರಿ' ಬಂದರೂ ಅಚ್ಚರಿ ಇಲ್ಲ: ಬಿ.ವೈ ವಿಜಯೇಂದ್ರ; Video

ಯೂಟ್ಯೂಬರ್ ಧ್ರುವ್ ರಾಠಿಗೆ ಸಂಕಷ್ಟ: 8 ವರ್ಷಗಳ ಹಿಂದಿನ ಪ್ರಕರಣಕ್ಕೆ ಮರುಜೀವ; ದೆಹಲಿ ಕೋರ್ಟ್ ಸಮನ್ಸ್!