ರಾಮದಾಸ್ ಅಠಾವಳೆ 
ದೇಶ

ನಿತೀಶ್ ಕುಮಾರ್ ಯಾವಾಗ ಬೇಕಾದರೂ ಎನ್ ಡಿಎಗೆ ಮರಳಬಹುದು: ರಾಮದಾಸ್ ಅಠವಳೆ

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಯಾವಾಗ ಬೇಕಾದರೂ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟಕ್ಕೆ(ಎನ್‌ಡಿಎ) ಮರಳಬಹುದು ಎಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವ ರಾಮದಾಸ್...

ಪಾಟ್ನಾ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಯಾವಾಗ ಬೇಕಾದರೂ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟಕ್ಕೆ(ಎನ್‌ಡಿಎ) ಮರಳಬಹುದು ಎಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವ ರಾಮದಾಸ್ ಅಠವಳೆ ಅವರು ಶನಿವಾರ ಹೇಳಿದ್ದಾರೆ.

ಕೇಂದ್ರ ಕಲ್ಯಾಣ ಯೋಜನೆಗಳಿಗೆ ಚಾಲನೆ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅಠವಳೆ, ಮಹಾರಾಷ್ಟ್ರದಲ್ಲಿ ಆಗಸ್ಟ್‌ನಲ್ಲಿ ನಡೆಯಲಿರುವ ವಿರೋಧ ಪಕ್ಷದ ನಾಯಕರ ಮೂರನೇ ಸಭೆಗೆ ಹಾಜರಾಗದಂತೆ ನಿತೀಶ್ ಕುಮಾರ್ ಅವರಿಗೆ ಒತ್ತಾಯಿಸಿದರು.

ನಿತೀಶ್ ಕುಮಾರ್ ಅವರು ನಮ್ಮಲ್ಲಿ ಒಬ್ಬರು ಮತ್ತು ಅವರು ಯಾವಾಗ ಬೇಕಾದರೂ ಹಿಂತಿರುಗಬಹುದು ಎಂದು ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ(RPI) ಮುಖ್ಯಸ್ಥ ಅಠವಳೆ ಅವರು ಹೇಳಿದ್ದಾರೆ.

ಜನತಾದಳ(ಯುನೈಟೆಡ್) ಮುಖ್ಯಸ್ಥರೊಂದಿಗಿನ ಸುದೀರ್ಘ ಒಡನಾಟವನ್ನು ಉಲ್ಲೇಖಿಸಿದ ಕೇಂದ್ರ ಸಚಿವರು, ಎನ್‌ಡಿಎನಲ್ಲಿ ನಿತೀಶ್ ಅನುಪಸ್ಥಿತಿ ಸದಾ ಕಾಡುತ್ತಿದೆ. ಅವರು ನನ್ನ ಉತ್ತಮ ಸ್ನೇಹಿತ ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್