ದೇಶ

ಜಾರ್ಖಂಡ್‌: ರಾಷ್ಟ್ರಧ್ವಜ ತಿರುಚಿದ ಆರೋಪದಲ್ಲಿ 18 ಜನರ ವಿರುದ್ಧ ಕೇಸ್ ದಾಖಲು

Lingaraj Badiger

ರಾಂಚಿ: ಜಾರ್ಖಂಡ್‌ನ ಪಲಾಮು ಜಿಲ್ಲೆಯ ಚೈನ್‌ಪುರ್ ಪೊಲೀಸ್ ಠಾಣೆಯಲ್ಲಿ ಮೊಹರಂ ಮೆರವಣಿಗೆ ವೇಳೆ ರಾಷ್ಟ್ರಧ್ವಜವನ್ನು ತಿರುಚಿದ ಆರೋಪದ ಮೇಲೆ 18 ಜನರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.

ಸ್ಥಳೀಯರ ಪ್ರಕಾರ, ಕಲ್ಯಾಣಪುರ-ಕಂಕರಿಯಲ್ಲಿ ನಡೆದ ಮೊಹರಂ ಮೆರವಣಿಗೆ ಸಂದರ್ಭದಲ್ಲಿ, "ರಾಷ್ಟ್ರಧ್ವಜ"ವನ್ನು ಪ್ರದರ್ಶಿಸಲಾಯಿತು. ಅದರಲ್ಲಿ ಅಶೋಕ ಚಕ್ರವನ್ನು ಉರ್ದು ಪಠ್ಯದೊಂದಿಗೆ ಕತ್ತಿಯಂತಹ ರೇಖಾಚಿತ್ರದೊಂದಿಗೆ ಬದಲಾಯಿಸಲಾಗಿತ್ತು.

ರಾಷ್ಟ್ರಧ್ವಜ ತಿರುಚಿದ ಚಿತ್ರಗಳು ಮತ್ತು ವೀಡಿಯೊ ತುಣುಕು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ, ಇದನ್ನು ಸ್ಥಳೀಯ ಆಡಳಿತದ ಗಮನಕ್ಕೆ ತರಲಾಗಿದೆ. 

ನಂತರ ಎಫ್‌ಐಆರ್ ದಾಖಲಿಸಿದ ಪೊಲೀಸರು, ವೀಡಿಯೊ ದೃಶ್ಯಗಳ ಆಧಾರದ ಮೇಲೆ ಆರೋಪಿಗಳನ್ನು ಬಂಧನಕ್ಕೆ ತೀವ್ರ ಶೋಧ ನಡೆಸುತ್ತಿದ್ದಾರೆ.

153 (ಎ) (ಬಿ), 120 (ಬಿ) ಮತ್ತು ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಐದು ಜನ ಅಪರಿಚಿತರು ಸೇರಿದಂತೆ 18 ಜನರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಚೈನ್‌ಪುರ ಪೊಲೀಸ್ ಠಾಣೆಯ ಉಸ್ತುವಾರಿ ಅಧಿಕಾರಿ ರೂಪೇಶ್ ಕುಮಾರ್ ದುಬೆ ತಿಳಿಸಿದ್ದಾರೆ.

SCROLL FOR NEXT