ಸಂಗ್ರಹ ಚಿತ್ರ 
ದೇಶ

ಉಮೇಶ್ ಪಾಲ್ ಹತ್ಯೆ ಪ್ರಕರಣ: ಅತೀಕ್ ಅಹ್ಮದ್ ಪರ ವಕೀಲರ ಬಂಧನ

ಉಮೇಶ್ ಪಾಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹತ್ಯೆಗೀಡಾದ ಗ್ಯಾಂಗ್​ಸ್ಟರ್ ಅತೀಕ್ ಅಹ್ಮದ್ ಪರ ವಕೀಲರನ್ನು ಪೊಲೀಸರು ಭಾನುವಾರ ಬಂಧನಕ್ಕೊಳಪಡಿಸಿದ್ದಾರೆ.

ಪ್ರಯಾಗ್ರಾಜ್: ಉಮೇಶ್ ಪಾಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹತ್ಯೆಗೀಡಾದ ಗ್ಯಾಂಗ್​ಸ್ಟರ್ ಅತೀಕ್ ಅಹ್ಮದ್ ಪರ ವಕೀಲರನ್ನು ಪೊಲೀಸರು ಭಾನುವಾರ ಬಂಧನಕ್ಕೊಳಪಡಿಸಿದ್ದಾರೆ.

ಧೂಮಂಗಂಜ್ ಪೊಲೀಸ್ ಠಾಣೆಯ ಅಧಿಕಾರಿಗಳು ಮಿಶ್ರಾ ಅವರನ್ನು ಬಂಧಿಸಿದ್ದಾರೆ ಎಂದು ಉಪ ಪೊಲೀಸ್ ಆಯುಕ್ತ (ನಗರ) ದೀಪಕ್ ಭುಕರ್ ಅವರು ಮಾಹಿತಿ ನೀಡಿದ್ದಾರೆ.

ಲಖನೌ ಹೊಟೇಲ್‌ನ ಹೊರಗೆ ಮಿಶ್ರಾ ಅವರನ್ನು ಬಂಧಿಸಲಾಗಿದ್ದು, ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

2005ರಲ್ಲಿ ನಡೆದ ಬಿಎಸ್‌ಪಿ ಶಾಸಕ ರಾಜು ಪಾಲ್‌ ಹತ್ಯೆ ಪ್ರಕರಣದ ಪ್ರಮುಖ ಸಾಕ್ಷಿ ಉಮೇಶ್‌ ಪಾಲ್‌ ಮತ್ತು ಆತನ ಇಬ್ಬರು ಭದ್ರತಾ ಸಿಬ್ಬಂದಿಯನ್ನು ಫೆಬ್ರವರಿ 24ರಂದು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಹಾಡಹಗಲೇ ನಡೆದ ಈ ಹತ್ಯೆಯ ವಿಡಿಯೋ ಸಾಕಷ್ಟು ವೈರಲ್ ಆಗಿತ್ತು. ಅಲ್ಲದೆ. ಉತ್ತರ ಪ್ರದೇಶದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಘಟನೆಯ ನಂತರ, ಉತ್ತರ ಪ್ರದೇಶ ಮುಖ್ಯಮಂತ್ರಿ ಆದಿತ್ಯನಾಥ್ ಅವರು ರಾಜ್ಯದಲ್ಲಿ ಮಾಫಿಯಾವನ್ನು ನಾಶಪಡಿಸುವುದಾಗಿ ರಾಜ್ಯ ವಿಧಾನಸಭೆಯಲ್ಲಿ ಪ್ರತಿಜ್ಞೆ ಮಾಡಿದ್ದರು.

ಉಮೇಶ್ ಪಾಲ್ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿರುವ ಮತ್ತೋರ್ವ ಆರೋಪಿ ಅಹ್ಮದ್ ಪತ್ನಿ ಶೈಸ್ತಾ ಪರ್ವೀನ್ ಇನ್ನೂ ತಲೆಮರೆಸಿಕೊಂಡಿದ್ದಾಳೆಂದು ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

'30 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ,ಇನ್ನು ಸಾಧ್ಯವಿಲ್ಲ': ನಿವೃತ್ತಿಯ ಸುಳಿವು ನೀಡಿದ ಕೇಂದ್ರ ಸಚಿವ ನಿತಿನ್ ಗಡ್ಕರಿ; ಹೊಸ ಪೀಳಿಗೆಗೆ ದಾರಿ ಮಾಡಿಕೊಡುವ ಇಂಗಿತ!

2013ರ ಲೈಂಗಿಕ ದೌರ್ಜನ್ಯ ಪ್ರಕರಣ: Tehelka ಮಾಜಿ ಸಂಪಾದಕ ತರುಣ್ ತೇಜ್‌ಪಾಲ್‌ಗೆ ಸುಪ್ರೀಂ ಕೋರ್ಟ್‌ ಶಾಕ್‌; 2 ವಾರಗಳಲ್ಲಿ ಶರಣಾಗುವಂತೆ ಖಡಕ್ ಸೂಚನೆ..!

ವಿಮಾನ ಸುರಕ್ಷತೆಯಲ್ಲಿ ರಾಜಿಯಿಲ್ಲ: ಪೈಲಟ್‌ಗಳ ಡ್ರಗ್‌ ಟೆಸ್ಟ್‌ ನಿಯಮದಲ್ಲಿ ಮಹತ್ವದ ಬದಲಾವಣೆ, ವರ್ಷವಿಡೀ ಯಾದೃಚ್ಛಿಕ ತಪಾಸಣೆಗೆ ಕೇಂದ್ರ ಸರ್ಕಾರ ಮುಂದು..!