ಗಿಂಜಾ ವುಲ್‌ಜಾಂಗ್ 
ದೇಶ

ದ್ವೇಷ ಪ್ರಚೋದನೆ: ಮಣಿಪುರ ITLF ವಕ್ತಾರರ ವಿರುದ್ಧ ಎಫ್ಐಆರ್ ದಾಖಲು

ವಿವಿಧ ಗುಂಪುಗಳ ನಡುವೆ ದ್ವೇಷ ಪ್ರಚೋದಿಸಿದ ಮತ್ತು ಸಾರ್ವಜನಿಕ ಶಾಂತಿಗೆ ಧಕ್ಕೆ ತಂದ  ಆರೋಪದ ಮೇಲೆ ಸ್ಥಳೀಯ ಬುಡಕಟ್ಟು ನಾಯಕರ ವೇದಿಕೆ(ಐಟಿಎಲ್‌ಎಫ್) ವಕ್ತಾರ ಗಿಂಜಾ ವುಲ್‌ಜಾಂಗ್ ವಿರುದ್ಧ ಮಣಿಪುರ ಪೊಲೀಸರು ಪ್ರಕರಣ...

ಇಂಫಾಲ್: ವಿವಿಧ ಗುಂಪುಗಳ ನಡುವೆ ದ್ವೇಷ ಪ್ರಚೋದಿಸಿದ ಮತ್ತು ಸಾರ್ವಜನಿಕ ಶಾಂತಿಗೆ ಧಕ್ಕೆ ತಂದ  ಆರೋಪದ ಮೇಲೆ ಸ್ಥಳೀಯ ಬುಡಕಟ್ಟು ನಾಯಕರ ವೇದಿಕೆ(ಐಟಿಎಲ್‌ಎಫ್) ವಕ್ತಾರ ಗಿಂಜಾ ವುಲ್‌ಜಾಂಗ್ ವಿರುದ್ಧ ಮಣಿಪುರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಆದರೆ ಐಟಿಎಲ್‌ಎಫ್ ಈ ಆರೋಪವನ್ನು ತಳ್ಳಿಹಾಕಿದೆ.

ವ್ಯಾಪಾರಿಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ 'ಶೂನ್ಯ ಎಫ್‌ಐಆರ್' ದಾಖಲಿಸಿದ ಮಣಿಪುರ ಪೊಲೀಸರು, ಇಂಫಾಲ್ ಉಪವಿಭಾಗದಲ್ಲಿ ಧರ್ಮ, ಜನಾಂಗ ಇತ್ಯಾದಿಗಳ ಆಧಾರದ ಮೇಲೆ ದ್ವೇಷ ಉತ್ತೇಜಿಸುವುದು, ಮಾನನಷ್ಟ, ವದಂತಿಗಳನ್ನು ಹರಡುವುದು ಸೇರಿದಂತೆ ಭಾರತೀಯ ದಂಡ ಸಂಹಿತೆಯ ಇತರ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿದ್ದಾರೆ.

ಎಫ್‌ಐಆರ್ ಅನ್ನು ತನಿಖೆಗಾಗಿ ನಂತರ ತಮೆಂಗ್‌ಲಾಂಗ್ ಜಿಲ್ಲೆಯ ಖಂಗ್‌ಶಾಂಗ್ ಪೊಲೀಸ್ ಠಾಣೆಗೆ ವರ್ಗಾಯಿಸಲಾಗುತ್ತಿದೆ.

ಬಹುಸಂಖ್ಯಾತ ಸಮುದಾಯವು ರೈಲುಗಳ ಮೂಲಕ ಕಣಿವೆಗೆ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ಕಳ್ಳಸಾಗಣೆ ಮಾಡುತ್ತಿದೆ ಎಂದು ವಲ್ಜಾಂಗ್ ಹೇಳಿಕೆ ನೀಡಿದ ನಂತರ ಖಾಂಗ್‌ಶಾಂಗ್ ರೈಲ್ವೆ ನಿಲ್ದಾಣದಲ್ಲಿ ತಮ್ಮ ಸರಕುಗಳನ್ನು ಲೂಟಿ ಮಾಡಬಹುದು ಎಂದು ಹೆದರಿದ ವ್ಯಾಪಾರಿಗಳು ದೂರು ದಾಖಲಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತೀಯ ನಾವಿಕರ ಸುರಕ್ಷತೆ ಮುಖ್ಯ; ನಾಗರಿಕ ಮೂಲಸೌಕರ್ಯಗಳ ಮೇಲಿನ ದಾಳಿ ಸ್ವೀಕಾರಾರ್ಹವಲ್ಲ: ಇರಾನ್‌ಗೆ ಅಜಿತ್ ದೋವಲ್

ಜರ್ಮನಿಯ ವಸತಿ ಕಟ್ಟಡದಲ್ಲಿ ಶಂಕಿತ ಬೆಂಕಿ ಅವಘಡ: 3 ಭಾರತೀಯರು ಸಾವು!

ಹನಿಟ್ರ್ಯಾಪ್ ಪಿತೂರಿ ಪ್ರಶ್ನಿಸಿದ್ದಕ್ಕೆ ಕಿರುಕುಳ; JDS ಕಾರ್ಯಕರ್ತ CCB ವಶಕ್ಕೆ: ಕುಮಾರಸ್ವಾಮಿ ಆಕ್ರೋಶ

ಕಾಂಗ್ರೆಸ್‌ನ ಆಂತರಿಕ ಕಲಹದಿಂದ 'ಮೂರನೇ ಮುಖ್ಯಮಂತ್ರಿ' ಬಂದರೂ ಅಚ್ಚರಿ ಇಲ್ಲ: ಬಿ.ವೈ ವಿಜಯೇಂದ್ರ; Video

ಯೂಟ್ಯೂಬರ್ ಧ್ರುವ್ ರಾಠಿಗೆ ಸಂಕಷ್ಟ: 8 ವರ್ಷಗಳ ಹಿಂದಿನ ಪ್ರಕರಣಕ್ಕೆ ಮರುಜೀವ; ದೆಹಲಿ ಕೋರ್ಟ್ ಸಮನ್ಸ್!