ಸಾಂದರ್ಭಿಕ ಚಿತ್ರ 
ದೇಶ

ಮಧ್ಯ ಪ್ರದೇಶ: ಸತ್ನಾ ಜಿಲ್ಲೆಯಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ

ಮಧ್ಯಪ್ರದೇಶದ ಸತ್ನಾ ಜಿಲ್ಲೆಯ ಗ್ರಾಮವೊಂದರಲ್ಲಿ 17 ವರ್ಷದ ಬಾಲಕಿಯ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಸತ್ನಾ: ಮಧ್ಯಪ್ರದೇಶದ ಸತ್ನಾ ಜಿಲ್ಲೆಯ ಗ್ರಾಮವೊಂದರಲ್ಲಿ 17 ವರ್ಷದ ಬಾಲಕಿಯ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ನಾಲ್ಕು ದಿನಗಳಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಎರಡನೇ ಅತ್ಯಾಚಾರ ಘಟನೆ ಇದಾಗಿದೆ. ಈ ಸಂಬಂಧ ಬಾಲಕಿಯ ಕುಟುಂಬ ಸದಸ್ಯರು ರಾಮನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಶನಿವಾರ ಆರೋಪಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬಾಲಕಿ ಶುಕ್ರವಾರ ಮಧ್ಯಾಹ್ನ ಮಲ ವಿಸರ್ಜನೆಗೆ ಹೋದಾಗ ಬಾಲಕಿ ಮೇಲೆ ಆರೋಪಿ ವಿಜಯ್ ಸಾಕೇತ್ ಕೊಲೆ ಬೆದರಿಕೆ ಹಾಕಿ ಅತ್ಯಾಚಾರವೆಸಗಿದ್ದಾನೆ ಎಂದು ಆರೋಪಿಸಲಾಗಿದೆ. ಇದರಿಂದ ಭೀತಿಗೊಂಡ ಬಾಲಕಿ ಮನೆಗೆ ವಾಪಸ್ಸಾದ ಬಳಿಕ ಘಟನೆಯನ್ನು ಕುಟುಂಬಕ್ಕೆ ತಿಳಿಸಿಲ್ಲ. ಶನಿವಾರದಂದು ಆಕೆ ತನ್ನ ಕುಟುಂಬ ಸದಸ್ಯರಿಗೆ ಸಂಕಟವನ್ನು ವಿವರಿಸಿದ ನಂತರ ದೂರು ದಾಖಲಿಸಲಾಗಿದೆ ಎಂದು ಅವರು ಹೇಳಿದರು. ಆರೋಪಿಯನ್ನು ಬಂಧಿಸಿರುವ ಪೊಲೀಸರು, ಆತನ ವಿರುದ್ಧ ಐಪಿಸಿ ಸೆಕ್ಷನ್ ಹಾಗೂ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. 

ಮತ್ತೊಂದು ಪ್ರಕರಣದಲ್ಲಿ ಗುರುವಾರ  ಸತ್ನಾ ಜಿಲ್ಲೆಯ ಮೈಹಾರ್ ಪಟ್ಟಣದ ಪ್ರಸಿದ್ಧ ದೇವಸ್ಥಾನವನ್ನು ನಿರ್ವಹಿಸುವ ಟ್ರಸ್ಟ್‌ನಲ್ಲಿ ಕೆಲಸ ಮಾಡುವ ಇಬ್ಬರು ವ್ಯಕ್ತಿಗಳು 12 ವರ್ಷದ ಬಾಲಕಿಯನ್ನು ಅತ್ಯಾಚಾರ, ಅನೇಕ ಬಾರಿ ಕಚ್ಚಿ ಮತ್ತು ಕ್ರೂರವಾಗಿ ನಡೆಸಿದ್ದರು . ಘಟನೆಯ ನಂತರ ಇಬ್ಬರು ಆರೋಪಿಗಳಾದ ರವೀಂದ್ರ ಕುಮಾರ್ ಮತ್ತು ಅತುಲ್ ಭಡೋಲಿಯಾ ಅವರನ್ನು ಬಂಧಿಸಲಾಗಿದ್ದು, ಅವರ ಮನೆಗಳನ್ನು ಸ್ಥಳೀಯ ಆಡಳಿತ ನೆಲಸಮಗೊಳಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!