ಉದಯನಿಧಿ ಸ್ಟಾಲಿನ್ 
ದೇಶ

ನಿಮ್ಮ ಪುತ್ರ ಎಷ್ಟು ಕ್ರಿಕೆಟ್ ಪಂದ್ಯ ಆಡಿದ್ದಾರೆ, ಎಷ್ಟು ರನ್ ಗಳಿಸಿದ್ದಾರೆ: ಅಮಿತ್ ಶಾ ಕಾಲೆಳೆದ ಉದಯನಿಧಿ ಸ್ಟಾಲಿನ್!

ನಿಮ್ಮ ಮಗ ಬಿಸಿಸಿಐ ಕಾರ್ಯದರ್ಶಿಯಾದದ್ದು ಹೇಗೆ? ಎಷ್ಟು ಕ್ರಿಕೆಟ್ ಪಂದ್ಯಗಳನ್ನು ಆಡಿದ್ದಾರೆ, ಎಷ್ಟು ರನ್ ಗಳಿಸಿದ್ದಾರೆ ಎಂದು ತಮಿಳುನಾಡು ಕ್ರೀಡಾ ಸಚಿವ ಉದಯಾನಿಧಿ ಸ್ಟಾಲಿನ್ ಅವರು ಗೃಹ ಸಚಿವ ಅಮಿತ್ ಷಾ ಅವರನ್ನು ಪ್ರಶ್ನಿಸಿದ್ದಾರೆ.

ಚೆನ್ನೈ: ನಿಮ್ಮ ಮಗ ಬಿಸಿಸಿಐ ಕಾರ್ಯದರ್ಶಿಯಾದದ್ದು ಹೇಗೆ? ಎಷ್ಟು ಕ್ರಿಕೆಟ್ ಪಂದ್ಯಗಳನ್ನು ಆಡಿದ್ದಾರೆ, ಎಷ್ಟು ರನ್ ಗಳಿಸಿದ್ದಾರೆ ಎಂದು ತಮಿಳುನಾಡು ಕ್ರೀಡಾ ಸಚಿವ ಉದಯಾನಿಧಿ ಸ್ಟಾಲಿನ್ ಅವರು ಗೃಹ ಸಚಿವ ಅಮಿತ್ ಷಾ ಅವರನ್ನು ಪ್ರಶ್ನಿಸಿದ್ದಾರೆ.

ಡಿಎಂಕೆಯನ್ನು ರಾಜವಂಶದ ಪಕ್ಷ ಎಂದು ಕರೆದಿದ್ದಕ್ಕಾಗಿ ತಮಿಳುನಾಡು ಕ್ರೀಡಾ ಸಚಿವ ಉದಯಾನಿಧಿ ಸ್ಟಾಲಿನ್ ಅವರು ಗೃಹ ಸಚಿವ ಅಮಿತ್ ಷಾ ಅವರನ್ನು ಟೀಕಿಸಿದ್ದಾರೆ. ಗೃಹ ಸಚಿವರ ಮಗ ಜಯ್ ಶಾ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯ ಕಾರ್ಯದರ್ಶಿಯಾಗಿ (ಬಿಸಿಸಿಐ) ಆಯ್ಕೆ ಆಗಿದ್ದು ಹೇಗೆ ಎಂದು ಪ್ರಶ್ನಿಸಿದ್ದಾರೆ.

ಅಮಿತ್ ಶಾ ಅವರು ಶುಕ್ರವಾರ ರಾಮೇಶ್ವರಂನಲ್ಲಿ ರಾಜ್ಯ ಬಿಜೆಪಿ ಮುಖ್ಯಸ್ಥ ಕೆ.ಅಣ್ಣಾಮಲೈ ಅವರ ಪಾದಾಯಾತ್ರೆಗೆ ಚಾಲನೆ ನೀಡಿ, ವಂಶ ರಾಜಕೀಯದ ಕುರಿತು ಮಾತನಾಡಿದ್ದರು. ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಹಾಗೂ ಡಿಎಂಕೆ ಮಿತ್ರ ಪಕ್ಷಗಳು ರಾಜವಂಶದ ರಾಜಕಾರಣವನ್ನು ಉತ್ತೇಜಿಸುತ್ತಿವೆ ಎಂದು ಅವರು ಆರೋಪಿಸಿದ್ದರು ಹಾಗೂ ಡಿಎಂಕೆಯನ್ನು ರಾಜವಂಶದ ಪಕ್ಷ ಎಂದು ಕರೆದಿದ್ದರು.

ಚೆನ್ನೈನಲ್ಲಿ ಡಿಎಂಕೆ ಯೂತ್ ವಿಂಗ್ನ ಹೊಸ ಪದಾಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿದ ಉದಯಾನಿಧಿ, "ಚುನಾವಣೆಯಲ್ಲಿ ಸ್ಪರ್ಧಿಸಿದ ನಂತರ ನಾನು ಶಾಸಕನಾಗಿದ್ದೇನೆ. ಆ ನಂತರ ನನ್ನನ್ನು ಮಂತ್ರಿಯನ್ನಾಗಿ ಮಾಡಲಾಯಿತು'' ಎಂದು ಹೇಳಿದರು.

ನಮ್ಮ ಪಕ್ಷದ ನಾಯಕರು ನನ್ನನ್ನು ಮುಖ್ಯಮಂತ್ರಿಯನ್ನಾಗಿ ಮಾಡುವ ಗುರಿಯನ್ನು ಹೊಂದಿದ್ದಾರೆ ಎಂದು ಅಮಿತ್ ಶಾ ಹೇಳಿದ್ದಾರೆ. ಆದರೆ, ನಾನು ಅಮಿತ್ ಶಾರನ್ನು ಕೇಳಲು ಬಯಸುತ್ತೇನೆ, ನಿಮ್ಮ ಮಗ ಬಿಸಿಸಿಐ ಕಾರ್ಯದರ್ಶಿ ಆಗಿದ್ದು ಹೇಗೆ? ಜಯ ಶಾ ಅವರು ಎಷ್ಟು ಕ್ರಿಕೆಟ್ ಪಂದ್ಯಗಳನ್ನು ಆಡಿದ್ದಾರೆ ಹಾಗೂ ಅವರು ಎಷ್ಟು ರನ್ ಗಳಿಸಿದ್ದಾರೆ? ಎಂದು ಉತ್ತರಿಸುವಂತೆ ಉದಯನಿಧಿ ಆಗ್ರಹಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!