ಪ್ರಾತಿನಿಧಿಕ ಚಿತ್ರ 
ದೇಶ

ರಾಜಸ್ಥಾನ: ಇಬ್ಬರು ಸಹೋದರಿಯರ ಮೇಲೆ ತಂದೆಯ ಸಹೋದ್ಯೋಗಿಗಳಿಂದಲೇ ಅತ್ಯಾಚಾರ

ರಾಜಸ್ಥಾನದ ಅಳ್ವಾರ್ ಜಿಲ್ಲೆಯ ಇಟ್ಟಿಗೆ ಭಟ್ಟಿಯಲ್ಲಿ ಇಬ್ಬರು ಸಹೋದರಿಯರ ಮೇಲೆ ಅವರ ತಂದೆಯ ಇಬ್ಬರು ಸಹೋದ್ಯೋಗಿಗಳು ಅತ್ಯಾಚಾರವೆಸಗಿದ್ದಾರೆ. ಇಬ್ಬರೂ ಹುಡುಗಿಯರು ಗರ್ಭಿಣಿಯಾಗಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಜೈಪುರ: ರಾಜಸ್ಥಾನದ ಅಳ್ವಾರ್ ಜಿಲ್ಲೆಯ ಇಟ್ಟಿಗೆ ಭಟ್ಟಿಯಲ್ಲಿ ಇಬ್ಬರು ಸಹೋದರಿಯರ ಮೇಲೆ ಅವರ ತಂದೆಯ ಇಬ್ಬರು ಸಹೋದ್ಯೋಗಿಗಳು ಅತ್ಯಾಚಾರವೆಸಗಿದ್ದಾರೆ. ಇಬ್ಬರೂ ಹುಡುಗಿಯರು ಗರ್ಭಿಣಿಯಾಗಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಈ ಸಂಬಂಧ ಬಾಲಕಿಯರ ತಂದೆ ಶುಕ್ರವಾರ ಎನ್‌ಇಬಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. 15 ಮತ್ತು 13 ವರ್ಷದ ತನ್ನ ಹೆಣ್ಣುಮಕ್ಕಳ ಮೇಲೆ ಸಪ್ಪಿ ಮತ್ತು ಸುಭಾನ್ ಅತ್ಯಾಚಾರವೆಸಗಿದ್ದಾರೆ ಎಂದು ದೂರಿದ್ದಾರೆ.

ಹಿರಿಯ ಬಾಲಕಿಯು ತನಗೆ ಹೊಟ್ಟೆ ನೋವು ಮತ್ತು ಇತರ ಆರೋಗ್ಯ ಸಮಸ್ಯೆಗಳ ಬಗ್ಗೆ ತನ್ನ ಹೆತ್ತವರ ಬಳಿ ಹೇಳಿಕೊಂಡಿದ್ದಾಳೆ. ಈ ವೇಳೆ ಪೋಷಕರು ಆಕೆಯನ್ನು ವೈದ್ಯರ ಬಳಿಗೆ ಕರೆದೊಯ್ದಾಗ. ಆಕೆ ಏಳೂವರೆ ತಿಂಗಳ ಗರ್ಭಿಣಿ ಎಂದು ತಿಳಿದುಬಂದಿರುವುದಾಗಿ ಪೊಲೀಸರು ತಿಳಿಸಿದರು.

ಈ ಬಗ್ಗೆ ಆಕೆಯನ್ನು ವಿಚಾರಿಸಿದಾಗ ಸಪ್ಪಿ ಮತ್ತು ಸುಭಾನ್ ತನ್ನ ಮೇಲೆ ಅತ್ಯಾಚಾರವೆಸಗಿದ್ದಾರೆ ಎಂದು ಬಾಲಕಿ ತಿಳಿಸಿದ್ದಾಳೆ. ಅಲ್ಲದೆ, ಅವರು ತನ್ನ ತಂಗಿಯ ಮೇಲೂ ಅತ್ಯಾಚಾರವೆಸಗಿದ್ದಾರೆ ಎಂದು ಆಕೆ ಬಹಿರಂಗಪಡಿಸಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆ ಬಗ್ಗೆ ಯಾರಿಗಾದರೂ ಹೇಳಿದರೆ ಕೊಲೆ ಮಾಡುವುದಾಗಿ ಆರೋಪಿಗಳು ಬೆದರಿಕೆ ಹಾಕಿದ್ದರು ಎಂದು ಸಂತ್ರಸ್ತೆ ಆರೋಪಿಸಿದ್ದಾರೆ.

ಈ ಸಂಬಂಧ ಶುಕ್ರವಾರ ಎನ್‌ಇಬಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಮತ್ತು ಬಾಲಕಿಯರ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ವೈದ್ಯಕೀಯ ಪರೀಕ್ಷೆಯಲ್ಲಿ ಬಾಲಕಿಯರಿಬ್ಬರೂ ಗರ್ಭಿಣಿಯಾಗಿರುವುದು ದೃಢಪಟ್ಟಿದೆ. ಕಿರಿಯ ಸಂತ್ರಸ್ತೆ ಎರಡೂವರೆ ತಿಂಗಳ ಗರ್ಭಿಣಿ ಎಂದು ಪೊಲೀಸ್ ಅಧೀಕ್ಷಕ (ಅಲ್ವಾರ್) ಆನಂದ್ ಶರ್ಮಾ ತಿಳಿಸಿದ್ದಾರೆ.

ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಎನ್‌ಇಬಿ ಪೊಲೀಸ್ ಠಾಣೆಯ ಎಸ್‌ಎಚ್‌ಒ ಅನಿಲ್ ಜೈನ್ ಹೇಳಿದ್ದಾರೆ. ಈ ಸಂಬಂಧ ಇನ್ನೂ ಯಾರ ಬಂಧನವೂ ಆಗಿಲ್ಲ. ಸಂತ್ರಸ್ತರ ತಂದೆ ಕೆಲಸ ಮಾಡುವ ಇಟ್ಟಿಗೆ ಗೂಡಿನ ಭಟ್ಟಿ ಬಳಿಯೇ ಕುಟುಂಬ ವಾಸವಿದೆ ಎಂದು ಅವರು ಹೇಳಿದರು.

ಮತ್ತೊಂದು ಪ್ರಕರಣದಲ್ಲಿ, ಜಿಲ್ಲೆಯ ಬನ್ಸೂರ್ ಪ್ರದೇಶದಲ್ಲಿ ಇಬ್ಬರು ವ್ಯಕ್ತಿಗಳು ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದಾರೆ. ಈ ಸಂಬಂಧ ಶುಕ್ರವಾರ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಶರ್ಮಾ ಹೇಳಿದ್ದಾರೆ.

ಶಾಲೆಗೆ ಹೋಗುತ್ತಿದ್ದ ವೇಳೆ ಇಬ್ಬರು ಆರೋಪಿಗಳು ತನ್ನನ್ನು ಅಪಹರಿಸಿ ಅತ್ಯಾಚಾರ ಎಸಗಿದ್ದಾರೆ ಎಂದು ಸಂತ್ರಸ್ತೆ ಆರೋಪಿಸಿದ್ದಾರೆ. ಆರೋಪಿಗಳು ಘಟನೆಯನ್ನು ಸೆರೆಹಿಡಿದಿದ್ದು, ಯಾರಿಗಾದರೂ ಹೇಳಿದರೆ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿದ್ದಾರೆ.

ಆಪಾದಿತ ಘಟನೆ ಜುಲೈ 27 ರಂದು ನಡೆದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬೆಳಗಾವಿ: ಬೀದಿ ನಾಯಿಗಳ ಅಟ್ಟಹಾಸ, 2 ವರ್ಷದ ಬಾಲಕಿ ಮೇಲೆ ಭೀಕರ ದಾಳಿ

SCROLL FOR NEXT