ಸಾಂದರ್ಭಿಕ ಚಿತ್ರ 
ದೇಶ

ಬಿಹಾರ: ಪೂರ್ವ ಚಂಪಾರಣ್‌ನಲ್ಲಿ ಮಧ್ಯಾಹ್ನದ ಬಿಸಿಯೂಟ ಸೇವಿಸಿದ 150 ವಿದ್ಯಾರ್ಥಿಗಳು ಅಸ್ವಸ್ಥ

ಮಧ್ಯಾಹ್ನದ ಬಿಸಿಯೂಟ ಸೇವಿಸಿದ ಸುಮಾರು 150 ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಘಟನೆ ಬಿಹಾರದ ಪೂರ್ವ ಚಂಪಾರಣ್ ಜಿಲ್ಲೆಯಲ್ಲಿ ಇಂದು ಮಧ್ಯಾಹ್ನ ನಡೆದಿದೆ. ಜಿಲ್ಲೆಯ ನರ್ವಾಲ್-ಬರ್ವಾಲ್ ಪಂಚಾಯತ್‌ನ ಸರ್ಕಾರಿ ಮಾಧ್ಯಮಿಕ ಶಾಲೆಯಲ್ಲಿ ಈ ಘಟನೆ ನಡೆದಿದೆ.

ಪಾಟ್ನಾ: ಮಧ್ಯಾಹ್ನದ ಬಿಸಿಯೂಟ ಸೇವಿಸಿದ ಸುಮಾರು 150 ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಘಟನೆ ಬಿಹಾರದ ಪೂರ್ವ ಚಂಪಾರಣ್ ಜಿಲ್ಲೆಯಲ್ಲಿ ಇಂದು ಮಧ್ಯಾಹ್ನ ನಡೆದಿದೆ. ಜಿಲ್ಲೆಯ ನರ್ವಾಲ್-ಬರ್ವಾಲ್ ಪಂಚಾಯತ್‌ನ ಸರ್ಕಾರಿ ಮಾಧ್ಯಮಿಕ ಶಾಲೆಯಲ್ಲಿ ಈ ಘಟನೆ ನಡೆದಿದೆ.

ಸುಮಾರು 100 ವಿದ್ಯಾರ್ಥಿಗಳನ್ನು ಆಸ್ಪತ್ರೆಗಳಲ್ಲಿ ದಾಖಲಿಸಲಾಗಿದ್ದು, 50 ವಿದ್ಯಾರ್ಥಿಗಳನ್ನು ಪ್ರಾಥಮಿಕ ಚಿಕಿತ್ಸೆಯ ನಂತರ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ ಎಂದು ಬಗಾಹಾದ ಆರೋಗ್ಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಗ್ರಾಮದಲ್ಲಿ ಲಭ್ಯವಿದ್ದ ಖಾಸಗಿ ವಾಹನಗಳು ಹಾಗೂ ಆಂಬ್ಯುಲೆನ್ಸ್‌ಗಳ ಮೂಲಕ ವಿದ್ಯಾರ್ಥಿಗಳನ್ನು ಆಸ್ಪತ್ರೆಗಳಿಗೆ ಕರೆದೊಯ್ಯಲಾಯಿತು. ಬಗಾಹಾ ಉಪ  ವಿಭಾಗೀಯ ಆಸ್ಪತ್ರೆಯಲ್ಲಿ ದಾಖಲಾಗಿದ್ದ ವಿದ್ಯಾರ್ಥಿಗಳು ಅಪಾಯದಿಂದ ಪಾರಾಗಿದ್ದಾರೆ .
ಅಸ್ವಸ್ಥ ವಿದ್ಯಾರ್ಥಿಗಳ ಪೋಷಕರು ಶಾಲಾ ಆಡಳಿತ ಮಂಡಳಿ ಮತ್ತು ಬಿಸಿಯೂಟ ಪೂರೈಸುವ ಎನ್‌ಜಿಒ ವಿರುದ್ಧ ಪ್ರತಿಭಟನೆ ನಡೆಸಿದರು.

ಘಟನೆ ಕುರಿತು ತನಿಖೆ ಆರಂಭಿಸಲಾಗಿದೆ. ಎನ್‌ಜಿಒ ವಿರುದ್ಧ ಅಪರಾಧ ಸಾಬೀತಾದರೆ ಅದನ್ನು ಕಪ್ಪು ಪಟ್ಟಿಗೆ ಸೇರಿಸುತ್ತೇವೆ ,ಅಲ್ಲದೇ ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಬಗಾಹ ಎಸ್‌ಡಿಎಂ ಡಾ. ಅನುಪಮಾ ಸಿಂಗ್ ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿ SIR: ವಿದೇಶಾಂಗ ಸಚಿವ ಜೈಶಂಕರ್, ಎಲ್.ಕೆ ಅಡ್ವಾಣಿ ಸೇರಿದಂತೆ ಹಲವು ಮತದಾರರಿಗೆ ನೋಟಿಸ್; CEO ಕೊಟ್ಟ ಸ್ಪಷ್ಟನೆ ಏನು?

ಇದು ಎಂತಹ ವಿಶೇಷ ತೀವ್ರ ಪರಿಷ್ಕರಣೆ? ಅರ್ಹರನ್ನು ಕಿತ್ತುಹಾಕಿ, ಅನರ್ಹರನ್ನು ಸೇರಿಸುವುದೇ SIR: ಕಪಿಲ್ ಸಿಬಲ್ ಕಿಡಿ!

ಟಾಟಾ ಸನ್ಸ್ ಅಧ್ಯಕ್ಷರಾಗಿ ಎನ್ ಚಂದ್ರಶೇಖರನ್ ಮರುನೇಮಕ ಪ್ರಶ್ನಿಸಿದ ಟಾಟಾ ಟ್ರಸ್ಟ್ಸ್!

ಸಿಎಂ ಡಿಕೆ ಶಿವಕುಮಾರ್‌ ನೂರು ದಿನಗಳ ಆಡಳಿತಕ್ಕೆ ಬಿಜೆಪಿ ನಾಯಕ ಫಿದಾ! ಏನಂದ್ರು ಗೊತ್ತಾ?

ಅಂತಹ ಮನಸ್ಥಿತಿ ಇದ್ದಾಗ ಮೊದಲೇ ಅದರಿಂದ ದೂರ ಇರಬೇಕಿತ್ತು: ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಮಹದೇವಪ್ಪ ಟಾಂಗ್!