ಬಂಧಿತ ಉಗ್ರರೊಂದಿಗೆ ಸೇನಾಪಡೆ 
ದೇಶ

ಜಮ್ಮು ಮತ್ತು ಕಾಶ್ಮೀರ: ಶಸ್ತ್ರಾಸ್ತ್ರ, ಮದ್ದುಗುಂಡುಗಳೊಂದಿಗೆ ಇಬ್ಬರು ಲಷ್ಕರ್ ಸಹಚರರ ಬಂಧನ

ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಲಷ್ಕರ್-ಎ-ತೊಯ್ಬಾ (ಎಲ್‌ಇಟಿ) ಭಯೋತ್ಪಾದಕ ಸಂಘಟನೆಯ ಇಬ್ಬರು ಸಹಚರರನ್ನು ಗುರುವಾರ ಬಂಧಿಸಲಾಗಿದೆ.

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಲಷ್ಕರ್-ಎ-ತೊಯ್ಬಾ (ಎಲ್‌ಇಟಿ) ಭಯೋತ್ಪಾದಕ ಸಂಘಟನೆಯ ಇಬ್ಬರು ಸಹಚರರನ್ನು ಗುರುವಾರ ಬಂಧಿಸಲಾಗಿದೆ.

ಜಿಲ್ಲೆಯ ವಾರ್ಪೋರಾ (ಕ್ರೀರಿ) ಪ್ರದೇಶದಲ್ಲಿ ಇಬ್ಬರು ವ್ಯಕ್ತಿಗಳು ಅನುಮಾನಾಸ್ಪದವಾಗಿ ಓಡಾಡುತ್ತಿರುವುದನ್ನು ಸ್ಥಳೀಯ ಪೊಲೀಸರು, ಸೇನೆ ಮತ್ತು ಸಶಸ್ತ್ರ ಸೀಮಾ ಬಾಲ್ (ಎಸ್‌ಎಸ್‌ಬಿ) ನ 'ನಾಕಾ' (ಪರಿಶೀಲನೆ) ಪಾರ್ಟಿ ಪತ್ತೆ ಮಾಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅವರನ್ನು ತಪಾಸಣೆಗೆ ಒಳಪಡಿಸಿದಾಗ ಅವರಿಂದ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಎರಡು ಪಿಸ್ತೂಲ್‌ಗಳು, ಎರಡು ಪಿಸ್ತೂಲ್ ಮ್ಯಾಗಜೀನ್‌ಗಳು ಮತ್ತು 15 ಲೈವ್ ರೌಂಡ್ಸ್‌ಗಳು ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಇವರಿಬ್ಬರನ್ನು ಸುಹೇಲ್ ಗುಲ್ಜಾರ್ ಮತ್ತು ವಸೀಂ ಪರ್ರಾ ಎಂದು ಗುರುತಿಸಲಾಗಿದ್ದು, ಇಬ್ಬರೂ ಎಲ್‌ಇಟಿ ಸಹಚರರಾಗಿದ್ದಾರೆ. ಅವರನ್ನು ವಿಚಾರಣೆಗಾಗಿ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್ ನಬಿನ್ ನ್ಯೂ ಟೀಂ ಘೋಷಣೆ; ರಾಮ್ ಮಾಧವ್, ಸ್ಮೃತಿ ಜೊತೆ ಕರ್ನಾಟಕದ ಇಬ್ಬರಿಗೆ ಪ್ರಮುಖ ಸ್ಥಾನ!

'ನಾನು ಎಂದಿಗೂ ವಂದೇ ಮಾತರಂ ಹಾಡುವುದಿಲ್ಲ': 'ನಮ್ಮ ಧರ್ಮ ಒಪ್ಪಲ್ಲ'; Congress ಕಾಂಗ್ರೆಸ್ ಸಂಸದ ಇಮ್ರಾನ್ ಮಸೂದ್

D Boss, D Boss ಜೈಕಾರಕ್ಕೆ ಗರಂ: ನಿಮ್ಮಂತವರಿಂದಲೇ ತೊಂದರೆ ಆಗ್ತೀರೋದು, ಅಭಿಮಾನಿಗಳಿಗೆ ವಿಜಯಲಕ್ಷ್ಮಿ ಬುದ್ಧಿ ಮಾತು, Video!

ಬಿಜೆಪಿಯ ಹೊಸ ತಂಡದಿಂದ ಹೊರಗುಳಿದ ಅಮಿತ್ ಮಾಳವಿಯಾ, ಮೊದಲ ರಿಯಾಕ್ಷನ್!

ಪ್ರಧಾನಿ ಮೋದಿ ಭೇಟಿ ಮಾಡಿದ ದೇವೇಂದ್ರ ಫಡ್ನವೀಸ್; ಮಹಾರಾಷ್ಟ್ರ ರಾಜಕೀಯಕ್ಕೆ ಗುಡ್ ಬೈ?