ಕುಸ್ತಿಪಟುಗಳ ಜತೆ ರಾಕೇಶ್ ಟಿಕಾಯತ್ 
ದೇಶ

ಕುಸ್ತಿಪಟುಗಳನ್ನು ಬೆಂಬಲಿಸಿ ದೇಶಾದ್ಯಂತ ಪ್ರತಿಭಟನೆಗೆ ರೈತ ಸಂಘ ಕರೆ; ದೆಹಲಿ ಗಡಿಯಲ್ಲಿ ಬಿಗಿ ಭದ್ರತೆ

ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ಭಾರತೀಯ ಕುಸ್ತಿ ಒಕ್ಕೂಟದ ಅಧ್ಯಕ್ಷ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಬಂಧನಕ್ಕೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳನ್ನು ಬೆಂಬಲಿಸಿ ಸಂಯುಕ್ತ ಕಿಸಾನ್...

ನವದೆಹಲಿ: ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ಭಾರತೀಯ ಕುಸ್ತಿ ಒಕ್ಕೂಟದ ಅಧ್ಯಕ್ಷ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಬಂಧನಕ್ಕೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳನ್ನು ಬೆಂಬಲಿಸಿ ಸಂಯುಕ್ತ ಕಿಸಾನ್ ಮೋರ್ಚಾ(ಎಸ್‌ಕೆಎಂ) ರಾಷ್ಟ್ರವ್ಯಾಪಿ ಧರಣಿ ನಡೆಸಲು ಕರೆ ನೀಡಿದೆ. ಈ ಹಿನ್ನೆಲೆಯಲ್ಲಿ ಗುರುವಾರ ದೆಹಲಿಯ ಗಡಿ ಭಾಗಗಳಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ.

ಭದ್ರತಾ ಸಿಬ್ಬಂದಿ ಗಡಿಯಲ್ಲಿ ಕಟ್ಟುನಿಟ್ಟಿನ ನಿಗಾ ವಹಿಸುತ್ತಿದ್ದಾರೆ ಮತ್ತು ಯಾವುದೇ ಅಹಿತಕರ ಘಟನೆ ತಡೆಯಲು ಹೆಚ್ಚುವರಿ ಪಿಕೆಟ್‌ಗಳನ್ನು ಹಾಕಲಾಗಿದೆ ಎಂದು ದೆಹಲಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

"ಭದ್ರತೆಯನ್ನು ಬಿಗಿಗೊಳಿಸಲಾಗಿದೆ, ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಮತ್ತು ನಾವು ದೆಹಲಿಯ ಗಡಿಗಳಲ್ಲಿ ಹೆಚ್ಚುವರಿ ಪಿಕೆಟ್‌ಗಳನ್ನು ಸಹ ಸ್ಥಾಪಿಸಿದ್ದೇವೆ. ಕಾನೂನು ಮತ್ತು ಸುವ್ಯವಸ್ಥೆ ಖಚಿತಪಡಿಸಿಕೊಳ್ಳಲು ಮತ್ತು ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳಲು ನಾವು ಬಯಸುತ್ತೇವೆ. ಇದನ್ನು ಮುನ್ನೆಚ್ಚರಿಕೆ ಕ್ರಮವಾಗಿ ಮಾಡಲಾಗಿದೆ" ಎಂದು ಹಿರಿಯ ಪೊಲೀಸ್ ಅಧಿಕಾರಿ ಹೇಳಿದ್ದಾರೆ.

ಅಕ್ಕಪಕ್ಕದ ರಾಜ್ಯಗಳಿಂದ ದೆಹಲಿ ಪ್ರವೇಶಿಸುವ ವಾಹನಗಳನ್ನು ಗಡಿಯಲ್ಲಿ ತೀವ್ರ ತಪಾಸಣೆ ನಡೆಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಅಪ್ರಾಪ್ತ ಬಾಲಕಿ ಸೇರಿದಂತೆ ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಬಂಧಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳನ್ನು ಬೆಂಬಲಿಸಿ ರೈತ ಸಂಘಗಳ ಒಕ್ಕೂಟ SKM ಗುರುವಾರ ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಕರೆ ನೀಡಿದೆ.

ಭಾರತೀಯ ಕುಸ್ತಿಪಟುಗಳು ಮತ್ತು ಸಮಾಜದ ಇತರ ಎಲ್ಲ ವರ್ಗಗಳಿಂದ ಪ್ರತಿಭಟನೆ ನಡೆಸುವ ಪ್ರಜಾಸತ್ತಾತ್ಮಕ ಹಕ್ಕನ್ನು ಭದ್ರಪಡಿಸುವುದು ಮತ್ತು ಬಿಜೆಪಿ ಸಂಸದರೂ ಆಗಿರುವ ಸಿಂಗ್ ಅವರನ್ನು ಬಂಧಿಸುವಂತೆ ಒತ್ತಾಯಿಸುವ ಉದ್ದೇಶದಿಂದ ಪ್ರತಿಭಟನೆಗೆ ಕರೆ ನೀಡಲಾಗಿದೆ ಎಂದು ಎಸ್‌ಕೆಎಂ ಪ್ರಕಟಣೆಯಲ್ಲಿ ತಿಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT