ಮಣಿಪುರ ಹಿಂಸಾಚಾರದ ಚಿತ್ರ 
ದೇಶ

ಮಣಿಪುರ ಹಿಂಸಾಚಾರದಲ್ಲಿ 98 ಸಾವು, 310 ಮಂದಿ ಗಾಯ- ಸರ್ಕಾರ

ಒಂದು ತಿಂಗಳ ಹಿಂದೆ ಮಣಿಪುರದಲ್ಲಿ ನಡೆದ ಜನಾಂಗೀಯ ಹಿಂಸಾಚಾರದಲ್ಲಿ ಕನಿಷ್ಠ 98 ಜನರು ಸಾವನ್ನಪ್ಪಿದ್ದು, 310 ಜನರು ಗಾಯಗೊಂಡಿದ್ದಾರೆ ಎಂದು ಸರ್ಕಾರ ಶುಕ್ರವಾರ ಹೇಳಿದೆ.

ಇಂಪಾಲ: ಒಂದು ತಿಂಗಳ ಹಿಂದೆ ಮಣಿಪುರದಲ್ಲಿ ನಡೆದ ಜನಾಂಗೀಯ ಹಿಂಸಾಚಾರದಲ್ಲಿ ಕನಿಷ್ಠ 98 ಜನರು ಸಾವನ್ನಪ್ಪಿದ್ದು, 310 ಜನರು ಗಾಯಗೊಂಡಿದ್ದಾರೆ ಎಂದು ಸರ್ಕಾರ ಶುಕ್ರವಾರ ಹೇಳಿದೆ. ಪ್ರಸ್ತುತ ಒಟ್ಟು 37,450 ಜನರು 272 ಪರಿಹಾರ ಶಿಬಿರಗಳಲ್ಲಿದ್ದಾರೆ ಎಂದು ಮುಖ್ಯಮಂತ್ರಿ ಕಚೇರಿ ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ ವಿವರ ಒದಗಿಸಿದೆ. 

ಮೇ 3 ರಂದು ರಾಜ್ಯದಲ್ಲಿ ಹಿಂಸಾಚಾರ ಭುಗಿಲೆದ್ದ ನಂತರ ಒಟ್ಟು 4,014 ಬೆಂಕಿ ಹಚ್ಚಿದ ಪ್ರಕರಣಗಳು ವರದಿಯಾಗಿದ್ದು, ಮೃತರ ಸಂಖ್ಯೆ 98 ಆಗಿದ್ದು, 310 ಮಂದಿ ಗಾಯಗೊಂಡಿದ್ದಾರೆ.  ಕಳೆದೊಂದು ತಿಂಗಳಿನಿಂದ 3,734 ಪ್ರಕರಣಗಳನ್ನು ಪೊಲೀಸರು ದಾಖಲಿಸಿದ್ದು, ಹಿಂಸಾಚಾರದಲ್ಲಿ ತೊಡಗಿಕೊಂಡಿದ್ದ 65 ಜನರನ್ನು ಬಂಧಿಸಿದ್ದಾರೆ ಹೇಳಲಾಗಿದೆ. 

ವಿವಿಧ ಭದ್ರತಾ ಏಜೆನ್ಸಿಗಳಿಂದ ಸಂಘಟಿತ ಪ್ರಯತ್ನ ನಡೆಯುತ್ತಿರುವುದರಿಂದ ದುಷ್ಕರ್ಮಿಗಳು ಗುಂಡು ಹಾರಿಸುವ ಅಥವಾ ಮನೆಗಳಿಗೆ ಬೆಂಕಿ ಹಚ್ಚುವ ಘಟನೆಗಳು ಈಗ ಅಪರೂಪವಾಗುತ್ತಿವೆ. ಸೇನೆ, ಅಸ್ಸಾಂ ರೈಫಲ್ಸ್, ಸಿಎಪಿಎಫ್‌ಗಳು ಮತ್ತು ಸ್ಥಳೀಯ ಪೊಲೀಸರನ್ನು ಸೂಕ್ಷ್ಮ ಸ್ಥಳಗಳಲ್ಲಿ ನಿಯೋಜಿಸಲಾಗಿದೆ. ಇಲ್ಲಿಯವರೆಗೆ, ಕೇಂದ್ರ ಸಶಸ್ತ್ರ ಪಡೆಗಳ 84 ತುಕಡಿಗಳನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ ಎಂದು ಹೇಳಿಕೆ ತಿಳಿಸಿದೆ.

ಕಸಿದುಕೊಂಡ ಶಸಾಸ್ತ್ರಗಳನ್ನು ಒಪ್ಪಿಸುವಂತೆ ಜನತೆಯಲ್ಲಿ ಪೊಲೀಸರು ಮನವಿ ಮಾಡಿದ್ದು, ಒಂದು ವೇಳೆ ದೋಚಲಾದ ಶಸಾಸ್ತ್ರಗಳು ಕಂಡುಬಂದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಗ್ನಿಜಂಟ್, ಇನ್ಫೋಸಿಸ್, ಟಿಸಿಎಸ್, ವಿಪ್ರೋ ಎಚ್‌ಸಿಎಲ್ ಗೆ ಅಮೆರಿಕ ಶಾಕ್: ಗ್ರೀನ್ ಕಾರ್ಡ್ ಕಾರ್ಯಕ್ರಮದಿಂದ ಅಮಾನತು!

ರಿಯಾದ್ ವಿಮಾನ ನಿಲ್ದಾಣದ ಮೇಲೆ ದಾಳಿ: ರಿಯಾದ್ ಗೆ ತೆರಳಬೇಕಿದ್ದ ಭಾರತೀಯ ವಿಮಾನಗಳು ರದ್ದು

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

ಅಂಬಾನಿ ಭಾರತದ ನಿಜವಾದ ಬಾಸ್?: ಭಾರತದಲ್ಲಿ ಸ್ಟಾರ್ ಲಿಂಕ್ ಸೇವೆ ಆರಂಭ ವಿಳಂಬಕ್ಕೆ ಎಲಾನ್ ಮಸ್ಕ್ ಹತಾಶೆ!

SIR ಕಾನೂನುಬದ್ಧ: ಪ್ರತಿಪಕ್ಷಗಳ ಪ್ರತಿಭಟನೆ ನಡುವೆ CEC ಜ್ಞಾನೇಶ್ ಬೆಂಬಲಕ್ಕೆ ನಿಂತ 42 ನಿವೃತ್ತ ನ್ಯಾಯಾಧೀಶರು!