ದೇಶ

ಒಡಿಶಾ ರೈಲು ಅಪಘಾತ: ಮೃತರಿಗೆ ತಲಾ 10 ಲಕ್ಷ ರೂ ಪರಿಹಾರ ಘೋಷಿಸಿದ ಕೇಂದ್ರ ಸರ್ಕಾರ

ಒಡಿಶಾದ ಬಾಲಸೋರ್‌ ಜಿಲ್ಲೆಯ ಬಹನಾಗಾ ರೈಲು ನಿಲ್ದಾಣದ ಬಳಿ ಸಂಭವಿಸಿದ ಭೀಕರ ರೈಲು ಅಪಘಾತದ ಸಂತ್ರಸ್ತರಿಗೆ ಕೇಂದ್ರ ಸರ್ಕಾರ ಪರಿಹಾರ ಘೋಷಣೆ ಮಾಡಿದ್ದು, ಮೃತಪಟ್ಟವರ ಕುಟುಂದವರಿಗೆ 10 ಲಕ್ಷ ರೂ. ಪರಿಹಾರ ನೀಡುವುದಾಗಿ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಘೋಷಿಸಿದ್ದಾರೆ.

ನವದೆಹಲಿ: ಒಡಿಶಾದ ಬಾಲಸೋರ್‌ ಜಿಲ್ಲೆಯ ಬಹನಾಗಾ ರೈಲು ನಿಲ್ದಾಣದ ಬಳಿ ಸಂಭವಿಸಿದ ಭೀಕರ ರೈಲು ಅಪಘಾತದ ಸಂತ್ರಸ್ತರಿಗೆ ಕೇಂದ್ರ ಸರ್ಕಾರ ಪರಿಹಾರ ಘೋಷಣೆ ಮಾಡಿದ್ದು, ಮೃತಪಟ್ಟವರ ಕುಟುಂದವರಿಗೆ 10 ಲಕ್ಷ ರೂ. ಪರಿಹಾರ ನೀಡುವುದಾಗಿ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಘೋಷಿಸಿದ್ದಾರೆ.

ಒಡಿಶಾದ ಬಾಲಾಸೋರ್‌ ಜಿಲ್ಲೆಯಲ್ಲಿ ನಡೆದ ಭೀಕರ ರೈಲು ಅಪಘಾತದಲ್ಲಿ 50ಕ್ಕೂ ಅಧಿಕ ಜನ ಮೃತಪಟ್ಟಿದ್ದು, ಮೃತರ ಕುಟುಂಬಸ್ಥರಿಗೆ ಕೇಂದ್ರ ಸರ್ಕಾರ ಪರಿಹಾರ ಘೋಷಿಸಿದೆ. ಮೃತರ ಕುಟುಂಬಸ್ಥರಿಗೆ 10 ಲಕ್ಷ ರೂಪಾಯಿ, ಗಂಭೀರವಾಗಿ ಗಾಯಗೊಂಡವರಿಗೆ 2 ಲಕ್ಷ ರೂಪಾಯಿ ಹಾಗೂ ಸಣ್ಣ-ಪುಟ್ಟ ಗಾಯಾಳುಗಳಿಗೆ 50 ಸಾವಿರ ರೂಪಾಯಿಯನ್ನು ಕೇಂದ್ರ ಸರ್ಕಾರ ಘೋಷಿಸಿದೆ. 

ಅಪಘಾತ ಸ್ಥಳದತ್ತ ಹೊರಟ ರೈಲ್ವೆ ಸಚಿವ
ಅಪಘಾತದ ಕುರಿತು ಮಾಹಿತಿ ಲಭ್ಯವಾಗುತ್ತಲೇ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಅವರು ಅಪಘಾತದ ಸ್ಥಳಕ್ಕೆ ತೆರಳಲು ಮುಂದಾಗಿದ್ದಾರೆ. ಹಾಗೆಯೇ, ಒಡಿಶಾ ಮುಖ್ಯಮಂತ್ರಿ ನವೀನ್‌ ಪಾಟ್ನಾಯಕ್‌ ಅವರು ಕೂಡ ಅಪಘಾತ ಸ್ಥಳಕ್ಕೆ ತೆರಳಲು ತೀರ್ಮಾನಿಸಿದ್ದಾರೆ. ಶನಿವಾರ ಬೆಳಗ್ಗೆ ಪಾಟ್ನಾಯಕ್‌ ಅವರು ಅಪಘಾತ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಲಿದ್ದಾರೆ. ಕ್ಷಿಪ್ರವಾಗಿ ರಕ್ಷಣಾ ಕಾರ್ಯಾಚರಣೆ ಕೈಗೊಳ್ಳಬೇಕು ಎಂದು ಸೂಚಿಸಿದ್ದಾರೆ. 

ಒಡಿಶಾದ ಘಟನಾ ಸ್ಥಳಕ್ಕೆ ಧಾವಿಸುತ್ತಿದ್ದೇನೆ. ಘಟನೆಯಲ್ಲಿ ಸಾವಿಗೀಡಾದವರ ಕುಟುಂಬದವರಿಗೆ ಸಂತಾಪಗಳು. ಗಾಯಾಳುಗಳು ಬೇಗನೆ ಚೇತರಿಸುವಂತಾಗಲಿ ಎಂದು ಪ್ರಾರ್ಥಿಸುತ್ತೇವೆ. ಭುವನೇಶ್ವರ ಮತ್ತು ಕೋಲ್ಕತ್ತಗಳಿಂದ ರಕ್ಷಣಾ ತಂಡಗಳು ಸ್ಥಳಕ್ಕೆ ತಲುಪಿವೆ. ಎನ್​​ಡಿಆರ್​ಎಫ್, ರಾಜ್ಯ ಸರ್ಕಾರಗಳ ತಂಡಗಳೂ ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿವೆ.

ವಾಯುಪಡೆಯ ತಂಡವೂ ರಕ್ಷಣಾ ಕಾರ್ಯಾಚರಣೆಯಲ್ಲಿ ಕೈಜೋಡಿಸಿದೆ. ರಕ್ಷಣಾ ಕಾರ್ಯಾಚರಣೆಗೆ ಸಾಧ್ಯವಿರುವ ಎಲ್ಲ ಕ್ರಮಗಳನ್ನೂ ಕೈಗೊಳ್ಳಲಾಗುತ್ತಿದೆ ಎಂದು ಅಶ್ವಿನಿ ವೈಷ್ಣವ್ ಟ್ವೀಟ್ ಮಾಡಿದ್ದಾರೆ.

ಕೋರಮಂಡಲ್ ಎಕ್ಸ್‌ಪ್ರೆಸ್ (Coromandel Express) ರೈಲು ಸರಕು ಸಾಗಣೆ ರೈಲಿಗೆ ಡಿಕ್ಕಿ ಹೊಡೆದ ಪರಿಣಾಮ ಸಂಭವಿಸಿದ ದುರಂತದಲ್ಲಿ ಕನಿಷ್ಠ 50 ಮಂದಿ ಮೃತಪಟ್ಟಿದ್ದು ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. 300ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಕೋರಮಂಡಲ್ ಎಕ್ಸ್‌ಪ್ರೆಸ್ ರೈಲು ಶುಕ್ರವಾರ ಸಂಜೆ ಒಡಿಶಾದ ಬಾಲಸೋರ್‌ನಿಂದ ಸುಮಾರು 40 ಕಿಮೀ ದೂರದಲ್ಲಿ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿತ್ತು. ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದ ನಂತರ ರೈಲಿನ 3 ಸ್ಲೀಪರ್ ಕೋಚ್‌ಗಳನ್ನು ಬಿಟ್ಟು ಉಳಿದ ಬೋಗಿಗಳು ಹಳಿತಪ್ಪಿದ್ದವು. ಸುಮಾರು 18 ಬೋಗಿಗಳು ಹಳಿ ತಪ್ಪಿವೆ ಎನ್ನಲಾಗಿದೆ. ಈ ರೈಲು ಚೆನ್ನೈ ಸೆಂಟ್ರಲ್‌ ಹಾಗೂ ಕೋಲ್ಕತ್ತಾದ ಶಾಲಿಮಾರ್ ರೈಲು ನಿಲ್ದಾಣದ ಮಧ್ಯೆ ಸಂಚರಿಸುತ್ತಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಂಬೈ: ಖ್ಯಾತ ಹಿರಿಯ ಗಾಯಕಿ ಆಶಾ ಭೋಸ್ಲೆ ನಿಧನ, ಗಣ್ಯರ ಕಂಬನಿ

ಬೇಡ ಬೇಡ ಹೀಗೆಲ್ಲಾ ಮಾಡಬೇಡಿ: ರಸ್ತೆಯಲ್ಲೇ ಗಳಗಳನೆ ಅತ್ತ ನಟಿ ರಮ್ಯಾ

US-Iran Peace Talks: ಇಸ್ಲಾಮಾಬಾದ್‌ನಲ್ಲಿ 21 ಗಂಟೆ ಮಾತುಕತೆಯಾದ್ರು, ಯುಎಸ್- ಇರಾನ್ ಶಾಂತಿ ಒಪ್ಪಂದ ವಿಫಲ! ಕಾರಣಗಳೇನು?

'ಇರಾನ್ ನಮಗೆ ಬೆದರಿಕೆಯೊಡ್ಡಿತ್ತು, ಆದರೆ ಈಗ ಬದುಕುಳಿಯಲು ಹೋರಾಡುತ್ತಿದೆ': ಶಾಂತಿ ಮಾತುಕತೆ ವಿಫಲದ ಬಳಿಕ ಇಸ್ರೇಲ್!

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

SCROLL FOR NEXT