ರಾಹುಲ್ ಗಾಂಧಿ 
ದೇಶ

2024ರ ಲೋಕಸಭೆ ಚುನಾವಣೆಯಲ್ಲಿ ಮಹಾ ಮೈತ್ರಿಯಿಂದ ಬಿಜೆಪಿಗೆ ಸೋಲು: ರಾಹುಲ್ ಗಾಂಧಿ

ಕಾಂಗ್ರೆಸ್‌ ಪಕ್ಷವು ಎಲ್ಲಾ ವಿರೋಧ ಪಕ್ಷಗಳೊಂದಿಗೆ ನಿರಂತರವಾಗಿ ಮಾತುಕತೆ ನಡೆಸುತ್ತಿದೆ. ಕೆಲವು ರಾಜ್ಯಗಳಲ್ಲಿ ಕೊಡುಕೊಳ್ಳುವಿಕೆಯ ನಿಲುವನ್ನು ಕಾಂಗ್ರೆಸ್‌ ಹೊಂದಲಿದೆ. ಮಾತುಕತೆಗಳ ನಂತರ ಮಹಾಒಕ್ಕೂಟ ರಚನೆಯಾಗಿದೆ.

ವಾಷಿಂಗ್ಟನ್‌: ಕಾಂಗ್ರೆಸ್‌ ಪಕ್ಷವು ಎಲ್ಲಾ ವಿರೋಧ ಪಕ್ಷಗಳೊಂದಿಗೆ ನಿರಂತರವಾಗಿ ಮಾತುಕತೆ ನಡೆಸುತ್ತಿದೆ. ಕೆಲವು ರಾಜ್ಯಗಳಲ್ಲಿ ಕೊಡುಕೊಳ್ಳುವಿಕೆಯ ನಿಲುವನ್ನು ಕಾಂಗ್ರೆಸ್‌ ಹೊಂದಲಿದೆ. ಮಾತುಕತೆಗಳ ನಂತರ ಮಹಾಒಕ್ಕೂಟ ರಚನೆಯಾಗಿದೆ. ಲೋಕಸಭೆ ಚುನಾವಣೆಯಲ್ಲಿ ಒಳ್ಳೇಯದೇ ಆಗುತ್ತದೆ ಎನ್ನುವ ನಂಬಿಕೆಯೂ ನನಗಿದೆ ಎಂದು ರಾಹುಲ್ ಗಾಂಧಿ ವಿಶ್ವಾಸ ವ್ಯಕ್ತ ಪಡಿಸಿದ್ದಾರೆ.

ವಾಷಿಂಗ್ಟನ್‌ನ ನ್ಯಾಷನಲ್ ಪ್ರೆಸ್ ಕ್ಲಬ್‌ನಲ್ಲಿ ಗುರುವಾರ ಅವರು ಪತ್ರಕರ್ತರೊಂದಿಗೆ ಸಂವಾದ ನಡೆಸಿದರು. ಈ ವೇಳೆ ಮಾತನಾಡಿದ ಅವರು  ಪ್ರಧಾನಿ ನರೇಂದ್ರ ಮೋದಿಯವರು ಭಾರತೀಯ ಸಮಾಜದ ಕತ್ತು ಹಿಸುಕುತ್ತಿದ್ದಾರೆ, ಇದೆಲ್ಲವನ್ನೂ ಮೀರಿ 2024ರ ಚುನಾವಣೆಯಲ್ಲಿ ಪ್ರತಿಪಕ್ಷಗಳು ಬಿಜೆಪಿಯನ್ನು ಸೋಲಿಸಲಿವೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಉತ್ತಮ ಸಾಧನೆ ಮಾಡುತ್ತದೆ ಎಂದು ನಾನು ನಂಬಿದ್ದೇನೆ. ಆಶ್ಚರ್ಯಕರ ರೀತಿಯಲ್ಲಿ ಪಕ್ಷ ಹೊರಹೊಮ್ಮಲಿದೆ. ನೋಡುತ್ತಿರಿ, ವಿರೋಧ ಪಕ್ಷಗಳ ಒಗ್ಗಟ್ಟು ಬಿಜೆಪಿಯನ್ನು ಸೋಲಿಸಲಿದೆ’ ಎಂದು ಅವರು ಹೇಳಿದರು.

‘ನರೇಂದ್ರ ಮೋದಿ ಅವರು ಭಾರತೀಯ ಸಮಾಜವನ್ನು ಧ್ರುವೀಕರಿಸುತ್ತಿದ್ದಾರೆ ಮತ್ತು ಒಡೆಯುತ್ತಿದ್ದಾರೆ. ಅವರ ಆಡಳಿತದಲ್ಲಿ ಸಾಂವಿಧಾನಿಕ ಸಂಸ್ಥೆಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ’ ಎಂದು ಅವರು ಆರೋಪಿಸಿದರು.

‘140 ಕೋಟಿ ಜನರಿರುವ, ವಿವಿಧ ನಂಬಿಕೆಗಳ, ಜಾತ್ಯತೀತ ಸಂವಿಧಾನದ ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಹಿಂದುತ್ವವನ್ನು ಪ್ರತಿಪಾದಿಸುತ್ತಿದೆ’ ಎಂದು ಅವರು ಆರೋಪಿಸಿದರು.

ಜೂನ್ 22 ರಂದು ಮೋದಿ ಅಮೆರಿಕ ಭೇಟಿ ಕೈಗೊಳ್ಳಲಿದ್ದಾರೆ. ಅವರ ಸ್ವಾಗತಕ್ಕೆ ಶ್ವೇತಭವನದಲ್ಲಿ ಭಾರಿ ಸಿದ್ಧತೆಗಳು ನಡೆಯುತ್ತಿರುವ ನಡುವೆಯೇ ರಾಹುಲ್‌ ಅಮೆರಿಕಕ್ಕೆ ಭೇಟಿ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್

ನಂದಿಗ್ರಾಮದಲ್ಲಿ 1.22 ಲಕ್ಷ ಮತ, ಅಸ್ಸಾಂನಲ್ಲಿ BJPಗೆ ಗೆಲುವು; 2 ಕ್ಷೇತ್ರ ಗೆದ್ದ TVK: ಕಾಂಗ್ರೆಸ್, ದೀದಿಗೆ ಮುಖಭಂಗ!