ದೇಶ

ಒಡಿಶಾ ರೈಲು ದುರಂತ: ನೌಕಾಪಡೆಯಿಂದ ವೈದ್ಯಕೀಯ ತಂಡ ನಿಯೋಜನೆ

ಒಡಿಶಾದಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದ ತ್ರಿವಳಿ ರೈಲು ಅಪಘಾತದಲ್ಲಿ ಗಾಯಗೊಂಡವರಿಗೆ ಚಿಕಿತ್ಸೆ ನೀಡಲು ಭಾರತೀಯ ನೌಕಾಪಡೆಯು ಬಾಲಸೋರ್ ಜಿಲ್ಲೆಯಲ್ಲಿ ವೈದ್ಯಕೀಯ ತಂಡಗಳನ್ನು ನಿಯೋಜಿಸಿದೆ.

ಬಾಲಾಸೋರ್: ಒಡಿಶಾದಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದ ತ್ರಿವಳಿ ರೈಲು ಅಪಘಾತದಲ್ಲಿ ಗಾಯಗೊಂಡವರಿಗೆ ಚಿಕಿತ್ಸೆ ನೀಡಲು ಭಾರತೀಯ ನೌಕಾಪಡೆಯು ಬಾಲಸೋರ್ ಜಿಲ್ಲೆಯಲ್ಲಿ ವೈದ್ಯಕೀಯ ತಂಡಗಳನ್ನು ನಿಯೋಜಿಸಿದೆ. ಗಾಯಾಳುಗಳಿಗೆ ವೈದ್ಯಕೀಯ ನೆರವು ಮತ್ತು ಬೆಂಬಲ ಒದಗಿಸಲು ಭಾರತೀಯ ನೌಕಾಪಡೆ ಒಡಿಶಾದ ರಾಜ್ಯದ ಆಡಳಿತದೊಂದಿಗೆ ನಿಕಟ ಸಮನ್ವಯದೊಂದಿಗೆ ಕಾರ್ಯನಿರ್ವಹಿಸುತ್ತಿದೆ ಎಂದು ನೌಕಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.

ಈ ಅಪಘಾತದಲ್ಲಿ ಕನಿಷ್ಠ 288 ಜನರು ಮೃತಪಟ್ಟಿದ್ದು,  803 ಮಂದಿ ಗಾಯಗೊಂಡಿದ್ದಾರೆ. ಇದು ದೇಶದ ಅತ್ಯಂತ ಭೀಕರ ರೈಲು ದುರಂತಗಳಲ್ಲಿ ಒಂದಾಗಿದೆ. ಐಎನ್‌ಎಸ್ ಚಿಲ್ಕಾದಿಂದ ಶಸ್ತ್ರಚಿಕಿತ್ಸಾ ತಜ್ಞರು ಮತ್ತು ವೈದ್ಯಕೀಯ ಸಹಾಯಕರು, ಆಂಬ್ಯುಲೆನ್ಸ್‌ಗಳು ಮತ್ತು ಬೆಂಬಲ ಸೇವೆಗಳು ಸೇರಿದಂತೆ 43 ಸಿಬ್ಬಂದಿಗಳ ವೈದ್ಯಕೀಯ ಮತ್ತು ಬೆಂಬಲ ತಂಡವನ್ನು ಕಳೆದ ರಾತ್ರಿ ಕಳುಹಿಸಲಾಗಿದ್ದು, ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಬಾಲಸೋರ್‌ ನಲ್ಲಿರುವ ಜಿಲ್ಲಾ ಆಸ್ಪತ್ರೆಯಲ್ಲಿ ತಕ್ಷಣದ ವೈದ್ಯಕೀಯ ಪರಿಹಾರ ಮತ್ತು ಆಪರೇಷನ್ ಥಿಯೇಟರ್ ಸೌಲಭ್ಯಗಳನ್ನು ವಿಸ್ತರಿಸಲಾಗಿದೆ ಎಂದು  ನೌಕಾಪಡೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.ಒಡಿಶಾದ INS ಚಿಲ್ಕಾ ಭಾರತೀಯ ನೌಕಾಪಡೆಯ ಪ್ರಮುಖ ತರಬೇತಿ ಸಂಸ್ಥೆಯಾಗಿದೆ.

ಗಂಭೀರವಲ್ಲದ ರೋಗಿಗಳಿಗೆ ಚಿಕಿತ್ಸೆ ನೀಡಲು ಬಾಲಸೋರ್‌ನ ಗಂಗಾಧರ ಕಲ್ಯಾಣ ಮಂಟಪದಲ್ಲಿ ನೌಕಾಪಡೆಯ ವೈದ್ಯಕೀಯ ಪರಿಹಾರ ತಂಡದಿಂದ ವೈದ್ಯಕೀಯ ಕ್ಯಾಂಪ್ ತೆರೆಯಲಾಗಿದೆ. ನೌಕಾಪಡೆ ತಂಡ  ಗಾಯಾಳುಗಳನ್ನು ಸ್ಥಳಾಂತರಿಸಲು ಮತ್ತು ರಕ್ಷಿಸಲು ಒಡಿಶಾ ನಾಗರಿಕ ಆಡಳಿತಕ್ಕೆ ಸಹಾಯ ಮತ್ತು ಬೆಂಬಲವನ್ನು ನೀಡುತ್ತಿದೆ  ಅಧಿಕಾರಿ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

ಮತ ಬೇಟೆ ತಡೆಯಲು 'ಕೈ' ಕಲಿಗಳ ಮಾಸ್ಟರ್ ಪ್ಲ್ಯಾನ್: ಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಮಹತ್ವದ ಸಭೆ, ಬೂತ್ ಮಟ್ಟದಲ್ಲಿ ಸಮರಕ್ಕೆ ಸಜ್ಜು..!

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

SIR ಗೊಂದಲ: ಅಕ್ರಮ ಬಯಲಾಗುವ ಭೀತಿಯಿಂದಲೇ ರಾಜಪಾಲರ ಬಳಿ ಓಡಿದ್ದಾರೆ: NDA ನಾಯಕರ ವಿರುದ್ಧ ಡಿಕೆ.ಶಿವಕುಮಾರ್ ವಾಗ್ದಾಳಿ

ಕೋಟಿ ಕೋಟಿ ಲೂಟಿ: ಅರಣ್ಯ ಇಲಾಖೆ ಮಾಜಿ ಅಧಿಕಾರಿಗೆ ಕೋರ್ಟ್ ಶಾಕ್; ಬರೋಬ್ಬರಿ 1.38 ಕೋಟಿ ದಂಡ, 3 ವರ್ಷ ಜೈಲು ಶಿಕ್ಷೆ..!