ದೇಶ

ಒಡಿಶಾ ತ್ರಿವಳಿ ರೈಲು ದುರಂತ: ಕೇಂದ್ರ ಸಚಿವ ಅಶ್ವಿನ್ ವೈಷ್ಣವ್ ರಾಜೀನಾಮೆಗೆ ಶರದ್ ಪವಾರ್ ಒತ್ತಾಯ

Nagaraja AB

ಮುಂಬೈ: ಒಡಿಶಾದ ಬಾಲಾಸೋರ್ ಜಿಲ್ಲೆಯ ಬಹನಾಗ ನಿಲ್ದಾಣ ಬಳಿ ಸಂಭವಿಸಿದ ತ್ರಿವಳಿ ರೈಲು ಅಪಘಾತಕ್ಕೆ ನೈತಿಕ ಹೊಣೆ ಹೊತ್ತು ಕೇಂದ್ರ ರೈಲ್ವೆ ಸಚಿವ ಸ್ಥಾನಕ್ಕೆ ಅಶ್ವಿನ್ ವೈಷ್ಣವ್ ರಾಜೀನಾಮೆ ನೀಡಬೇಕೆಂದು ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಶನಿವಾರ ಒತ್ತಾಯಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಾಲ್ ಬಹದ್ದೂರ್ ಶಾಸ್ತ್ರೀ ರೈಲ್ವೆ ಸಚಿವರಾಗಿದ್ದಾಗ ಅಪಘಾತ ಮರುಕಳಿಸಿದಾಗ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಜವಾಹರ್ ಲಾಲ್ ನೆಹರೂ ಅವರ ವಿರೋಧ ಇದ್ದರೂ ನೈತಿಕ ಹೊಣೆ ಹೊತ್ತು ಶಾಸ್ತ್ರೀ ಅವರು ರಾಜೀನಾಮೆ ನೀಡಿದ್ದರು. ಈಗ ದೇಶದಲ್ಲಿ ಅದೇ ರೀತಿಯ ಅಪಘಾತವಾಗಿದ್ದು, ಅಶ್ವಿನ್ ವೈಷ್ಣವ್ ರಾಜೀನಾಮೆ ನೀಡಲು ಮುಂದಾಗಬೇಕು ಎಂದರು.

ರೈಲು ದುರಂತದಲ್ಲಿ 288 ಮೃತದೇಹಗಳು ಪತ್ತೆಯಾಗಿದ್ದು, 1, 000ಕ್ಕೂ ಹೆಚ್ಚು ಗಾಯಾಳುಗಳನ್ನು ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಹಳಿ ತಪ್ಪಿದ ರೈಲುಗಳ ಅವಶೇಷಗಳನ್ನು ಹಳಿಯಿಂದ ತೆರವುಗೊಳಿಸುವ ಕಾರ್ಯ ಭರದಿಂದ ನಡೆಯುತ್ತಿದೆ.
 

SCROLL FOR NEXT