ಒಡಿಶಾ ರೈಲು ದುರಂತದ ಚಿತ್ರ 
ದೇಶ

ಒಡಿಶಾ ರೈಲು ದುರಂತ: ನಿರ್ಲಕ್ಷ್ಯವೇ ಸಾವಿಗೆ ಕಾರಣ, ರೈಲ್ವೆ ಪೊಲೀಸರಿಂದ ಪ್ರಕರಣ ದಾಖಲು

ಒಡಿಶಾದ ಬಹನಾಗ ಬಳಿ ಸಂಭವಿಸಿದ ಭೀಕರ ರೈಲು ಅಪಘಾತದ ನಂತರ ನಿರ್ಲಕ್ಷ್ಯದಿಂದ ಸಾವು, ನೋವಿಗೆ ಕಾರಣವಾಗಿದ್ದಕ್ಕೆ ಅಪರಿಚಿತ ವ್ಯಕ್ತಿಗಳ ವಿರುದ್ಧ ಸರ್ಕಾರಿ ರೈಲ್ವೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಭುವನೇಶ್ವರ: ಒಡಿಶಾದ ಬಹನಾಗ ಬಳಿ ಸಂಭವಿಸಿದ ಭೀಕರ ರೈಲು ಅಪಘಾತದ ನಂತರ ನಿರ್ಲಕ್ಷ್ಯವೇ ಸಾವು, ನೋವಿಗೆ ಕಾರಣವಾಗಿದ್ದಕ್ಕೆ ಅಪರಿಚಿತ ವ್ಯಕ್ತಿಗಳ ವಿರುದ್ಧ ಸರ್ಕಾರಿ ರೈಲ್ವೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ನಿರ್ದಿಷ್ಟ ರೈಲ್ವೇ ಉದ್ಯೋಗಿಗಳ ಅಪರಾಧವನ್ನು ಇನ್ನೂ ಪತ್ತೆ ಮಾಡಲಾಗಿಲ್ಲ. ತನಿಖೆ ಸಮಯದಲ್ಲಿ ಬಹಿರಂಗಪಡಿಸಲಾಗುವುದು ಎಂದು ಕಟಕ್‌ನಲ್ಲಿ ದಾಖಲಾಗಿರುವ ಪ್ರಥಮ ಮಾಹಿತಿ ವರದಿ ತಿಳಿಸಿದೆ.

ಐಪಿಸಿ ಸೆಕ್ಷನ್ 304-ಎ (ನಿರ್ಲಕ್ಷ್ಯದಿಂದ ಸಾವಿಗೆ ಕಾರಣವಾಗುವುದು) ಸೆಕ್ಷನ್ 337 (ಇತರರ ಜೀವ ಮತ್ತು ವೈಯಕ್ತಿಕ ಸುರಕ್ಷತೆಗೆ ಅಪಾಯವನ್ನುಂಟುಮಾಡುವ ಕೃತ್ಯದಿಂದ ನೋವುಂಟುಮಾಡುವುದು) ಮತ್ತು 338 (ಘೋರ ಗಾಯವನ್ನುಂಟು ಮಾಡುವುದು) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಅಲ್ಲದೇ, ಸೆಕ್ಷನ್ 153 (ಉದ್ದೇಶಪೂರ್ವಕ ಲೋಪದಿಂದ ರೈಲ್ವೆಯಲ್ಲಿ ಪ್ರಯಾಣಿಸುವ ವ್ಯಕ್ತಿಗಳ ಸುರಕ್ಷತೆಗೆ ಅಪಾಯ ವನ್ನುಂಟುಮಾಡುವುದು), 154 (ನಿರ್ಲಕ್ಷ್ಯದ ಕ್ರಿಯೆ ಅಥವಾ ಲೋಪದಿಂದ ರೈಲ್ವೆಯಲ್ಲಿ ಪ್ರಯಾಣಿಸುವ ವ್ಯಕ್ತಿಗಳ ಸುರಕ್ಷತೆಗೆ ಅಪಾಯವನ್ನುಂಟುಮಾಡುವುದು) ಹಾಗೆಯೇ 175 (ವ್ಯಕ್ತಿಗಳ ಸುರಕ್ಷತೆಗೆ ಅಪಾಯವನ್ನುಂಟುಮಾಡುವುದು) ಮತ್ತು ರೈಲ್ವೆ ಕಾಯ್ದೆ 1989 ಅಡಿಯಲ್ಲೂ ಪ್ರಕರಣ ದಾಖಲಾಗಿದೆ.

ಮೇಲಿನ ಎಲ್ಲಾ ಆರೋಪಗಳ ಅಡಿಯಲ್ಲಿ ಅತ್ಯಧಿಕ ದಂಡದೊಂದಿಗೆ ಐದು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗುತ್ತದೆ.  ಶುಕ್ರವಾರ ರಾತ್ರಿ ಬಾಲಸೋರ್‌ನ ಬಹನಾಗ ಬಜಾರ್ ನಿಲ್ದಾಣದಲ್ಲಿ ನಿಂತಿದ್ದ ಸರಕು ರೈಲಿಗೆ ಡಿಕ್ಕಿ ಹೊಡೆದು ಹಳಿ ತಪ್ಪಿದ್ದ  ಕೋರಮಂಡಲ್ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್  ಗೆ ಯಶವಂತಪುರ-ಹೌರಾ ಎಕ್ಸ್‌ಪ್ರೆಸ್‌ಗೆ ಡಿಕ್ಕಿ ಹೊಡೆದಾಗ ಕನಿಷ್ಠ 275 ಪ್ರಯಾಣಿಕರು ಸಾವನ್ನಪ್ಪಿದ್ದರು. ಸುಮಾರು 1,100 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. 

ಈ ಬಗ್ಗೆ ತನಿಖೆ ನಡೆಯುತ್ತಿದ್ದು, ಇಬ್ಬರು ಡಿಎಸ್ಪಿ ದರ್ಜೆಯ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ ಎಂದು ಸರ್ಕಾರಿ ರೈಲ್ವೆ ಪೊಲೀಸ್ ಮೂಲಗಳು ತಿಳಿಸಿವೆ. ಪ್ರಕರಣದಲ್ಲಿ ಇತರರ ಪಾತ್ರ ಕಂಡುಬಂದರೆ ತನಿಖೆ ಇನ್ನಷ್ಟು ವಿಸ್ತರಗೊಳ್ಳಬಹುದು.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

Belagavi: ಲವರ್ ಜೊತೆ ಮಗಳು ಪರಾರಿ, ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು, Video!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

SCROLL FOR NEXT