ರಾಹುಲ್ ಗಾಂಧಿ 
ದೇಶ

ಜೂನ್ 12 ರಂದು ಪಾಟ್ನಾದಲ್ಲಿ ನಡೆಯಬೇಕಿದ್ದ ಪ್ರತಿಪಕ್ಷಗಳ ಬೃಹತ್ ಸಭೆ ಮುಂದೂಡಿಕೆ

ಜೂನ್ 12 ರಂದು ಪಾಟ್ನಾದಲ್ಲಿ ನಡೆಯಬೇಕಿದ್ದ ಬೃಹತ್ ವಿರೋಧ ಪಕ್ಷದ ಸಭೆ ಇದೀಗ ಜೂನ್ 23 ರಂದು ನಡೆಯಲಿದೆ. ಕಾಂಗ್ರೆಸ್ ಮತ್ತು ಅದರ ತಮಿಳುನಾಡು ಮಿತ್ರಪಕ್ಷವಾದ ಡಿಎಂಕೆ ಮನವಿಯ ನಂತರ ಈ ದಿನಾಂಕವನ್ನು ಬದಲಾಯಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ನವದೆಹಲಿ: ಜೂನ್ 12 ರಂದು ಪಾಟ್ನಾದಲ್ಲಿ ನಡೆಯಬೇಕಿದ್ದ ಬೃಹತ್ ವಿರೋಧ ಪಕ್ಷದ ಸಭೆ ಇದೀಗ ಜೂನ್ 23 ರಂದು ನಡೆಯಲಿದೆ. ಕಾಂಗ್ರೆಸ್ ಮತ್ತು ಅದರ ತಮಿಳುನಾಡು ಮಿತ್ರಪಕ್ಷವಾದ ಡಿಎಂಕೆ ಮನವಿಯ ನಂತರ ಈ ದಿನಾಂಕವನ್ನು ಬದಲಾಯಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಕಾಂಗ್ರೆಸ್‌ನ ರಾಹುಲ್ ಗಾಂಧಿ ಗೈರುಹಾಜರಿಯ ಹಿನ್ನೆಲೆಯಲ್ಲಿ ಈ ಬದಲಾವಣೆ ಮಾಡಿರುವ ಸಾಧ್ಯತೆ ಇದೆ ಎನ್ನಲಾಗಿದೆ.
ರಾಹುಲ್ ಗಾಂಧಿ ಅವರು ಸದ್ಯ ಅಮೆರಿಕ ಪ್ರವಾಸದಲ್ಲಿದ್ದು, ಜೂನ್ 15 ರಂದು ಹಿಂದಿರುಗುವ ನಿರೀಕ್ಷೆಯಿದೆ. ಅವರ ತಾಯಿ ಸೋನಿಯಾ ಗಾಂಧಿ ಕೂಡ ವೈದ್ಯಕೀಯ ಕಾರಣಗಳಿಗಾಗಿ ವಿದೇಶದಲ್ಲಿದ್ದಾರೆ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಜೊತೆಯಲ್ಲಿದ್ದಾರೆ.

ಡಿಎಂಕೆ ಕೂಡ ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಭಾಗವಹಿಸಬೇಕಾದ ಸರ್ಕಾರಿ ಕಾರ್ಯಕ್ರಮ ಇರುವುದರಿಂದ ಸಭೆಯನ್ನು ಮುಂದೂಡಬೇಕೆಂದು ಬಯಸಿದೆ.

2024 ರಲ್ಲಿ ಬಿಜೆಪಿಯನ್ನು ಎದುರಿಸಲು ಪ್ರತಿಪಕ್ಷಗಳನ್ನು ಒಟ್ಟುಗೂಡಿಸಲು ಸ್ವಯಂಪ್ರೇರಿತ ಮುಂದಾಳತ್ವ ವಹಿಸಿರುವ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಇಚ್ಛೆಯ ಮೇರೆಗೆ ಪಾಟ್ನಾದಲ್ಲಿ ಸಭೆ ನಡೆಯುತ್ತಿದೆ. ಕಳೆದ ತಿಂಗಳು ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದ ನಂತರ ಈ ದಿನಾಂಕವನ್ನು ನಿರ್ಧರಿಸಲಾಯಿತು.

ನಿತೀಶ್ ಕುಮಾರ್ ಇದುವರೆಗೆ ಮಮತಾ ಬ್ಯಾನರ್ಜಿ, ಅರವಿಂದ್ ಕೇಜ್ರಿವಾಲ್ ಮತ್ತು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರಂತಹ ನಾಯಕರನ್ನು ಭೇಟಿ ಮಾಡಿ ಒಟ್ಟಿಗೆ ಕರೆತಂದಿದ್ದಾರೆ.

ದೆಹಲಿಯ ಅಧಿಕಾರವನ್ನು ತನ್ನ ನಿಯಂತ್ರಣಕ್ಕೆ ತೆಗೆದುಕೊಳ್ಳಲು ಕೇಂದ್ರ ಸರ್ಕಾರದ ಇತ್ತೀಚಿನ ಸುಗ್ರೀವಾಜ್ಞೆ ಮತ್ತು ಸಂಸತ್ತಿನಲ್ಲಿ ಮಸೂದೆಯನ್ನು ತಡೆಯಲು ಸಹಾಯ ಕೋರಿ ಅರವಿಂದ್ ಕೇಜ್ರಿವಾಲ್ ಅವರು ವಿರೋಧ ಪಕ್ಷದ ನಾಯಕರೊಂದಿಗೆ ನಡೆಸಿದ ಸಭೆಗಳು ಇದೀಗ ಬಿಜೆಪಿ ವಿರುದ್ಧದ ಎಲ್ಲಾ ವಿಪಕ್ಷಗಳ ಒಟ್ಟುಗೂಡುವಿಕೆಗೆ ಮತ್ತಷ್ಟು ಪ್ರೇರಣೆ ನೀಡಿದೆ.

ಹೆಚ್ಚಿನ ವಿರೋಧ ಪಕ್ಷಗಳು ಕೇಜ್ರಿವಾಲ್ ಅವರನ್ನು ಅವರನ್ನು ಬೆಂಬಲಿಸಿವೆ. ಕೇಂದ್ರವು ಫೆಡರಲ್ ತತ್ವಗಳನ್ನು ಉಲ್ಲಂಘಿಸುತ್ತಿದೆ ಎಂದು ಆರೋಪಿಸಿರುವ ಅವರು, ಕಾಂಗ್ರೆಸ್ ಕೂಡ ತಮ್ಮನ್ನು ಬೆಂಬಲಿಸಬೇಕು ಎಂದು ಸ್ಪಷ್ಟಪಡಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

GBA ಆಯ್ತು.. ಈಗ ಗ್ರೇಟರ್ ಮೈಸೂರು ಸಿಟಿ ಕಾರ್ಪೋರೇಷನ್ ಗೆ ಸಂಪುಟ ಅನುಮೋದನೆ!

'ಮಾತು' ಜಗತ್ತಿಗೆ ಉತ್ತಮವಾಗದ ಹೊರತು ಅದು ಶಕ್ತಿಯಲ್ಲ; ಡಿಕೆಶಿ ಪೋಸ್ಟ್​​ಗೆ CM ಸಿದ್ದರಾಮಯ್ಯ ಕೌಂಟರ್

ಮಹಿಳೆಗೆ ಕಚ್ಚಿದ ನಾಯಿ, ಪ್ರಶ್ನೆ ಮಾಡಿದ ಸಂತ್ರಸ್ಥೆಗೆ ಮಾಲಕಿ ಕಪಾಳಮೋಕ್ಷ, Video Viral

ಸಂಸತ್ತಿನಲ್ಲಿ 'ವಂದೇ ಮಾತರಂ', 'ಜೈ ಹಿಂದ್' ಘೋಷಣೆಗಳಿಗೆ ಆಕ್ಷೇಪಣೆ ಯಾಕೆ?: ಬಿಜೆಪಿ ಪ್ರಶ್ನಿಸಿದ ಕಾಂಗ್ರೆಸ್

ಯುದ್ಧ ಸಾರಿದ ನ್ಯೂಜಿಲೆಂಡ್, 25 ಲಕ್ಷ Stone Cold Killers ನಿರ್ಮೂಲನೆ ಮಾಡುವ ಶಪಥ!

SCROLL FOR NEXT