ಸಾಂದರ್ಭಿಕ ಚಿತ್ರ 
ದೇಶ

ಮುಂಬೈ: ಹುಟ್ಟುಹಬ್ಬದ ಪಾರ್ಟಿ ಬಿಲ್‌ಗಾಗಿ ಸ್ನೇಹಿತನನ್ನೇ ಹತ್ಯೆ ಮಾಡಿದ ನಾಲ್ವರು ಯುವಕರ ಬಂಧನ

ಹುಟ್ಟುಹಬ್ಬದ ಪಾರ್ಟಿಯಲ್ಲಿ ಊಟದ ಬಿಲ್ ಷೇರ್ ಮಾಡಿಕೊಳ್ಳುವ ವಿಚಾರಕ್ಕೆ 20 ವರ್ಷದ ಯುವಕನನ್ನು ಹತ್ಯೆ ಮಾಡಿದ ಆತನ ನಾಲ್ವರು ಸ್ನೇಹಿತರನ್ನು ಪೊಲೀಸರು ಬಂಧಿಸಿದ್ದಾರೆ.

ಮುಂಬೈ: ಹುಟ್ಟುಹಬ್ಬದ ಪಾರ್ಟಿಯಲ್ಲಿ ಊಟದ ಬಿಲ್ ಷೇರ್ ಮಾಡಿಕೊಳ್ಳುವ ವಿಚಾರಕ್ಕೆ 20 ವರ್ಷದ ಯುವಕನನ್ನು ಹತ್ಯೆ ಮಾಡಿದ ಆತನ ನಾಲ್ವರು ಸ್ನೇಹಿತರನ್ನು ಪೊಲೀಸರು ಬಂಧಿಸಿದ್ದಾರೆ.

ಪೊಲೀಸರು ಎಲ್ಲಾ ನಾಲ್ವರು ಆರೋಪಿಗಳನ್ನು ಬಂಧಿಸಿದ್ದು, ಅವರಲ್ಲಿ ಇಬ್ಬರನ್ನು ಜೈಲಿಗೆ ಕಳುಹಿಸಲಾಗಿದೆ. ಇಬ್ಬರು ಅಪ್ರಾಪ್ತ ಆರೋಪಿಗಳಾಗಿದ್ದು, ಅವರನ್ನು ಬಾಲಾಪರಾಧಿ ಗೃಹಕ್ಕೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, ಮೇ 31 ರಂದುಹುಟ್ಟುಹಬ್ಬ ಆಚರಿಸಿಕೊಂಡ ಹತ್ಯೆಯಾದ ಯುವಕ, ಮುಂಬೈನ ಶಿವಾಜಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಗೋವಂಡಿಯಲ್ಲಿರುವ ಧಾಬಾದಲ್ಲಿ ಅಂದು ರಾತ್ರಿ 8 ಗಂಟೆ ಸುಮಾರಿಗೆ ಸ್ನೇಹಿತರ ಜತೆ ಪಾರ್ಟಿ ಮಾಡಿದ್ದಾನೆ.

ಊಟದ ಬಿಲ್ ಸುಮಾರು 10,000 ರೂಪಾಯಿ ಆಗಿದ್ದು, ಅದನ್ನು ಹತ್ಯೆಯಾದ ಯುವಕ ಪಾವತಿಸಿದ್ದಾನೆ. ನಂತರ ಆತನಿಗೆ ಹಣ ಕೊಡುವುದಾಗಿ ಉಳಿದ ಸ್ನೇಹಿತರು ಒಪ್ಪಿಕೊಂಡಿದ್ದರು ಎನ್ನಲಾಗಿದೆ.

ಬಳಿಕ ಕೊಲೆಯಾದ ಯುವಕ ತನ್ನ ಸ್ನೇಹಿತರ ಬಳಿ ಹಣ ಕೇಳಿದಾಗ ಹಣ ಕೊಡಲು ನಿರಾಕರಿಸಿ ಬೆದರಿಕೆ ಹಾಕಿದ್ದಾರೆ. ಎಲ್ಲಾ ನಾಲ್ವರು ಆರೋಪಿಗಳು ಹುಟ್ಟುಹಬ್ಬ ಆಚರಿಸಿಕೊಂಡ ಯುವಕನನ್ನು ಥಳಿಸಿ, ಹರಿತವಾದ ಆಯುಧದಿಂದ ಹಲ್ಲೆ ನಡೆಸಿ ಸ್ಥಳದಿಂದ ಪರಾರಿಯಾಗಿದ್ದಾರೆ.

ಘಟನೆಯ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಧಾವಿಸಿ ಯುವಕನನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಯುವಕ ಸಾವನ್ನಪ್ಪಿದ್ದಾರೆ ಎಂದು ವೈದ್ಯರು ಘೋಷಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತೀಯ ಮೂಲದ ನ್ಯಾಯಶಾಸ್ತ್ರಜ್ಞೆಗೆ ಈ ಬಾರಿಯ ನೊಬೆಲ್ ಶಾಂತಿ ಪ್ರಶಸ್ತಿ; ನವನೀತ್ ನವಿ ಪಿಳ್ಳೈಗೆ ಒಲಿದ ನೊಬೆಲ್ ಶಾಂತಿ ಗರಿ

'ಪೋಷಕರು ನನ್ನ ಆ ಖಾಸಗಿ ವಿಡಿಯೋ ನೋಡಿದ್ದರು, ಏರ್‌ಪೋರ್ಟ್‌ನಲ್ಲೇ ಕುಳಿತು ಅತ್ತಿದ್ದೆ: ವೈರಲ್‌ ಪಾರ್ಟಿ ಬಗ್ಗೆ ಅಪೂರ್ವ ಮುಖಿಜಾ! Video

ಪ್ರಜ್ವಲ್​​ ರೇವಣ್ಣಗೆ ಬಿಗ್ ಶಾಕ್; ಪರಪ್ಪನ ಅಗ್ರಹಾರದಿಂದ ಬೆಳಗಾವಿಯ ಹಿಂಡಲಗಾ ಜೈಲಿಗೆ ಮಾಜಿ ಸಂಸದನ ಶಿಫ್ಟ್!

CJP ಪ್ರತಿಭಟನೆ ಹಿನ್ನೆಲೆಯಲ್ಲಿ ರೈಲುಗಳ ರದ್ದತಿ: ಯುವಕರಿಗೆ ಹೆದರುವುದಾದರೆ ಇಡೀ ದೇಶವನ್ನೇ ಬಂದ್ ಮಾಡಿ; ಕೇಂದ್ರದ ವಿರುದ್ಧ ಅಭಿಜಿತ್ ದೀಪ್ಕೆ ಆಕ್ರೋಶ

Cockroach Janta Partyಗೆ ಬಿಗ್ ಶಾಕ್: ಜಂತರ್ ಮಂತರ್ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ ದೆಹಲಿ ಪೊಲೀಸರು, 57 ಮೆಟ್ರೋ ನಿಲ್ದಾಣಗಳು ಬಂದ್..!