ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆಯಲ್ಲಿ ತೊಡಗಿರುವ ಕುಸ್ತಿಪಟುಗಳು 
ದೇಶ

ಡಬ್ಲ್ಯುಎಫ್‌ಐಗೆ ಮಹಿಳಾ ಮುಖ್ಯಸ್ಥರನ್ನು ನೇಮಿಸಿ, ನಮ್ಮ ವಿರುದ್ಧದ ಎಫ್‌ಐಆರ್‌ ರದ್ದುಗೊಳಿಸಿ: ಅನುರಾಗ್ ಠಾಕೂರ್‌ಗೆ ಕುಸ್ತಿಪಟುಗಳ ಬೇಡಿಕೆ

ಕುಸ್ತಿಪಟುಗಳಾದ ಬಜರಂಗ್ ಪುನಿಯಾ ಮತ್ತು ಸಾಕ್ಷಿ ಮಲಿಕ್, ಮಹಿಳಾ ಡಬ್ಲ್ಯುಎಫ್‌ಐ ಮುಖ್ಯಸ್ಥರ ನೇಮಕ ಮತ್ತು ತಮ್ಮ ವಿರುದ್ಧದ ಪೊಲೀಸ್ ಎಫ್‌ಐಆರ್‌ಗಳನ್ನು ರದ್ದುಗೊಳಿಸುವುದು ಸೇರಿದಂತೆ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಅವರ ಮುಂದೆ ಐದು ಬೇಡಿಕೆಗಳನ್ನು ಇಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.

ನವದೆಹಲಿ: ಕುಸ್ತಿಪಟುಗಳಾದ ಬಜರಂಗ್ ಪುನಿಯಾ ಮತ್ತು ಸಾಕ್ಷಿ ಮಲಿಕ್, ಮಹಿಳಾ ಡಬ್ಲ್ಯುಎಫ್‌ಐ ಮುಖ್ಯಸ್ಥರ ನೇಮಕ ಮತ್ತು ತಮ್ಮ ವಿರುದ್ಧದ ಪೊಲೀಸ್ ಎಫ್‌ಐಆರ್‌ಗಳನ್ನು ರದ್ದುಗೊಳಿಸುವುದು ಸೇರಿದಂತೆ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಅವರ ಮುಂದೆ ಐದು ಬೇಡಿಕೆಗಳನ್ನು ಇಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅವುಗಳೆಂದರೆ...

1. ವ್ರೆಸ್ಲಿಂಗ್ ಫೆಡರೇಶನ್ ಆಫ್ ಇಂಡಿಯಾ (WFI) ಗೆ ಮಹಿಳೆಯೊಬ್ಬರು ಮುಖ್ಯಸ್ಥರಾಗಿರಬೇಕು.
2. ವ್ರೆಸ್ಲಿಂಗ್ ಫೆಡರೇಶನ್ ಆಫ್ ಇಂಡಿಯಾ (WFI) ಗೆ ಮುಕ್ತ ಮತ್ತು ನ್ಯಾಯಯುತ ಚುನಾವಣೆಗಳು ನಡೆಯಬೇಕು.
3. ಮಾಜಿ WFI ಮುಖ್ಯಸ್ಥ ಬ್ರಿಜ್ ಭೂಷಣ್ ಸಿಂಗ್ ಅಥವಾ ಅವರ ಕುಟುಂಬ ಸದಸ್ಯರು WFI ನ ಭಾಗವಾಗಿರಲು ಸಾಧ್ಯವಿಲ್ಲ.
4. ಕಳೆದ ತಿಂಗಳು ಭಾರತದ ಹೊಸ ಸಂಸತ್ತಿನ ಕಟ್ಟಡವನ್ನು ಉದ್ಘಾಟಿಸಿದ ದಿನದಂದು ಕುಸ್ತಿಪಟುಗಳು ನಡೆಸಿದ ಪ್ರತಿಭಟನೆಯ ಸಂಬಂಧ ತಮ್ಮ ವಿರುದ್ಧದ ಪೊಲೀಸ್ ಎಫ್‌ಐಆರ್‌ಗಳನ್ನು ರದ್ದುಗೊಳಿಸಬೇಕು
5. ಬ್ರಿಜ್ ಭೂಷಣ್ ಸಿಂಗ್ ಬಂಧನಕ್ಕೆ ತಮ್ಮ ಬೇಡಿಕೆಯನ್ನು ಪುನರುಚ್ಚರಿಸಿದ್ದಾರೆ.

ಆದರೆ, ಡಬ್ಲ್ಯುಎಫ್‌ಐ ಕಾರ್ಯದಲ್ಲಿ ಸರ್ಕಾರ ಹಸ್ತಕ್ಷೇಪ ಮಾಡಬಹುದೇ ಅಥವಾ ಸಂವಿಧಾನದಲ್ಲಿ ಬದಲಾವಣೆಯಾಗಬಹುದೇ ಎಂಬ ಪ್ರಶ್ನೆ ಈಗ ಉದ್ಭವಿಸಿದೆ.

ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ ದಿನದ ನಂತರ ಪ್ರತಿಭಟನಾನಿರತ ಕುಸ್ತಿಪಟುಗಳನ್ನು ಸರ್ಕಾರ ಎರಡನೇ ಬಾರಿಗೆ ಮಾತುಕತೆಗೆ ಆಹ್ವಾನಿಸಿದೆ.

ಜನವರಿಯಲ್ಲಿ, ಕುಸ್ತಿಪಟುಗಳು ಅನುರಾಗ್ ಠಾಕೂರ್ ಅವರನ್ನು ಅವರ ನಿವಾಸದಲ್ಲಿ ಭೇಟಿಯಾದರು ಮತ್ತು ಸಮಿತಿಯನ್ನು ರಚಿಸಿದ ನಂತರ ತಮ್ಮ ಪ್ರತಿಭಟನೆಯನ್ನು ಹಿಂತೆಗೆದುಕೊಂಡರು. ಆ ಸಮಯದಲ್ಲಿ, ಮಾಜಿ ಕುಸ್ತಿಪಟು ಮತ್ತು ಬಿಜೆಪಿ ನಾಯಕಿ ಬಬಿತಾ ಫೋಗಟ್ ಮಧ್ಯವರ್ತಿ ಪಾತ್ರವನ್ನು ನಿರ್ವಹಿಸಿದರು.

ಇದಕ್ಕೂ ಮುನ್ನ ಬುಧವಾರ ಐಎಎನ್‌ಎಸ್‌ನೊಂದಿಗೆ ಮಾತನಾಡಿದ ಸಾಕ್ಷಿ ಮಲಿಕ್, 'ನಾವು ಎಲ್ಲ ವಿಚಾರದಲ್ಲೂ ಪಾರದರ್ಶಕವಾಗಿದ್ದೇವೆ. ಮುಚ್ಚಿದ ಬಾಗಿಲಿನ ಹಿಂದೆ ನಾವು ಯಾವುದೇ ನಿರ್ಧಾರ ತೆಗೆದುಕೊಳ್ಳುವುದಿಲ್ಲ. ನಾವು ನಮ್ಮ ವರಿಷ್ಠರು ಮತ್ತು ಬೆಂಬಲಿಗರೊಂದಿಗೆ ಸರ್ಕಾರ ನೀಡಿದ ಪ್ರಸ್ತಾವನೆಯನ್ನು ಚರ್ಚಿಸುತ್ತೇವೆ ಮತ್ತು ಈ ಪ್ರಸ್ತಾವನೆಗೆ ಎಲ್ಲರೂ ಒಪ್ಪಿಗೆ ನೀಡಿದರೆ ಮಾತ್ರ ನಾವು ಒಪ್ಪುತ್ತೇವೆ' ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

SCROLL FOR NEXT